AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮೀಯ ಗೆಳೆಯನ ಕಳೆದುಕೊಂಡ ಟಿ.ಎನ್. ಸೀತಾರಾಮ್​; ಭಾವುಕ ಪೋಸ್ಟ್ ವೈರಲ್

ಸೀತಾರಾಮ್ ಅವರ ಈ ಪೋಸ್ಟ್​ಗೆ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ‘ಬಾಲಾಜಿ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಆತ್ಮೀಯ ಗೆಳೆಯನ ಕಳೆದುಕೊಂಡ ಟಿ.ಎನ್. ಸೀತಾರಾಮ್​; ಭಾವುಕ ಪೋಸ್ಟ್ ವೈರಲ್
ಟಿನ್​ ಸೀತಾರಾಮ್-ಬಾಲಾಜಿ
TV9 Web
| Edited By: |

Updated on: Jul 20, 2022 | 4:43 PM

Share

ಟಿ.ಎನ್​. ಸೀತಾರಾಮ್ (TN Seetharam) ಅವರು ಕಿರುತೆರೆ ಲೋಕದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ‘ಮಾಯಾಮೃಗ’ (Mayamruga) ಮೊದಲಾದ ಧಾರಾವಾಹಿಗಳನ್ನು ನಿರ್ದೇಶಿಸಿ ಕಿರುತೆರೆ ವೀಕ್ಷಕರಿಗೆ ಹತ್ತಿರವಾಗಿದ್ದಾರೆ. ಈಗ ಅವರ ಗೆಳೆಯ, ನಟ ಯಲಹಂಕ ಬಾಲಾಜಿ ಅವರು ನಿಧನ ಹೊಂದಿದ್ದಾರೆ. ಈ ಬಗ್ಗೆ ಸೀತಾರಾಮ್ ಅವರು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಸೀತಾರಾಮ್ ಅವರು ನಿರ್ದೇಶನ ಮಾಡಿದ ಮೊದಲ ಧಾರಾವಾಹಿ ‘ಮಾಯಾಮೃಗ’. 1998ರಲ್ಲಿ ಈ ಧಾರಾವಾಹಿ ದೂರದರ್ಶನದಲ್ಲಿ ಪ್ರಸಾರ ಕಂಡಿತು. ನಂತರ ‘ಮನ್ವಂತರ’, ‘ಮುಕ್ತ’ ಮೊದಲಾದ ಧಾರಾವಾಹಿಗಳನ್ನು ಅವರು ನಿರ್ದೇಶನ ಮಾಡಿದರು. ‘ಮಗಳು ಜಾನಕಿ’ ಧಾರಾವಾಹಿ ಸದ್ಯಕ್ಕೆ ಅವರ ನಿರ್ದೇಶನದ ಕೊನೆಯ ಧಾರಾವಾಹಿ. ಈ ಧಾರಾವಾಹಿ 2018ರಿಂದ 2020ರವರೆಗೆ ಪ್ರಸಾರ ಕಂಡಿತು. ಸೀತಾರಾಮ್ ನಿರ್ದೇಶನದ ಎಲ್ಲಾ ಧಾರಾವಾಹಿಗಳಲ್ಲಿ ಬಾಲಾಜಿ ನಟಿಸಿದ್ದರು ಅನ್ನೋದು ವಿಶೇಷ. ಈ ಕಾರಣಕ್ಕೆ ಇಬ್ಬರ ನಡುವೆ ಒಳ್ಳೆಯ ಒಡನಾಟ ಬೆಳೆದಿತ್ತು.

ಬಾಲಾಜಿ ನಿಧನದ ಬಗ್ಗೆ ಸೀತಾರಾಮ್ ಅವರು ಭಾವುಕ ಪೋಸ್ಟ್ ಹಾಕಿಕೊಂಡಿದ್ದಾರೆ. ‘ನನ್ನ ಆತ್ಮೀಯ ಗೆಳೆಯ ಯಲಹಂಕ ಬಾಲಾಜಿ ಅಲ್ಪ ಕಾಲದ ಅನಾರೋಗ್ಯದ ನಂತರ ನಿಧನ ಹೊಂದಿದ್ದಾರೆ. ಮಾಯಾಮೃಗದಿಂದ ಮಗಳು ಜಾನಕಿಯವರೆಗೆ ನನ್ನ ಎಲ್ಲಾ ಧಾರಾವಾಹಿಗಳಲ್ಲೂ ಅವರು ನಟಿಸಿದ್ದರು. ಅತ್ಯಂತ ಹೃದಯವಂತ ಗೆಳೆಯ. ಎಲ್ಲ ಕಷ್ಟಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ ನಗುತ್ತಾ ಬದುಕಿದ ಗೆಳೆಯ. ಬಾಲಾಜಿ ಇನ್ನಿಲ್ಲ ಎಂದು ನೆನೆಸಿಕೊಂಡರೆ ಅಪಾರಸಂಕಟವಾಗುತ್ತದೆ. ತೀವ್ರ ನೋವಿನ ವಿದಾಯ ಬಾಲಾಜಿ’ ಎಂದು ಸೀತಾರಾಮ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಟಿ.ಎನ್.​ ಸೀತಾರಾಮ್​ ಮದುವೆಯಲ್ಲೊಂದು ಅಚ್ಚರಿ​ಯ ಪ್ರಸಂಗ; ಆ ಉಡುಗೊರೆಗೆ ಬೆಲೆ ಕಟ್ಟೋಕಾಗಲ್ಲ

ಸೀತಾರಾಮ್ ಅವರ ಈ ಪೋಸ್ಟ್​ಗೆ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ‘ಬಾಲಾಜಿ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಬಾಲಾಜಿ ನಟನೆಯ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಬಾಲಾಜಿ ಅವರು ರಂಗಭೂಮಿ ಹಿನ್ನೆಲೆಯಿಂದ ಬಂದವರು. ನಂತರ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯರಾದರು.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ