AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂಡವ್ ಗೆಳೆತನಕ್ಕೆ ನೀವು ಅರ್ಹರಲ್ಲ; ಗಗನ್​ಗೆ ನೇರವಾಗಿ ಹೇಳಿದ ಸುದೀಪ್

ಬಿಗ್ ಬಾಸ್ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್ ಅವರು ತಾಂಡವ್ ರಾಮ್ ಹಾಗೂ ಗಗನ್ ಸ್ನೇಹದ ಬಗ್ಗೆ ಗಂಭೀರವಾಗಿ ಮಾತನಾಡಿದ್ದಾರೆ. ಸೌಂದರ್ಯಾ ತಾಂಡವ್ ಅವರನ್ನು ಡಂಬ್ ಎಂದಾಗ ಗಗನ್ ಮೌನವಾಗಿದ್ದರು. ಇದನ್ನು ಒನ್ ವೇ ಫ್ರೆಂಡ್ ಶಿಪ್ ಎಂದು ಕಿಡಿಕಾರುತ್ತಾ ಗಗನ್ ಗೆಳೆತನಕ್ಕೆ  ತಾಂಡವ್ ಅರ್ಹರಲ್ಲ ಎಂದು ಸುದೀಪ್ ನೇರವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಂಡವ್ ಗೆಳೆತನಕ್ಕೆ ನೀವು ಅರ್ಹರಲ್ಲ; ಗಗನ್​ಗೆ ನೇರವಾಗಿ ಹೇಳಿದ ಸುದೀಪ್
ತಾಂಡವ್, ಗಗನ್, ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 25, 2026 | 9:18 AM

Share

ಬಿಗ್ ಬಾಸ್ ಮನೆ ಅಂದ್ರೆ ಅಲ್ಲಿ ಸ್ನೇಹ, ಆಟ, ವಾದ-ವಿವಾದ ಎಲ್ಲವೂ ಸಾಮಾನ್ಯ. ಆದರೆ ವಾರದ ಕತೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ಸುದೀಪ್ ಅವರು ಸ್ಪರ್ಧಿಗಳ ತಪ್ಪುಗಳನ್ನು ಕನ್ನಡಿ ಹಿಡಿದು ತೋರಿಸುವ ರೀತಿ ಮಾತ್ರ ಎಲ್ಲರ ಗಮನ ಸೆಳೆಯುತ್ತದೆ. ಈ ಬಾರಿಯ ವಾರದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್ ಅವರು ತಾಂಡವ್ ರಾಮ್ ಹಾಗೂ ಗಗನ್ ಅವರ ಸ್ನೇಹದ ಬಗ್ಗೆ ನೇರ ಹಾಗೂ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಳೆದ ವಾರದಲ್ಲಿ ಸೌಂದರ್ಯಾ ಅವರು ಗಗನ್ ಜೊತೆ ಮಾತನಾಡುವ ಸಂದರ್ಭದಲ್ಲಿ ತಾಂಡವ್ ರಾಮ್ ಅವರನ್ನು ‘ಡಂಬ್’ ಎಂದು ಕರೆದಿದ್ದರು. ಈ ಮಾತಿಗೆ ಸಂಬಂಧಿಸಿದ ವಿಡಿಯೋ ತುಣುಕನ್ನು ಕಳೆದ ವಾರ ಪ್ರದರ್ಶನ ಮಾಡಲಾಯಿತು. ಈ ವಿಟಿ ನೋಡಿದ ಬಳಿಕ ತಾಂಡವ್ ರಾಮ್ ಅವರಿಗೆ ತೀವ್ರ ಸಿಟ್ಟಾದರೂ ಸಹ, ಆ ಸಂದರ್ಭದಲ್ಲಿ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಸೈಲೆಂಟ್ ಆಗಿ ಉಳಿದುಕೊಂಡಿದ್ದರು.

ಇದು ಒನ್​ ವೇ ಫ್ರೆಂಡ್​​ಶಿಪ್!

ಈ ಎಲ್ಲ ಘಟನೆಯನ್ನು ಪ್ರಸ್ತಾಪಿಸಿದ ಸುದೀಪ್, ಮನೆಯಲ್ಲಿ ನಡೆಯುತ್ತಿರುವ ಸ್ನೇಹದ ಸಮೀಕರಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಗಗನ್ ಕಡೆ ತಿರುಗಿ ಮಾತನಾಡಿದ ಅವರು, ಸೌಂದರ್ಯಾ ಆ ರೀತಿ ಮಾತನಾಡಿದಾಗ ಗಗನ್ ನೀವು ಅಲ್ಲಿ ಮಾತನಾಡಬೇಕಿತ್ತು ಎಂದು ತರಾಟೆಗೆ ತೆಗೆದುಕೊಂಡರು.

ಅಲ್ಲದೆ, ತಾಂಡವ್ ರಾಮ್ ಅವರ ಸ್ನೇಹದ ಬಗ್ಗೆ ಮಾತನಾಡುತ್ತಾ ಗಗನ್ ಅವರಿಗೆ ನೇರ ಎಚ್ಚರಿಕೆ ನೀಡಿದ ಸುದೀಪ್, ಗಗನ್, ನೀವು ತಾಂಡವ್ ಗೆಳೆತನಕ್ಕೆ ಅರ್ಹರಲ್ಲ ಎಂದು ಖಡಕ್ ಆಗಿ ಹೇಳಿದರು. ಇದು ಕೇವಲ ಏಕಪಕ್ಷೀಯವಾದ ಸ್ನೇಹ ಎಂಬುದನ್ನು ಸ್ಪಷ್ಟಪಡಿಸುತ್ತಾ, ತಾಂಡವ್ ರಾಮ್‌ಗೆ ಇದು ‘ಒನ್​ ವೇ ಫ್ರೆಂಡ್​​ಶಿಪ್’ ಎಂದು ತಿಳಿಸಿದರು.

ಇದನ್ನೂ ಓದಿ: ತಾಂಡವ್​​ಗೆ ಚಪ್ಪಾಳೆ ನೀಡಿ ಮೂರು ಕಾರಣ ಕೊಟ್ಟ ಕಿಚ್ಚ ಸುದೀಪ್

ಸ್ನೇಹಿತನಿಗೆ ಅಪಮಾನವಾದಾಗ ಮಾತನಾಡದೆ ಮೌನವಾಗಿರುವುದರ ಹಿಂದಿನ ಅರ್ಥವೇನು ಎಂಬುದನ್ನು ಸುದೀಪ್ ಈ ಮೂಲಕ ಸ್ಪರ್ಧಿಗಳಿಗೆ ಅರ್ಥ ಮಾಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:08 pm, Sat, 24 October 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು