ಆಗಸ್ಟ್​ 15ಕ್ಕೆ ಜೀ ಕನ್ನಡದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’; ಸ್ವಾತಂತ್ರೋತ್ಸವಕ್ಕೆ ಸೆನ್ಸೇಷನಲ್​ ಸಿನಿಮಾ

The Kashmir Files | Zee Kannada: ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ‘ಜೀ ಕನ್ನಡ’ ವಾಹಿನಿ ಮೂಲಕ ಆಗಸ್ಟ್​ 15ರಂದು ಈ ಚಿತ್ರದ ಟಿಲಿವಿಷನ್​ ಪ್ರೀಮಿಯರ್​ ಆಗಲಿದೆ.

ಆಗಸ್ಟ್​ 15ಕ್ಕೆ ಜೀ ಕನ್ನಡದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’; ಸ್ವಾತಂತ್ರೋತ್ಸವಕ್ಕೆ ಸೆನ್ಸೇಷನಲ್​ ಸಿನಿಮಾ
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಟಿಲಿವಿಷನ್ ಪ್ರೀಮಿಯರ್
Follow us
TV9 Web
| Updated By: ಮದನ್​ ಕುಮಾರ್​

Updated on:Aug 04, 2022 | 10:41 AM

ಈ ವರ್ಷ ಅತಿ ಹೆಚ್ಚು ಸೆನ್ಸೇಷನ್​ ಸೃಷ್ಟಿ ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವುದು ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಎಂದರೆ ತಪ್ಪಾಗಲ್ಲ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಈ ಚಿತ್ರದಲ್ಲಿ ಅನೇಕ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಹಿಂದಿಯಲ್ಲಿ ತಯಾರಾದ ಈ ಸಿನಿಮಾ ನಂತರ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಒಟಿಟಿ ಮೂಲಕ ವೀಕ್ಷಣೆಗೆ ಲಭ್ಯವಾಗಿತ್ತು. ಈಗ ಇದೇ ಮೊದಲ ಬಾರಿಗೆ ಕನ್ನಡ ಕಿರುತೆರೆಯಲ್ಲಿ ಈ ಸಿನಿಮಾ ಪ್ರಸಾರಕ್ಕೆ ಸಕಲ ಸಿದ್ಧತೆ ನಡೆದಿದೆ. ಜೀ ಕನ್ನಡ (Zee Kannada) ವಾಹಿನಿಯಲ್ಲಿ ಆಗಸ್ಟ್​ 15ರಂದು ಸ್ವಾತಂತ್ರೋತ್ಸವದ (Independence Day) ಪ್ರಯುಕ್ತ ಮಧ್ಯಾಹ್ನ 3 ಗಂಟೆಗೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪ್ರಸಾರ ಆಗಲಿದೆ. ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ಈ ಚಿತ್ರವನ್ನು ಮಿಸ್​ ಮಾಡಿಕೊಂಡವರಿಗೆ ಈಗ ಕಿರುತೆರೆಯಲ್ಲಿ ವೀಕ್ಷಿಸಲು ಅವಕಾಶ ಸಿಗುತ್ತಿದೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ಅನುಪಮ್​ ಖೇರ್​, ದರ್ಶನ್​ ಕಮಾರ್​, ಪಲ್ಲವಿ ಜೋಶಿ, ಮಿಥುನ್​ ಚಕ್ರವರ್ತಿ, ಪ್ರಕಾಶ್ ಬೆಳವಾಡಿ, ಪುನೀತ್​ ಇಸಾರ್​ ಮುಂತಾದವರು ಇದರಲ್ಲಿ ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ನಿರ್ಮಾಣವಾದ ಈ ಸಿನಿಮಾವನ್ನು ಅನೇಕ ರಾಜಕಾರಣಿಗಳು ನೋಡಿ ಮೆಚ್ಚಿಕೊಂಡಿದ್ದರು. ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಮುಂತಾದವರು ಮೆಚ್ಚುಗೆ ಮಾತುಗಳನ್ನು ಆಡಿದ್ದರು.

ಇದನ್ನೂ ಓದಿ
Image
ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
Image
‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?
Image
ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ತಯಾರಾಗಿದ್ದು 15ರಿಂದ 20 ಕೋಟಿ ರೂಪಾಯಿ ಬಜೆಟ್​ನಲ್ಲಿ. ಆದರೆ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಗಳಿಸಿದ್ದು ಬರೋಬ್ಬರಿ 252 ಕೋಟಿ ರೂಪಾಯಿ ಎಂಬುದು ಅಚ್ಚರಿಯ ಸಂಗತಿ. ಈ ಬೆಳವಣಿಗೆಯನ್ನು ಕಂಡು ಎಲ್ಲರೂ ಬೆರಗಾದರು. ಇತ್ತೀಚಿನ ವರ್ಷಗಳಲ್ಲಿ ಯಾವುದೇ ಸಿನಿಮಾ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಈ ರೀತಿಯ ಮ್ಯಾಜಿಕ್​ ಮಾಡಿರಲಿಲ್ಲ.

View this post on Instagram

A post shared by Zee Kannada (@zeekannada)

ಈ ಸಿನಿಮಾ ಕೋಮುದ್ವೇಷವನ್ನು ಬಿತ್ತುತ್ತದೆ ಎಂಬ ಆರೋಪ ಕೂಡ ಹಲವರಿಂದ ಕೇಳಿಬಂತು. ಆ ಕಾರಣದಿಂದಲೂ ಇದು ದೊಡ್ಡ ಮಟ್ಟದ ಚರ್ಚೆ ಹುಟ್ಟುಹಾಕಿತ್ತು. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ ಅನೇಕರು ಎಮೋಷನಲ್​ ಆಗಿದ್ದುಂಟು. ಪ್ರೇಕ್ಷಕರು ಕಣ್ಣೀರು ಹಾಕುತ್ತ ಥಿಯೇಟರ್​ನಿಂದ ಹೊರಬರುತ್ತಿರುವ ಅನೇಕ ವಿಡಿಯೋಗಳು ವೈರಲ್​ ಆಗಿದ್ದವು. ಒಟ್ಟಿನಲ್ಲಿ ಭಾರಿ ಸೆನ್ಸೇಷನ್​ ಸೃಷ್ಟಿಸುವಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಯಶಸ್ವಿ ಆಯಿತು. ಈ ಸಿನಿಮಾದ ಯಶಸ್ಸಿನ ನಂತರ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಬೇಡಿಕೆ ಹೆಚ್ಚಿತು. ಹಲವು ಸೆಲೆಬ್ರಿಟಿಗಳು ಕೂಡ ಈ ಚಿತ್ರದ ಗೆಲುವನ್ನು ಶ್ಲಾಘಿಸಿದ್ದಾರೆ.

Published On - 10:24 am, Thu, 4 August 22

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು