ಕಳೆದ ವರ್ಷ ಯಶಸ್ವಿಯಾಗಿ ನಡೆದಿದ್ದ ಟೆಲಿವಿಷನ್ ಪ್ರೀಮಿಯರ್ ಲೀಗ್ (Television Premier League) ಈ ವರ್ಷ ಮತ್ತೆ ಆರಂಭವಾಗಿದೆ. ಎನ್ 1 ಕ್ರಿಕೆಟ್ ಅಕಾಡೆಮಿ ನಡೆಸುತ್ತಿರುವ ಈ ಟೂರ್ನಿ ಇಂದು ಉದ್ಘಾಟನೆಗೊಂಡಿದ್ದು ಕಿರುತೆರೆಯ ಹಲವು ಜನಪ್ರಿಯ ನಟರು ಕ್ರಿಕೆಟ್ ಆಡುತ್ತಿದ್ದಾರೆ. ದಿ ಪರ್ಪಲ್ ರಾಕ್ ಪ್ಯಾಂಥರ್ಸ್, ಅಶ್ವಸೂರ್ಯ ರಿಯಾಲಿಟೀಸ್, ಎನಿಎಲ್ಪ್ ಟೂರ್ನಿವಲ್, ಇನ್ಸೇನ್ ಕ್ರಿಕೆಟ್ ಟೀಂ, ದಿ ಬುಲ್ ಸ್ಕ್ವಾಡ್, ಆಕ್ಸ್ ಫರ್ಡ್ ವಿನ್ ಟೀಂ ಎಂಬ ಒಟ್ಟು ಆರು ತಂಡಗಳು ಟ್ರೋಫಿಗಾಗಿ ಸೆಣೆಸಲಿವೆ. ಕ್ರಿಕೆಟ್ ಟೂರ್ನಿಯ ಬಗ್ಗೆ ನಟ ಲೂಸ್ ಮಾದ ಯೋಗಿ ಮಾತನಾಡಿದ್ದಾರೆ.
Published On - 10:15 pm, Sun, 12 March 23