AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಕಳ್ಳತನ, ಆರೋಪಿ ಬಂಧನ

ಕನ್ನಡದ ‘ಅಮೃತಧಾರೆ’ ಸಿನಿಮಾದ ನಟಿ ಛಾಯಾ ಸಿಂಗ್ ಅವರ ತಾಯಿಯ ಬೆಂಗಳೂರಿನ ಮನೆಯಲ್ಲಿ ಕಳ್ಳತನ ನಡೆದಿದ್ದು, ಬಸವೇಶ್ವರ ನಗರ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಕಳ್ಳತನ, ಆರೋಪಿ ಬಂಧನ
Follow us
ಮಂಜುನಾಥ ಸಿ.
|

Updated on: May 14, 2024 | 12:49 PM

ಸಿನಿಮಾ ನಟಿ, ಪ್ರಸ್ತುತ ಕಿರುತೆರೆಗೂ ಎಂಟ್ರಿ ನೀಡಿರುವ ಜನಪ್ರಿಯ ನಟಿ ಛಾಯಾಸಿಂಗ್ (Chaya Singh) ಅವರ ತಾಯಿಯ ಮನೆಯಲ್ಲಿ ಕಳ್ಳತನ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಬೆಂಗಳೂರಿನ ಬಸವೇಶ್ವರನಗರದ ಮನೆಯಲ್ಲಿ ಕಳ್ಳತನ ನಡೆದಿದೆ. 66 ಗ್ರಾಂ ಚಿನ್ನಾಭರಣ ಸೇರಿ 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಇನ್ನೂ ಕೆಲವು ವಸ್ತುಗಳು ಕಳುವಾಗಿದ್ದವು. ಪ್ರಕರಣದ ಬಗ್ಗೆ ದೂರು ನೀಡಲಾಗಿತ್ತು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಕಳ್ಳತನದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಮನೆಯಲ್ಲಿ ಕೆಲಸಕ್ಕಿದ್ದ ಉಷಾ, ಆಭರಣಗಳನ್ನು ಕದ್ದಿದ್ದರು ಎನ್ನಲಾಗಿದ್ದು, ಆರೋಪಿಯಿಂದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಕೆಲ ವರ್ಷದಿಂದ ಉಷಾ, ಚಮನಲತಾ ಅವರ ಮನೆಯಲ್ಲಿ ಕೆಲಸಕ್ಕಿದ್ದರು, ಮನೆಯವರ ಕಣ್ತಪ್ಪಿಸಿ ಚಿನ್ನಾಭರಣಗಳನ್ನು ಅವರು ದೋಚಿದ್ದಾರೆ. ಚಮನಲತಾ ಅವರು ಚಿನ್ನಾಭರಣಗಳನ್ನು ಪರಿಶೀಲಿಸಿದಾಗ ಕೆಲವು ಆಭರಣ ಕಾಣೆಯಾಗಿರುವುದು ಗೊತ್ತಾಗಿದೆ. ಕೂಡಲೇ ಅವರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಬಳಿಕ ಉಷಾ, ಕದ್ದಿರುವುದು ಪತ್ತೆಯಾಗಿದೆ.

ಇದನ್ನೂ ಓದಿ:ಅಣ್ಣ-ತಂಗಿ ಆಗಿ ರಾಜೇಶ್ ನಟರಂಗ-ಛಾಯಾ ಸಿಂಗ್ ನಟಿಸಿದ್ರು ಅನ್ನೋ ವಿಚಾರ ನಿಮಗೆ ಗೊತ್ತೇ?

ಕೆಲ ತಿಂಗಳ ಹಿಂದೆ ನಟ ರಜನೀಕಾಂತ್ ಅವರ ಪುತ್ರಿ ಐಶ್ವರ್ಯಾ ಅವರ ಮನೆಯಲ್ಲಿಯೂ ಸಹ ಇದೇ ರೀತಿಯ ಪ್ರಕರಣ ನಡೆದಿತ್ತು. ಐಶ್ವರ್ಯಾ ಅವರ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಭಾರಿ ಪ್ರಮಾಣದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದರು. ಸತತವಾಗಿ ಎರಡು ವರ್ಷದಿಂದ ಆಗಾಗ್ಗೆ ಚಿನ್ನಾಭರಣವನ್ನು ಕಳ್ಳತನ ಮಾಡುತ್ತಲೇ ಇದ್ದ ಕೆಲಸದಾಕೆ ಕೊನೆಗೊಂದು ದಿನ ಸಿಕ್ಕಿಬಿದ್ದಳು. ಹಲವು ಆಭರಣಗಳನ್ನು ಹೊಂದಿದ್ದ ಐಶ್ವರ್ಯಾಗೆ ತನ್ನ ಆಭರಣಗಳು ಕಳ್ಳತನವಾಗಿದೆ ಎಂಬುದು ಸಹ ಗೊತ್ತಾಗಿರಲಿಲ್ಲವಂತೆ. ಆದರೆ ಒಂದು ವಿಶೇಷ ಆಭರಣ ಕಾಣೆಯಾದಾಗ ಐಶ್ವರ್ಯಾ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾವು ಎರಡು ವರ್ಷದಿಂದಲೂ ಚಿನ್ನಾಭರಣಗಳನ್ನು ಕದಿಯುತ್ತಿದ್ದುದಾಗಿ ಹೇಳಿದ್ದಾರೆ. ಆಭರಣಗಳನ್ನು ಕದ್ದು ಮಾರಿದ ಹಣದಲ್ಲಿ ಎರಡು ಕೋಟಿ ಮೌಲ್ಯದ ಮನೆಯನ್ನು ಸಹ ಆಕೆ ಕಟ್ಟಿಸಿದ್ದರಂತೆ.

ನಟಿ ಛಾಯಾಸಿಂಗ್ ಕನ್ನಡದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿದ್ದರು. ಪ್ರಶಸ್ತಿ ವಿಜೇತ ‘ಮುನ್ನುಡಿ’ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಛಾಯಾಸಿಂಗ್, ‘ತುಂಟಾಟ’, ‘ಚಿಟ್ಟೆ’ ಸಿನಿಮಾಗಳ ಮೂಲಕ ದೊಡ್ಡ ಹೆಸರು ಮಾಡಿದರು. ತಮಿಳಿನಲ್ಲಿ ಧನುಶ್ ಜೊತೆಗೆ ‘ತಿರುಡಾ ತಿರುಡಿ’ ಸೂಪರ್ ಹಿಟ್ ಸಿನಿಮಾದಲ್ಲಿಯೂ ನಟಿಸಿದರು. ಆ ಬಳಿಕವೂ ಅನೇಕ ತಮಿಳು, ಮಲಯಾಳಂ, ಬೆಂಗಾಲಿ ಸಿನಿಮಾಗಳಲ್ಲಿಯೂ ಛಾಯಾ ಸಿಂಗ್ ನಾಯಕಿಯಾಗಿ ನಟಿಸಿದ್ದಾರೆ. ಇದೀಗ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ತೆಲುಗಿನ ‘ಅನು ಅನೆ ನೇನು’ ಧಾರಾವಾಹಿಯಲ್ಲಿಯೂ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ