ಶುರುವಾಗ್ತಿದೆ ಬೆಂಕಿ ಜೊತೆ ಬಿರುಗಾಳಿಯ ಪ್ರೀತಿ ಕಥೆ ‘ಗೌರಿಶಂಕರ’; ಇದೇ ಸೋಮವಾರದಿಂದ ರಾತ್ರಿ 7 ಗಂಟೆಗೆ

ಕನ್ನಡ ಕಿರುತೆರೆಯಲ್ಲಿ ‘ಸ್ಟಾರ್ ಸುವರ್ಣ’ ವಾಹಿನಿಯು ವಿಭಿನ್ನ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಈ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಕಾರ್ಯಕ್ರಮಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಈ ಸಾಲಿಗೆ ಸೇರ್ಪಡೆ ಆಗುತ್ತಿರುವ ಹೊಸ ಕಥೆ ‘ಗೌರಿಶಂಕರ’.

ಶುರುವಾಗ್ತಿದೆ ಬೆಂಕಿ ಜೊತೆ ಬಿರುಗಾಳಿಯ ಪ್ರೀತಿ ಕಥೆ ‘ಗೌರಿಶಂಕರ’; ಇದೇ ಸೋಮವಾರದಿಂದ ರಾತ್ರಿ 7 ಗಂಟೆಗೆ
ಗೌರಿಶಂಕರ ಧಾರಾವಾಹಿ

Updated on: Nov 11, 2023 | 12:58 PM

ಕನ್ನಡ ಕಿರುತೆರೆಯಲ್ಲಿ ‘ಸ್ಟಾರ್ ಸುವರ್ಣ’ (Star Suvarna) ವಾಹಿನಿಯು ವಿಭಿನ್ನ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಈ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಎಲ್ಲಾ ಕಾರ್ಯಕ್ರಮಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿವೆ. ಅವುಗಳ ಸಾಲಿಗೆ ಸೇರ್ಪಡೆ ಆಗುತ್ತಿರುವ ಹೊಸ ಕಥೆ ‘ಗೌರಿಶಂಕರ’ (Gowri Shankara). ಕರ್ನಾಟಕದ ಸುಂದರ ತಾಣ, ಹಾಸನಾಂಬೆಯ ತವರೂರಾದ ಹಾಸನದಲ್ಲಿ ಈ ಕತೆಯು ಕೇಂದ್ರೀಕೃತವಾಗಿರುತ್ತದೆ. ಎರಡು ಡಿಫರೆಂಟ್​ ಕುಟುಂಬಗಳ ನಡುವಿನ ಕಥೆ ಹೊಂದಿರುವ ಈ ಹೊಸ ಸೀರಿಯಲ್​ (New Kannada Serial) ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

‘ಗೌರಿಶಂಕರ’ ಧಾರಾವಾಹಿಯ ನಾಯಕಿ ಗೌರಿ. ಸಮಾಜದಲ್ಲಿ ಘನತೆ ಗೌರವವನ್ನು ಹೊಂದಿರುವ ಪರಿವಾರದಲ್ಲಿ ಬೆಳೆದಿರುವ ಈಕೆ ಯಾರನ್ನೂ ನೋಯಿಸದ ಮುಗ್ದ ಮನಸ್ಸಿನ ಕಣ್ಮಣಿ. ಆದರೆ ಸಮಯ ಬಂದರೆ ತನ್ನ ನಿಲುವನ್ನು ಸ್ಪಷ್ಟವಾಗಿ ಮಾತನಾಡಬಲ್ಲ ಧೈರ್ಯವಂತೆ ಕೂಡ ಹೌದು. ಜೊತೆಗೆ ತಂದೆಯಂತೆ ತಾನು ಪ್ರೊಫೆಸರ್ ಆಗಬೇಕೆಂಬ ಕನಸನ್ನು ಹೊತ್ತಿರುವವಳು. ಇನ್ನು ಕಥಾನಾಯಕ ಶಂಕರ ಅಲಿಯಾಸ್ ಜೋಗಿಯ ಮನಸ್ಥಿತಿ ಬೇರೆ. ಹೆಣ್ಣು ಮಕ್ಕಳು ಅಂದ್ರೆ ನಾಲ್ಕು ಗೋಡೆಯ ಮಧ್ಯೆ ಇರಬೇಕು ಅಂತ ನಂಬಿರುವ ಮನೆತನದಲ್ಲಿ ಬೆಳೆದವನು. ಈತ ನೋಡೋಕೆ ರಫ್‌ ಆದರೂ ಮಗುವಿನಂತ ಮನಸ್ಸು. ತನಗನಿಸಿದ್ದನ್ನು ಮಾಡಲೇಬೇಕು ಎನ್ನುವ ಹಠವಾದಿ.

ಒಂದು ಕಡೆ ಶಾಂತಿ, ಸಹನೆ, ತಾಳ್ಮೆಯಿಂದ ಕೂಡಿದ ಗೌರಿ ಪರಿವಾರ. ಮತ್ತೊಂದೆಡೆ ಅಧಿಕಾರ, ದರ್ಪ, ಹಣ ತುಂಬಿರೋ ಶಂಕರನ ಪರಿವಾರ. ಈ ಎರಡೂ ತದ್ವಿರುದ್ಧ ಭಾವಗಳನ್ನು ಹೊಂದಿರುವ ಇವರಿಬ್ಬರ ನಡುವೆ ನಡೆಯುವ ಘರ್ಷಣೆ, ಸಂಧಾನ, ಪ್ರೇಮಾಂಕುರವೇ ಈ ಧಾರಾವಾಹಿಯ ಮುಖ್ಯಕಥಾಹಂದರ. ‘ಗೌರಿಶಂಕರ’ ಧಾರಾವಾಹಿಯಲ್ಲಿ ನಾಯಕನಾಗಿ ಯಶವಂತ್, ನಾಯಕಿಯಾಗಿ ಕೌಸ್ತುಭಮಣಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಕಿರುತೆರೆ ನಟಿ; ಪೊಲೀಸರಿಂದ ತನಿಖೆ

ಈ ಧಾರಾವಾಹಿಯಲ್ಲಿ ಜನಪ್ರಿಯ ಕಲಾವಿದರಾದ ವಿದ್ಯಾಮೂರ್ತಿ, ಮೋಹನ್, ಕೀರ್ತಿ ಭಾನು ಸೇರಿದಂತೆ ಇನ್ನು ಹಲವಾರು ಕಲಾವಿದರು ಅಭಿನಯಿಸುತ್ತಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಬರುತ್ತಿದೆ ಹೊಚ್ಚ ಹೊಸ ಧಾರಾವಾಹಿ ‘ಗೌರಿಶಂಕರ’. ಇದೇ ನವೆಂಬರ್ 13ರ ಸೋಮವಾರದಿಂದ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us