AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ದೈವಿಕ ಸಂಭ್ರಮ: ‘ಶ್ರೀ ರಾಘವೇಂದ್ರ ಮಹಾತ್ಮೆ’ಯಲ್ಲಿ ವೆಂಕಟನಾಥರ ಸನ್ಯಾಸ ದೀಕ್ಷೆ ಸಂಭ್ರಮ

ಜೀ ಕನ್ನಡದ 'ಶ್ರೀ ರಾಘವೇಂದ್ರ ಮಹಾತ್ಮೆ' ಧಾರಾವಾಹಿ ರಾಯರ ಪವಿತ್ರ ಜೀವನ ಚರಿತ್ರೆಯನ್ನು ತೆರೆಮೇಲೆ ತರುತ್ತಿದೆ. ಶಂಕುಕರ್ಣನಿಂದ ವೆಂಕಟನಾಥರಾಗಿ ಸನ್ಯಾಸತ್ವ ಸ್ವೀಕರಿಸಿ 'ಶ್ರೀ ರಾಘವೇಂದ್ರ ತೀರ್ಥರು' ಆಗುವ ರೋಚಕ ಕಥೆ ಪ್ರೇಕ್ಷಕರ ಮನ ಗೆದ್ದಿದೆ. ಇತ್ತೀಚೆಗೆ, ಭತ್ತ ಶುದ್ಧೀಕರಣ ಪವಾಡ ಮತ್ತು ವೆಂಕಟನಾಥರ ಸನ್ಯಾಸ ದೀಕ್ಷೆಯ ಭಾವುಕ ಕ್ಷಣಗಳು ಪ್ರಸಾರವಾಗಿ ವೀಕ್ಷಕರ ಮೆಚ್ಚುಗೆ ಗಳಿಸಿವೆ.

ಜೀ ಕನ್ನಡದಲ್ಲಿ ದೈವಿಕ ಸಂಭ್ರಮ: 'ಶ್ರೀ ರಾಘವೇಂದ್ರ ಮಹಾತ್ಮೆ'ಯಲ್ಲಿ ವೆಂಕಟನಾಥರ ಸನ್ಯಾಸ ದೀಕ್ಷೆ ಸಂಭ್ರಮ
ರಾಘವೇಂದ್ರ ಮಹಾತ್ಮೆ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 13, 2026 | 7:23 AM

Share

ಜೀ ಕನ್ನಡ ವಾಹಿನಿಯಲ್ಲಿ (Zee Kannada) ವಿವಿಧ ರೀತಿಯ ಧಾರಾವಾಹಿಗಳು ಪ್ರಸಾರ ಕಾಣುತ್ತಿರುವುದು ಗೊತ್ತೇ ಇದೆ. ಪಕ್ಕಾ ಫ್ಯಾಮಿಲಿ ಡ್ರಾಮಾಗಳು ಒಂದು ಕಡೆ ಆದರೆ, ಮಾಟ-ಮಂತ್ರದ ಕಥೆ ಮತ್ತೊಂದು ಕಡೆ. ಇದರ ಜೊತೆಗೆ ದೇವರ ಕುರಿತಾದ ಧಾರಾವಾಹಿಗಳು ಕೂಡ ಪ್ರಸಾರ ಕಾಣುತ್ತಿವೆ. ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿ ಎಲ್ಲರ ಮನ ಗೆದ್ದಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಾಯರ ಪವಿತ್ರ ಜೀವನ ಚರಿತ್ರೆಯನ್ನು ತೆರೆಮೇಲೆ ತಂದಿರುವ ಈ ಸರಣಿಗೆ ಕಿರುತೆರೆ ವೀಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ರಾಯರ ಕಥೆಯು ಶಂಕುಕರ್ಣನ ಜನ್ಮ ರಹಸ್ಯದಿಂದ ಆರಂಭವಾಗಿ ಪ್ರಹ್ಲಾದ, ಬಾಹ್ಲೀಕ ಹಾಗೂ ವ್ಯಾಸರಾಯರ ಅವತಾರಗಳ ನಂತರ, ನಾಲ್ಕನೇ ಜನ್ಮದಲ್ಲಿ ವೆಂಕಟನಾಥರಾಗಿ ರಾಯರು ಧರೆಗೆ ಬಂದ ರೋಚಕ ಕಥಾಹಂದರ ವೀಕ್ಷಕರನ್ನು ಹಿಡಿದಿಟ್ಟುಕೊಂಡಿದೆ. ಇತ್ತೀಚೆಗಷ್ಟೇ ಪ್ರಸಾರವಾದ, ರೈತರ ಬಳಿಯಿದ್ದ ಹುಳು ಹಿಡಿದ ಭತ್ತದ ಮೂಟೆಗಳನ್ನು ಮಂತ್ರಾಕ್ಷತೆಯ ಮಹಿಮೆಯಿಂದ ರಾಯರು ಶುದ್ಧೀಕರಿಸಿದ ಪವಾಡದ ದೃಶ್ಯಗಳು ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದ್ದವು. ಇದರ ಬೆನ್ನಲ್ಲೇ, ಸಂಸಾರದ ಬಂಧನದಲ್ಲಿದ್ದ ವೆಂಕಟನಾಥರು ಸನ್ಯಾಸತ್ವದ ಹಾದಿ ಹಿಡಿಯುವಾಗ ಪತ್ನಿ ಸರಸ್ವತಿ ಅನುಭವಿಸುವ ತಳಮಳ ಮತ್ತು ಭಾವುಕ ಕ್ಷಣಗಳು ಪ್ರೇಕ್ಷಕರ ಕಣ್ಣಾಲಿಗಳನ್ನು ಒದ್ದೆಯಾಗಿಸಿವೆ.

ಇದನ್ನೂ ಓದಿ: ಜೀ ಕನ್ನಡದಲ್ಲಿ ಬರ್ತಿದೆ ‘ಸರಿಗಮಪ ಲಿಟ್ಲ್​ ಚಾಂಪ್ಸ್’; ಈ ಬಾರಿಯ ವಿಶೇಷತೆ ಏನು?

ತಂಜಾವೂರಿನ ರಾಜ ರಘುನಾಥ ಭೂಪಾಲನ ಸಮ್ಮುಖದಲ್ಲಿ, ಪರಮಪೂಜ್ಯ ಗುರು ಸುಧೀಂದ್ರ ತೀರ್ಥರು ವೆಂಕಟನಾಥರಿಗೆ ಸನ್ಯಾಸ ದೀಕ್ಷೆ ಕರುಣಿಸಿ, ‘ಶ್ರೀ ರಾಘವೇಂದ್ರ ತೀರ್ಥರು’ ಎಂದು ನಾಮಕರಣ ಮಾಡುವ ಆ ದಿವ್ಯ ಪೀಠಾರೋಹಣದ ಕ್ಷಣಗಳು ಈ ವಾರಾಂತ್ಯದಲ್ಲಿ ಪ್ರಸಾರವಾಗಲಿವೆ. ಭಕ್ತಿ ಮತ್ತು ವೈರಾಗ್ಯದ ಮೂರ್ತಿರೂಪದಂತಿರುವ ರಾಯರ ಈ ಪಾತ್ರದಲ್ಲಿ ನಟ ಪರೀಕ್ಷಿತ್ ಅದ್ಭುತವಾಗಿ ನಟಿಸಿದ್ದಾರೆ.

View this post on Instagram

A post shared by Zee Kannada (@zeekannada)

‘ಶ್ರೀ ರಾಘವೇಂದ್ರ ಮಹಾತ್ಮೆ’ ಈಗಾಗಲೇ ಕಿರುತೆರೆ ವೀಕ್ಷಕರನ್ನು ಸಾಕಷ್ಟು ಗಮನ ಸೆಳೆದಿದೆ. ಈಗ ಈ ಸಂಚಿಕೆಯನ್ನು ನೋಡಲು ಕಿರುತೆರೆ ವೀಕ್ಷಕರು ಕಾದಿದ್ದಾರೆ.  ಶನಿವಾರ ಮತ್ತು ಭಾನುವಾರ ಸಂಜೆ 6 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:22 am, Sat, 13 June 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್