AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮದುವೆಯಾಗುತ್ತಿರುವ ಹುಡುಗ ಸೂರಜ್ ಅಲ್ಲ; ವದಂತಿಗೆ ಬ್ರೇಕ್ ಹಾಕಿದ ನಟಿ ಸ್ಪಂದನಾ ಸೋಮಣ್ಣ

ತಮ್ಮ ಭಾವಿ ಪತಿಯ ಮುಖ ರಿವೀಲ್ ಮಾಡದೆ ಫೋಟೋ ಹಂಚಿಕೊಂಡಿದ್ದ ನಟಿ ಸ್ಪಂದನಾ ಸೋಮಣ್ಣ, ತಾವು ಮದುವೆಯಾಗುತ್ತಿರುವ ಹುಡುಗ ಸೂರಜ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತಮ್ಮ ಮದುವೆ, ನಿಶ್ಚಿತಾರ್ಥ ಹಾಗೂ ಶಾಪಿಂಗ್ ಕುರಿತ ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲೇ ಯೂಟ್ಯೂಬ್ ಚಾನೆಲ್ ಮೂಲಕ ಹಂಚಿಕೊಳ್ಳುವುದಾಗಿ ತಿಳಿಸಿ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ನಾನು ಮದುವೆಯಾಗುತ್ತಿರುವ ಹುಡುಗ ಸೂರಜ್ ಅಲ್ಲ; ವದಂತಿಗೆ ಬ್ರೇಕ್ ಹಾಕಿದ ನಟಿ ಸ್ಪಂದನಾ ಸೋಮಣ್ಣ
ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on:Sep 22, 2026 | 10:55 AM

Share

ಮುಖ್ಯಾಂಶಗಳು

  • ವದಂತಿಗಳಿಗೆ ಬ್ರೇಕ್ ಹಾಕಿದ ನಟಿ ಸ್ಪಂದನಾ ಸೋಮಣ್ಣ
  • ಸೂರಜ್ ಅಲ್ಲ ನನ್ನ ಭಾವಿ ಪತಿ: ಸ್ಪಂದನಾ ಸ್ಪಷ್ಟನೆ
  • ಯೂಟ್ಯೂಬ್‌ನಲ್ಲೇ ಸಿಗಲಿದೆ ಮದುವೆಯ ಕಂಪ್ಲೀಟ್ ಅಪ್‌ಡೇಟ್

ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಸ್ಪಂದನಾ ಸೋಮಣ್ಣ ತಮ್ಮ ಮದುವೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಕೊನೆಗೂ ತೆರೆ ಎಳೆದಿದ್ದಾರೆ. ತಾವು ಮದುವೆಯಾಗಲಿರುವ ಹುಡುಗನ ಜೊತೆಗಿನ ಫೋಟೋ ಹಂಚಿಕೊಂಡಿದ್ದ ಸ್ಪಂದನಾ, ಅವರ ಮುಖವನ್ನು ಗೌಪ್ಯವಾಗಿಟ್ಟಿದ್ದರು. ಇದರಿಂದಾಗಿ, ಅವರು ಮದುವೆಯಾಗಲಿರುವ ವ್ಯಕ್ತಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೂರಜ್ ಇರಬಹುದು ಎಂದು ಅಭಿಮಾನಿಗಳು ಹಾಗೂ ನೆಟ್ಟಿಗರು ಊಹಿಸಿ, ಸೂರಜ್ ಅವರ ಫೋಟೋಗಳನ್ನು ಎಡಿಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದರು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

ಸ್ಪಂದನಾ ಅವರು ಪ್ಯಾರಿಸ್​ಗೆ ತೆರಳಿದ್ದರು. ಅಲ್ಲಿನ ಐಫೆಲ್ ಟವರ್ ಎದುರು ಅವರು ಪೋಸ್ ಕೊಟ್ಟಿದ್ದರು. ಅವರ ಬಾಯ್​ಫ್ರೆಂಡ್ ಬೆನ್ನು ಮಾತ್ರ ಕಾಣಿಸಿತ್ತು. ಹೀಗಾಗಿ, ಅಭಿಮಾನಿಗಳು ಬೇರೆ ಬೇರೆ ಸೆಲೆಬ್ರಿಟಿಗಳ ಹೆಸರನ್ನು ಹೇಳಿದ್ದರು. ಆದರೆ, ಅವರ್ಯಾರೂ ಅಲ್ಲ ಎನ್ನುತ್ತಾರೆ ಸ್ಪಂದನಾ. ಈ ವಿಷಯವನ್ನು ಅವರು ಶೀಘ್ರವೇ ರಿವೀಲ್ ಮಾಡಲಿದ್ದಾರಂತೆ.

ಈ ಕುರಿತು ವಿಡಿಯೋ ಹಂಚಿಕೊಳ್ಳುವ ಮೂಲಕ ಸ್ವತಃ ಸ್ಪಂದನಾ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ಪಾಪ ಸೂರಜ್ ಅವರ ಫೋಟೋ ಎಡಿಟ್ ಮಾಡಿ ಅವರಿಗೆ ಸಾಕಷ್ಟು ಕಿರಿಕಿರಿ ಉಂಟುಮಾಡಿದ್ದೀರಿ. ಆದರೆ ತಾವು ಮದುವೆಯಾಗುತ್ತಿರುವುದು ಸೂರಜ್ ಅವರನ್ನಂತೂ ಅಲ್ಲ’ ಎಂದು ನಗುತ್ತಲೇ ಖಚಿತಪಡಿಸಿದ್ದಾರೆ. ಅಲ್ಲದೆ, ಅನೇಕರು ಬೇರೆ ಬೇರೆ ಹುಡುಗರನ್ನು ಟ್ಯಾಗ್ ಮಾಡುತ್ತಿದ್ದು, ಅವರ್ಯಾರೂ ಅಲ್ಲ ಎಂದು ವದಂತಿಗಳನ್ನು ಅಲ್ಲಗೆಳೆದಿದ್ದಾರೆ.

ಇದನ್ನೂ ಓದಿ: ಐಶಾರಾಮಿ ಕಾರು ಖರೀದಿಸಿದ ನಟಿ ಸ್ಪಂದನಾ ಸೋಮಣ್ಣ: ವಿಡಿಯೋ ನೋಡಿ

ತಮ್ಮ ಮದುವೆ, ನಿಶ್ಚಿತಾರ್ಥದ ದಿನಾಂಕಗಳು, ಶಾಪಿಂಗ್ ಹಾಗೂ ಭಾವಿ ಪತಿಯ ಪರಿಚಯ ಸೇರಿದಂತೆ ಪ್ರತಿಯೊಂದು ವಿಶೇಷ ಕ್ಷಣಗಳನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲೇ ಹಂಚಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಕೊನೆಯಲ್ಲಿ, ಶೀಘ್ರದಲ್ಲೇ ಮದುವೆ ಆಗುತ್ತಿರುವುದಕ್ಕೆ ಅತ್ಯಂತ ಸಂತಸ ವ್ಯಕ್ತಪಡಿಸಿರುವ ಸ್ಪಂದನಾ ಸೋಮಣ್ಣ, ತಮ್ಮ ಈ ಹೊಸ ಜೀವನದ ಪ್ರಯಾಣಕ್ಕೆ ಬೆಂಬಲವಾಗಿ ನಿಲ್ಲಿ ಎಂದು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:54 am, Tue, 22 September 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್