ಬಿಗ್ ಬಾಸ್ ಹೊಸ ಸೀಸನ್​ ನಡೆಸಿಕೊಡಲು ಕಮಲ್ ಹಾಸನ್ ರೆಡಿ; ಈ ಬಾರಿ ಹೇಗಿರಲಿದೆ ದೊಡ್ಮನೆ ಸೆಟ್​?

ನಿರೂಪಣೆಯಲ್ಲಿ ಕಮಲ್ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ತಮಿಳು ಬಿಗ್ ಬಾಸ್​’ನ ಐದು ಸೀಸನ್​ಗಳನ್ನು ಯಶಸ್ವಿಯಾಗಿ ನಿರೂಪಿಸಿದ್ದಾರೆ. ಈಗ ಆರನೇ ಸೀಸನ್​ಗೆ ಅವರು ರೆಡಿ ಆಗಿದ್ದಾರೆ.

ಬಿಗ್ ಬಾಸ್ ಹೊಸ ಸೀಸನ್​ ನಡೆಸಿಕೊಡಲು ಕಮಲ್ ಹಾಸನ್ ರೆಡಿ; ಈ ಬಾರಿ ಹೇಗಿರಲಿದೆ ದೊಡ್ಮನೆ ಸೆಟ್​?
ಕಮಲ್ ಹಾಸನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 06, 2022 | 4:52 PM

‘ಬಿಗ್ ಬಾಸ್’ (Bigg Boss) ರಿಯಾಲಿಟಿ ಶೋ ಹಿಂದಿ, ಕನ್ನಡ, ತಮಿಳು ಮೊದಲಾದ ಭಾಷೆಗಳಲ್ಲಿ ಯಶಸ್ಸು ಕಂಡಿದೆ. ಈಗ ತಮಿಳು ಬಿಗ್ ಬಾಸ್​ನ ಹೊಸ ಸೀಸನ್ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಕಮಲ್ ಹಾಸನ್ (Kamal Haasan) ಅವರು ಸತತ ಆರನೇ ಬಾರಿಗೆ ಈ ಶೋಗೆ ನಿರೂಪಕರಾಗಿ ಎಂಟ್ರಿ ಕೊಡುತ್ತಿದ್ದಾರೆ. ‘ಹೊಸ ಸೀಸನ್​ಗೆ ರೆಡಿ ಆಗಿದ್ದೀರಾ’ ಎಂಬ ಪ್ರಶ್ನೆಯನ್ನು ವೀಕ್ಷಕರ ಬಳಿ ಕಮಲ್ ಹಾಸನ್ ಕೇಳಿದ್ದಾರೆ. ಹೊಸ ಪ್ರೋಮೋ ಸಖತ್ ವೈರಲ್ ಆಗುತ್ತಿದೆ.

ಕಮಲ್ ಹಾಸನ್ ಅವರು ನಟನೆಯಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇದರ ಜತೆಗೆ ರಾಜಕೀಯದಲ್ಲೂ ಅವರು ಯಶಸ್ಸು ಗಳಿಸುವ ಹಂಬಲದಲ್ಲಿದ್ದರು. ತಮ್ಮದೇ ಪಕ್ಷ ಕೂಡ ಸ್ಥಾಪಿಸಿ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದರು. ಆದರೆ, ಯಶಸ್ಸು ಸಿಗಲಿಲ್ಲ. ಇನ್ನು, ನಿರೂಪಣೆಯಲ್ಲಿ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ತಮಿಳು ಬಿಗ್ ಬಾಸ್​’ನ ಐದು ಸೀಸನ್​ಗಳನ್ನು ಯಶಸ್ವಿಯಾಗಿ ನಿರೂಪಿಸಿದ್ದಾರೆ. ಈಗ ಆರನೇ ಸೀಸನ್​ಗೆ ಅವರು ರೆಡಿ ಆಗಿದ್ದಾರೆ.

ಇದನ್ನೂ ಓದಿ
Image
‘ಮೊದಲು ನನ್ನ ಸಾಲ ತೀರಿಸುತ್ತೇನೆ’; ‘ವಿಕ್ರಮ್​’ ಯಶಸ್ಸಿನ ಬಗ್ಗೆ ನಟ ಕಮಲ್ ಹಾಸನ್ ಮಾತು
Image
Kamal Haasan: ವಿಶ್ವಾದ್ಯಂತ 200 ಕೋಟಿ ರೂ. ಬಾಚಿಕೊಂಡ ‘ವಿಕ್ರಮ್​’ ಸಿನಿಮಾ; ಗೆಲುವಿನ ಖುಷಿಯಲ್ಲಿ ಕಮಲ್​ ಹಾಸನ್​
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
ಕಮಲ್​ ಹಾಸನ್​ ಮಾಜಿ ಪತ್ನಿ ಸಾರಿಕಾಗೆ ಆರ್ಥಿಕ ಸಂಕಷ್ಟ; 3 ಸಾವಿರ ರೂಪಾಯಿಗಾಗಿ ಕಷ್ಟಪಟ್ಟ ಖ್ಯಾತ ನಟಿ

‘ತಮಿಳು ಬಿಗ್ ಬಾಸ್ 6’ನೇ ಸೀಸನ್​ನ ಪ್ರೋಮೋ ಹೊರ ಬಂದಿದೆ. ಈ ಪ್ರೋಮೋದಲ್ಲಿ ಕಮಲ್ ಹಾಸನ್ ಲುಕ್ ಫ್ಯಾನ್ಸ್​ಗೆ ಇಷ್ಟವಾಗಿದೆ. ಈ ಪ್ರೋಮೋ ನೋಡಿದವರಿಗೆ ಇತ್ತೀಚೆಗೆ ತೆರೆಗೆ ಬಂದ ಅವರ ನಟನೆಯ ‘ವಿಕ್ರಮ್’ ಸಿನಿಮಾ ನೆನಪಿಗೆ ಬಂದಿದೆ. ಈ ಚಿತ್ರದ ಶೈಲಿಯಲ್ಲೇ ಪ್ರೋಮೋ ರಿಲೀಸ್ ಆಗಿದೆ ಅನ್ನೋದು ವಿಶೇಷ. ಈ ಬಾರಿ ಸೆಟ್ ಸಖತ್ ಅದ್ದೂರಿಯಾಗಿರಲಿದೆ ಎನ್ನಲಾಗುತ್ತಿದೆ.

ಸದ್ಯ ಹೊಸ ಸೀಸನ್​ ಆರಂಭದ ದಿನಾಂಕವನ್ನು ಬಿಟ್ಟುಕೊಡಲಾಗಿಲ್ಲ. ಮೂಲಗಳ ಪ್ರಕಾರ ಅಕ್ಟೋಬರ್ ತಿಂಗಳಿಂದ ತಮಿಳು ಬಿಗ್ ಬಾಸ್ ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ಇದಕ್ಕಾಗಿ ವೀಕ್ಷಕರು ಕಾಯುತ್ತಿದ್ದಾರೆ. ಸ್ಟಾರ್ ವಿಜಯ್​ ವಾಹಿನಿಯಲ್ಲಿ ಈ ಶೋ ಪ್ರಸಾರ ಕಾಣಲಿದೆ.

ಇದನ್ನೂ ಓದಿ: ‘ವಿಕ್ರಮ್​’ ಯಶಸ್ಸಿನ ಬೆನ್ನಲ್ಲೇ ‘ಇಂಡಿಯನ್​ 2’ ಕೆಲಸಗಳಲ್ಲಿ ಕಮಲ್ ಹಾಸನ್ ಬ್ಯುಸಿ; ಇಲ್ಲಿದೆ ಹೊಸ ಪೋಸ್ಟರ್

ಕನ್ನಡದಲ್ಲಿ ಸದ್ಯ ‘ಬಿಗ್ ಬಾಸ್ ಒಟಿಟಿ’ ಸೀಸನ್ ನಡೆಯುತ್ತಿದೆ. ಶೀಘ್ರವೇ ಟಿವಿ ಸೀಸನ್ ಆರಂಭಗೊಳ್ಳಲಿದೆ. ಇದಕ್ಕಾಗಿ ಕಿರುತೆರೆ ವೀಕ್ಷಕರು ಕಾಯುತ್ತಿದ್ದಾರೆ. ಸೆಪ್ಟೆಂಬರ್ 18ಕ್ಕೆ ಒಟಿಟಿ ಸೀಸನ್ ಕೊನೆಗೊಳ್ಳಲಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ