ಮಂತ್ರ ಮಾಂಗಲ್ಯ ಮಾಡಿಕೊಂಡ ಸುಹಾನಾ; ನಿತೀನ್ ಜೊತೆ ಹೊಸ ಬಾಳಿಗೆ ಕಾಲಿಟ್ಟ ಸಿಂಗರ್

ಸರಿಗಮಪ ಖ್ಯಾತಿಯ ಸುಹಾನಾ ಸೈಯದ್ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿವಾಹಕ್ಕೆ ಎಲ್ಲರೂ ಅಭಿನಂದಿಸಿದ್ದಾರೆ. ‘ಶ್ರೀಕೃಷ್ಣನೇ ಶ್ರೀನಿವಾಸನೇ’ ಭಜನೆಯಿಂದ ಟೀಕೆಗೊಳಗಾಗಿದ್ದ ಸುಹಾನಾ, 16 ವರ್ಷಗಳ ಪ್ರೀತಿಯ ಬಳಿಕ ಈಗ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸುಹಾನಾ ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ ಅನ್ನೋದು ವಿಶೇಷ.

ಮಂತ್ರ ಮಾಂಗಲ್ಯ ಮಾಡಿಕೊಂಡ ಸುಹಾನಾ; ನಿತೀನ್ ಜೊತೆ ಹೊಸ ಬಾಳಿಗೆ ಕಾಲಿಟ್ಟ ಸಿಂಗರ್
ನಿತೀನ್-ಸುಹಾನಾ

Updated on: Oct 17, 2025 | 7:43 PM

ಜೀ ಕನ್ನಡದ ‘ಸರಿಗಮಪ’ ಶೋ ಮೂಲಕ ಫೇಮಸ್ ಆದ ಸುಹಾನಾ ಸೈಯದ್ ಅವರು ಈಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರಂಗಭೂಮಿ ಕಲಾವಿದ ನಿತೀನ್ ಶಿವಾಂಶ್ ಜೊತೆ ಈ ಮದುವೆ ನೆರವೇರಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಾ ಇದ್ದಾರೆ. ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ.

ಸುಹಾನಾ ಅವರು ‘ಸರಿಗಮಪ’ ಶೋಗೆ ತೆರಳಿ ಮಿಂಚಿದರು. ಆ ಬಳಿಕ ‘ಶ್ರೀಕೃಷ್ಣನೇ ಶ್ರೀನಿವಾಸನೇ’ ಭಜನೆ ಹೇಳಿದ್ದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದರು. ಮುಸ್ಲಿಂ ಧರ್ಮದ ಅನೇಕರು ಅವರ ಈ ಕೆಲಸವನ್ನು ಖಂಡಿಸಿದರು. ಈಗ ಅವರು ಗೆಳೆಯ ನಿತೀನ್ ಜೊತೆ ವಿವಾಹ ಆಗಿದ್ದಾರೆ. ಅವರ ಮಂತ್ರ ಮಾಂಗಲ್ಯ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಗಮನ ಸೆಳೆದಿದೆ.

ಇದನ್ನೂ ಓದಿ
ಒಂದೇ ದಿನ ಒಟಿಟಿಗೆ ಕಾಲಿಟ್ಟ ಕನ್ನಡದ ಎರಡು ಹಿಟ್ ಚಿತ್ರಗಳು; ಮಿಸ್ ಮಾಡಬೇಡಿ
ಅಶ್ವಿನಿಯ ಚಮಚ ಆದ ಜಾನ್ವಿ; ಹೇಳಿದಂತೆ ಕುಣೀತಾರೆ ತಕತೈ, ತಕತೈ
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ಸುಹಾನಾ ಹಾಗೂ ನಿತೀನ್ 16 ವರ್ಷಗಳ ಹಿಂದೆ ಪರಿಚಯ ಆದರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಈ ಮೊದಲು ಸೋಶೀಯಲ್ ಮೀಡಿಯಾದಲ್ಲಿ ಸುಹಾನಾ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಪ್ರತಿ ಜೀವವೂ ಪ್ರೀತಿಗಾಗಿ ಹುಡುಕಾಡುತ್ತದೆ. ಪ್ರತಿ ಹೃದಯವು ಪ್ರೀತಿಗಾಗಿ ಹಾತೊರೆಯುತ್ತದೆ. ಪ್ರೀತಿಗೆ ಯಾವುದೇ ಮಿತಿಯಿಲ್ಲ. ಅದು ದೂರ, ಅನುಮಾನಗಳು ಮತ್ತು ಭಯಗಳನ್ನು ಮೀರಿದ ಪ್ರಯಾಣ. ಆ ಅಪರಿಮಿತ ಪ್ರೀತಿಗೆ ನಾವು ಸಾಕ್ಷಿಗಳಾಗಿ ನಿಲ್ಲುತ್ತೇವೆ. ಇಂದು, ನಾವು ನಮ್ಮ ರಹಸ್ಯವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಾ ಇದ್ದೇವೆ. ನಿಮ್ಮ ಆಶೀರ್ವಾದವನ್ನು ಕೋರುತ್ತೇವೆ’ ಎಂದು ಸುಹಾನಾ ಬರೆದುಕೊಂಡಿದ್ದರು.

ಇದನ್ನೂ ಓದಿ: ಶಾರುಖ್ ಖಾನ್ ಪುತ್ರಿ ಸುಹಾನಾ ಧರಿಸಿರುವ ಈ ಉಡುಗೆಯ ಬೆಲೆ ಎಷ್ಟು ಲಕ್ಷ ಗೊತ್ತೆ?

ಸುಹಾನಾ ಹಾಗೂ ನಿತೀನ್ ದಂಪತಿಗೆ ಎಲ್ಲರೂ ಶುಭಕೋರುತ್ತಿದ್ದಾರೆ. ಅವರ ದಾಂಪತ್ಯ ಜೀವನ ಸುಖಕರವಾಗಿರಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:49 pm, Fri, 17 October 25

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us