ಟಿಪಿಎಲ್ ಸೀಸನ್ 3: ಬ್ಯಾಟ್-ಬಾಲ್ ಹಿಡಿದು ಮೈದಾನಕ್ಕಿಳಿದ ಕಿರುತೆರೆ ಕಲಾವಿದರು

Television Premier League: ಶಾರ್ಜಾನಲ್ಲಿ ಸಿನಿಮಾ ತಾರೆಯರ ಸಿಸಿಎಲ್ ನಡೆಯುತ್ತಿರುವ ಹೊತ್ತಿನಲ್ಲಿಯೇ ಹುಬ್ಬಳ್ಳಿಯಲ್ಲಿ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿಗಳು ಪ್ರಾರಂಭವಾಗಿವೆ.

ಟಿಪಿಎಲ್ ಸೀಸನ್ 3: ಬ್ಯಾಟ್-ಬಾಲ್ ಹಿಡಿದು ಮೈದಾನಕ್ಕಿಳಿದ ಕಿರುತೆರೆ ಕಲಾವಿದರು
Follow us
ಮಂಜುನಾಥ ಸಿ.
|

Updated on: Feb 29, 2024 | 11:28 PM

ಶಾರ್ಜಾನಲ್ಲಿ ಸಿನಿಮಾ ತಾರೆಯರ ಸಿಸಿಎಲ್ (CCL) (ಸೆಲೆಬ್ರಿಟಿ ಕ್ರಿಕೆಟ್ ಲೀಗ್) ನಡೆಯುತ್ತಿರುವ ಹೊತ್ತಿನಲ್ಲಿಯೇ ಹುಬ್ಬಳ್ಳಿಯಲ್ಲಿ ಟಿಪಿಎಲ್ ಪ್ರಾರಂಭವಾಗಿದೆ. ಕಿರುತೆರೆ ಕಲಾವಿದರ ಕ್ರಿಕೆಟ್ ಲೀಗ್​ನ ಮೂರನೇ ಸೀಸನ್ ಗೆ ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಗಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ನಿನ್ನೆಯಿಂದ ಟಿಪಿಎಲ್ ಪಂದ್ಯಾವಳಿಗಳು ಪ್ರಾರಂಭವಾಗಿವೆ. ಕಲಾವಿದರು ಮತ್ತು ತಂತ್ರಜ್ಞರಿಗೆ ನೆರವು ನೀಡುವ ಉದ್ದೇಶದಿಂದ ಎನ್​1 ಕ್ರಿಕೆಟ್ ಅಕಾಡೆಮಿಯ ಬಿಆರ್ ಸುನಿಲ್ ಕುಮಾರ್ ಕಳೆದ ಎರಡು ವರ್ಷಗಳಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಸುತ್ತಾ ಬಂದಿದ್ದು. ಈಗಾಗಲೇ ಯಶಸ್ವಿಯಾಗಿ 2 ಸೀಸನ್ ಮುಕ್ತಾಯಗೊಂಡಿದೆ. ನಿನ್ನೆಯಿಂದ (ಫೆಬವರಿ 28) ಮೂರನೇ ಸೀಸನ್ ಶುರುವಾಗಿದ್ದು, ಮಾರ್ಚ್ 3 ರವರೆಗೆ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯಲಿದೆ.

ಹುಬ್ಬಳ್ಳಿಯ ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಮೊದಲ ದಿನ ನಡೆದ ಪಂದ್ಯದಲ್ಲಿ ಅಶ್ವಸೂರ್ಯ ರೈಡರ್ಸ್ ಹಾಗೂ ಜಿಎಲ್ ಆರ್ ವಾರಿಯರ್ಸ್ ಹಾಗೂ ರಾಸು ತಂಡಗಳು ಜಯಗಳಿಸಿವೆ.

ಯಾವ ಯಾವ ತಂಡಗಳು ಭಾಗಿ?

ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್, ಕೆಕೆಆರ್ ಮೀಡಿಯಾ ಹೌಸ್, ಬಯೋಟಾಪ್ ಲೈಫ್ ಸೆವಿಯರ್, AVR ಟಸ್ಕರ್ಸ್, ರಾಸು ವಾರಿಯರ್, ಭಜರಂಗಿ ಬಾಯ್ಸ್, ದಿ ಬುಲ್ ಸ್ಕ್ವಾಡ್, ಇನ್ಸೇನ್ ಕ್ರಿಕೆಟ್ ಟೀಂ, ಜಿಎಲ್ಆರ್ ವಾರಿಯರ್ಸ್ ಸೇರಿದಂತೆ ಒಟ್ಟು 10 ಟೀಮ್ ಗಳು ಭಾಗವಹಿಸಿದ್ದು, 170 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಟ್ಟಿದ್ದಾರೆ. ಈ 10 ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ಗಳಿರಲಿದ್ದಾರೆ. ಎವಿಆರ್ ಗ್ರೂಪ್ಸ್ನ ಹೆಚ್ ವೆಂಕಟೇಶ್ ರೆಡ್ಡಿ ಹಾಗೂ ಅರವಿಂದ್ ವೆಂಕಟೇಶ್ ರೆಡ್ಡಿ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ.

ಇದನ್ನೂ ಓದಿ:ಸಿಸಿಎಲ್​ ರಣಾಂಗಣ, ತೆಲುಗು ವಾರಿಯರ್ಸ್​ ಮೆಂಟರ್ ವೆಂಕಟೇಶ್ ದಗ್ಗುಬಾಟಿ ಹೇಳಿದ್ದು ಹೀಗೆ

ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ. ರಂಜಿತ್ ಕುಮಾರ್ ಎಸ್ ಓನರ್, ಜಿಎಲ್ಆರ್ ವಾರಿಯರ್ಸ್ ಟೀಂಗೆ ಲೂಸ್ ಮಾದ ಯೋಗಿ ನಾಯಕನಾದರೆ ರಾಜೇಶ್ ಎಲ್ ಓನರ್, ಇನ್ಸೇನ್ ಕ್ರಿಕೆಟ್ ಟೀಂಗೆ ರವಿಶಂಕರ್ ಗೌಡ ನಾಯಕ-ಫೈಜಾನ್ ಖಾನ್ ಓನರ್, ದಿ ಬುಲ್ ಸ್ಕ್ವಾಡ್ ತಂಡಕ್ಕೆ ಶರತ್ ಪದ್ಮನಾಭ್ ನಾಯಕ-ಮೋನಿಶ್ ಓನರ್, ಭಜರಂಗಿ ಬಾಯ್ಸ್ ಟೀಂಗೆ ಸಾಗರ್ ಬಿಳಿಗೌಡ ನಾಯಕ- ಸ್ವಸ್ತಿಕ್ ಆರ್ಯ ಓನರ್, ರಾಸು ವಾರಿಯರ್ಸ್ ಟೀಂಗೆ ದೀಕ್ಷಿತ್ ಶೆಟ್ಟಿ ನಾಯಕ-ರಘು ಭಟ್ ಹಾಗೂ ಸುಗುಣ ಓನರ್, ಎವಿಆರ್ ಟಸ್ಕರ್ಸ್ಗೆ ಚೇತನ್ ಸೂರ್ಯ ನಾಯಕ – ಅರವಿಂದ್ ವೆಂಕಟ್ ರೆಡ್ಡಿ ಓನರ್, ಬಯೋಟಾಪ್ ಲೈಫ್ ಸೆವಿಯರ್ ಅಲಕಾ ನಂದ ಶ್ರೀನಿವಾಸ್ ನಾಯಕ-ವಿಶ್ವನಾಥ್, ಪ್ರಸನ್ನ ಓನರ್, ಕೆಕೆಆರ್ ಮೀಡಿಯಾ ಹೌಸ್ ಗೆ ಅರುಣ್ ರಾಮ್ ಗೌಡ ನಾಯಕ-ಲಕ್ಷ್ಮೀ ಕಾಂತ್ ರೆಡ್ಡಿ ಓನರ್, ಗೋಲ್ಡನ್ ಈಗಲ್ ವಿಹಾನ್ ನಾಯಕ-ಕುಶಾಲ್ ಗೌಡ ಒಡೆತನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಟಿಪಿಎಲ್ ರಾಯಭಾರಿಯಾಗಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇದ್ದು, ಪ್ರಮುಖ ನಟರಾದ ಲೂಸ್ ಮಾದ ಯೋಗಿ, ರವಿಶಂಕರ್ ಗೌಡ ಟಿಪಿಎಲ್ 3 ನಲ್ಲಿ ಆಡುತ್ತಿರುವುದು ವಿಶೇಷ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್