AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snehith Gowda: ‘ಹೀಗಾದ್ರೆ ನಾನು ಬಿಗ್ ಬಾಸ್ ನೋಡಲ್ಲ’; ನೇರವಾಗಿ ಹೇಳಿದ ಸ್ನೇಹಿತ್ ಗೌಡ

ಸ್ನೇಹಿತ್ ಗೌಡ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿವೆ. ಅವರಿಗೆ ನಿಕ್​ನೇಮ್​ ಕೂಡ ಇಡಲಾಗಿದೆ. ಈ ಎಲ್ಲಾ ವಿಚಾರಗಳು ಹೊರ ಬಂದ ಬಳಿಕ ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಿಲ್ಲ

Snehith Gowda: ‘ಹೀಗಾದ್ರೆ ನಾನು ಬಿಗ್ ಬಾಸ್ ನೋಡಲ್ಲ’; ನೇರವಾಗಿ ಹೇಳಿದ ಸ್ನೇಹಿತ್ ಗೌಡ
ಸ್ನೇಹಿತ್
ರಾಜೇಶ್ ದುಗ್ಗುಮನೆ
|

Updated on: Dec 14, 2023 | 7:24 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ನಿಂದ ಸ್ನೇಹಿತ್ ಗೌಡ ಅವರು ಕಳೆದ ವಾರ ಔಟ್ ಆಗಿದ್ದಾರೆ. ಅವರು ಮನೆಯಿಂದ ಹೋದ ಬಗ್ಗೆ ನಮ್ರತಾ ಗೌಡ (Namratha Gowda) , ವಿನಯ್​ ಗೌಡಗೆ ಬೇಸರ ಇದೆ. ಈಗ ಸ್ನೇಹಿತ್ ಗೌಡ ಅವರು ಹೊರ ಪ್ರಪಂಚಕ್ಕೆ ಬಂದ ಬಳಿಕ ಮತ್ತೆ ಡಯಟ್ ಶುರು ಮಾಡಿದ್ದಾರೆ. ಜಿಮ್​ಗೆ ಮರಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಮಾಹಿತಿ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​​ನಲ್ಲಿ ಲೈವ್ ಬಂದಿದ್ದರು. ಈ ವೇಳೆ ಅವರು ಕೆಲವು ವಿಚಾರ ಹಂಚಿಕೊಂಡಿದ್ದಾರೆ.

ಹೀಗಾದ್ರೆ ಬಿಗ್ ಬಾಸ್ ನೋಡಲ್ಲ..

‘ನೀವು ನಿತ್ಯ ಬಿಗ್ ಬಾಸ್ ನೋಡ್ತಾ ಇದೀರಾ’ ಎಂದು ಕೆಲವರು ಕೇಳಿದರು. ಇದಕ್ಕೆ ಹೌದು ಎನ್ನುವ ಉತ್ತರ ಕೊಟ್ಟಿದ್ದಾರೆ ಸ್ನೇಹಿತ್. ‘ನನ್ನ ಮೂವರು ಗೆಳೆಯರು (ನಮ್ರತಾ, ವಿನಯ್, ಮೈಕಲ್) ಬಿಗ್ ಬಾಸ್ ಮನೆಯಲ್ಲಿ ಇನ್ನೂ ಆಟ ಆಡುತ್ತಿದ್ದಾರೆ. ಅವರು ಎಲ್ಲಿಯವರೆಗೆ ಬಿಗ್ ಬಾಸ್​ ಮನೆಯಲ್ಲಿ ಇರ್ತಾರೋ ಅಲ್ಲಿಯವರೆಗೆ ಬಿಗ್ ಬಾಸ್ ನೋಡ್ತೀನಿ. ಅವರು ಹೊರ ಬಂದ ಬಳಿಕ ಬಿಗ್ ಬಾಸ್ ನೋಡೋದನ್ನು ನಿಲ್ಲಿಸುತ್ತೇನೆ’ ಎಂದಿದ್ದಾರೆ ಸ್ನೇಹಿತ್.

ಟ್ರೋಲ್ ಭಯ

ಸ್ನೇಹಿತ್ ಗೌಡ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿವೆ. ಅವರಿಗೆ ನಿಕ್​ನೇಮ್​ ಕೂಡ ಇಡಲಾಗಿದೆ. ಈ ಎಲ್ಲಾ ವಿಚಾರಗಳು ಹೊರ ಬಂದ ಬಳಿಕ ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಿಲ್ಲ. ಟ್ರೋಲ್ ಬಗ್ಗೆ ಅವರು ಮಾತನಾಡಿದ್ದಾರೆ. ‘ಬಿಗ್​ ಬಾಸ್​ನಿಂದ ಹೊರ ಬಂದಾಗ ಆರಂಭದಲ್ಲಿ ಟ್ರೋಲ್ ನೋಡಿ ಭಯ ಆಯ್ತು. ಈಗ ಆ ಭಯ ಇಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಸಖತ್ ಹರ್ಟ್​ ಮಾಡಿದ್ದೇನೆ’; ಸ್ನೇಹಿತ್​ನ ನೆನೆದು ಕಣ್ಣೀರು ಹಾಕಿದ ನಮ್ರತಾ ಗೌಡ

ಬೇರೆಯವರನ್ನು ಸೇವ್ ಮಾಡಿದ್ರಿ..

ಸ್ನೇಹಿತ್ ಬೇರೆಯವರಿಗೋಸ್ಕರ ಆಟ ಆಡಿದ್ದಾರೆ. ಅವರು ಪ್ರಯತ್ನ ಹಾಕಿದ್ದರೆ ಇನ್ನೂ ಕೆಲವು ದಿನ ಇರಬಹುದಿತ್ತು ಎನ್ನುವ ಕಮೆಂಟ್​ಗಳು ಬಂದಿವೆ. ಆದರೆ, ಇದನ್ನು ಸ್ನೇಹಿತ್ ಗೌಡ ಒಪ್ಪಿಲ್ಲ. ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದೂ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ