AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಕನ್ನಡ: ನಾಮಿನೇಟ್ ಆದ ಸ್ಪಂದನಾ; ಈ ವಾರವಾದ್ರೂ ಎಲಿಮಿನೇಟ್ ಆಗ್ತಾರಾ?

ಸ್ಪಂದನಾ ಸೋಮಣ್ಣ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ನಾಮಿನೇಟ್ ಆಗಿದ್ದಾರೆ. ಅವರ ಜೊತೆ ಅಶ್ವಿನಿ ಗೌಡ, ಧ್ರುವಂತ್, ಧನುಶ್, ರಾಶಿಕಾ ಶೆಟ್ಟಿ ಅವರನ್ನು ನಾಮಿನೇಟ್ ಮಾಡಲಾಗಿದೆ. ಈ ವಾರ ಅವರ ಭವಿಷ್ಯ ಏನಾಗಲಿದೆ ಎಂಬುದನ್ನು ನೋಡಲು ವೀಕ್ಷಕರಲ್ಲಿ ಕುತೂಹಲ ಹೆಚ್ಚಾಗಿದೆ.

ಬಿಗ್ ಬಾಸ್ ಕನ್ನಡ: ನಾಮಿನೇಟ್ ಆದ ಸ್ಪಂದನಾ; ಈ ವಾರವಾದ್ರೂ ಎಲಿಮಿನೇಟ್ ಆಗ್ತಾರಾ?
Spandana Somanna
ಮದನ್​ ಕುಮಾರ್​
|

Updated on: Dec 30, 2025 | 10:42 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಆಟದಲ್ಲಿ ಸ್ಪಂದನಾ ಸೋಮಣ್ಣ ಅವರು 14ನೇ ವಾರದ ತನಕ ಪೈಪೋಟಿ ನೀಡುತ್ತಾ ಬಂದಿದ್ದಾರೆ. ಆದರೆ ಅವರು ಈ ಮೊದಲೇ ಎಲಿಮಿನೇಟ್ ಆಗಬೇಕಿತ್ತು ಎಂಬ ಅಭಿಪ್ರಾಯ ಅನೇಕರಿಗೆ ಇದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ನೆಟ್ಟಿಗರು ಚರ್ಚೆ ಮಾಡಿದ್ದಾರೆ. ಅಲ್ಲದೇ ಬಿಗ್ ಬಾಸ್ ಮನೆ ಒಳಗಿನ ಸ್ಪರ್ಧಿಗಳು ಕೂಡ ಈ ಕುರಿತು ಮಾತನಾಡಿದ್ದಾರೆ. ಈ ವಾರ ಸ್ಪಂದನಾ ಸೋಮಣ್ಣ (Spandana Somanna) ನಾಮಿನೇಟ್ ಆಗಿದ್ದಾರೆ. ಈ ಬಾರಿಯಾದರೂ ಅವರು ಎಲಿಮಿನೇಟ್ ಆಗುತ್ತಾರಾ ಅಥವಾ ಫಿನಾಲೆಗೆ ಎಂಟ್ರಿ ನೀಡುತ್ತಾರಾ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಬೇರೆ ಸ್ಪರ್ಧಿಗಳಿಗೆ ಹೋಲಿಸಿದರೆ ಸ್ಪಂದನಾ ಸೋಮಣ್ಣ ಅವರು ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಮೊದಲ ವಾರದಿಂದ 14ನೇ ವಾರದ ತನಕ ಅವರ ಆಟದಲ್ಲಿ ಹೆಚ್ಚಿನ ಬದಲಾವಣೆ ಕಾಣಿಸಿಲ್ಲ. ಆ ಕಾರಣದಿಂದ ಬಹುತೇಕ ಸಂದರ್ಭಗಳಲ್ಲಿ ಅವರನ್ನು ನಾಮಿನೇಟ್ ಮಾಡಲಾಗಿದೆ. ಆದರೂ ಕೂಡ ಅವರು ಪ್ರತಿ ವಾರ ಸೇಫ್ ಆಗಿದ್ದು ಕಂಡು ಬಹುತೇಕರಿಗೆ ಅಚ್ಚರಿ ಆಗಿದ್ದುಂಟು.

ಈ ವಾರ 5 ಜನರು ನಾಮಿನೇಟ್ ಆಗಿದ್ದಾರೆ. ಸ್ಪಂದನಾ ಸೋಮಣ್ಣ, ಅಶ್ವಿನಿ ಗೌಡ, ರಾಶಿಕಾ ಶೆಟ್ಟಿ, ಧ್ರುವಂತ್ ಮತ್ತು ಧನುಶ್ ಅವರನ್ನು ನಾಮಿನೇಟ್ ಮಾಡಲಾಗಿದೆ. ಇಷ್ಟು ಜನರ ಪೈಕಿ ಸ್ಪಂದನಾ ಅವರೇ ವೀಕ್ ಸ್ಪರ್ಧಿ ಎಂಬುದು ಹಲವರ ಅನಿಸಿಕೆ. ಹಾಗಾಗಿ ಅವರು ಎಲಿಮಿನೇಟ್ ಆಗಬಹುದು ಎಂಬ ನಿರೀಕ್ಷೆ ಇದೆ. ಏನಾಗುತ್ತದೆ ಎಂಬುದನ್ನು ತಿಳಿಯಲು ವೀಕೆಂಡ್ ಸಂಚಿಕೆಗಾಗಿ ಕಾಯಬೇಕು.

ಕ್ಯಾಪ್ಟನ್ ಆಗಿರುವ ಗಿಲ್ಲಿ ನಟ ಅವರು ಈ ವಾರ ಸೇಫ್ ಆಗಿದ್ದು ಮಾತ್ರವಲ್ಲದೇ ಮುಂದಿನ ವಾರದ ಕ್ಯಾಪ್ಟೆನ್ಸಿ ಓಟಕ್ಕೆ ಅರ್ಹತೆ ಕೂಡ ಪಡೆದಿದ್ದಾರೆ. ಅವರ ಜೊತೆ ಅಶ್ವಿನಿ ಗೌಡ ಅವರಿಗೂ ಅರ್ಹತೆ ಸಿಕ್ಕಿತು. ಇನ್ನುಳಿದವರು ಅರ್ಹತೆ ಪಡೆಯಲು ಸೆಣೆಸಾಡುತ್ತಿದ್ದಾರೆ. ಮುಂದಿನ ವಾರ ಕ್ಯಾಪ್ಟನ್ ಆಗುವವರು ನೇರವಾಗಿ ಫಿನಾಲೆ ವಾರಕ್ಕೆ ಎಂಟ್ರಿ ಪಡೆಯಲಿದ್ದಾರೆ.

ಇದನ್ನೂ ಓದಿ: ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು

ಇನ್ನು ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಬರಲಿದೆ. ಯಾರು ಫಿನಾಲೆಗೆ ಹೋಗುತ್ತಾರೆ? ಯಾರಿಗೆ ಬಿಗ್ ಬಾಸ್ ಟ್ರೋಫಿ ಸಿಗಲಿದೆ ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಗಿಲ್ಲಿ ನಟ ಅವರು ಸ್ಟ್ರಾಂಗ್ ಸ್ಪರ್ಧಿ ಆಗಿದ್ದಾರೆ. ಅವರೇ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ವೀಕ್ಷಕರಿಂದ ಕೇಳಿಬರುತ್ತಿದೆ. ಬಹುತೇಕರಿಗೆ ಗಿಲ್ಲಿ ಫೇವರಿಟ್ ಸ್ಪರ್ಧಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.