‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್

Tukali Santhu: ಹಾಸ್ಯನಟ, ಬಿಗ್​ಬಾಸ್ ಕನ್ನಡ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್, ತಮ್ಮ ಕನಸೊಂದನ್ನು ನನಸು ಮಾಡಿಕೊಂಡಿದ್ದಾರೆ.

‘ಕಂಡ ಕನಸು ನನಸಾಗಿದೆ’: ಹೊಸ ಕಾರು ಖರೀದಿಸಿದ ವಿಡಿಯೋ ಹಂಚಿಕೊಂಡ ತುಕಾಲಿ ಸಂತೋಷ್
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Mar 03, 2024 | 12:08 PM

ತುಕಾಲಿ ಸಂತೋಷ್ (Tukali Santhosh) ಅವರು ಹಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಜನಪ್ರಿಯರಾಗಿದ್ದಾರೆ. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 10’ ದೊಡ್ಡ ಮಟ್ಟದ ಜನಪ್ರಿಯತೆ ನೀಡಿತು. ತಮ್ಮ ಹಾಸ್ಯದ ಮೂಲಕ, ಕ್ರಿಮಿನಲ್ ಐಡಿಯಾಗಳ ಮೂಲಕ ಎಲ್ಲರ ಗಮನ ಸೆಳೆದರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ವಿಶೇಷ ಎಂದರೆ ಅವರು ಈಗ ಹೊಸ ಕಾರು ಖರೀದಿ ಮಾಡಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳಿದ್ದಾರೆ.

‘ಗಿಚ್ಚಿ ಗಿಲಿ ಗಿಲಿ ಸೀಸನ್ 3’, ‘ಕಾಮಿಡಿ ಕಿಲಾಡಿಗಳು 3’, ‘ಜೋಡಿ ನಂಬರ್ 1’ ಅಂಥ ರಿಯಾಲಿಟಿ ಶೋಗಳ ಮೂಲಕ ಫೇಮಸ್ ಆಗಿದ್ದರು ತುಕಾಲಿ ಸಂತೋಷ್. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತ್ತು. ಇದಾದ ಬಳಿಕ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ಗೆ ಕಾಲಿಟ್ಟರು. ಈ ರಿಯಾಲಿಟಿ ಶೋನಿಂದ ಅವರಿಗೆ ಇದ್ದ ಖ್ಯಾತಿ ಹೆಚ್ಚಿತು. ಆರಂಭದಲ್ಲಿ ಎಲ್ಲರಿಗೂ ನೋವು ಮಾಡುತ್ತಿದ್ದ ಅವರು ನಂತರದ ದಿನಗಳಲ್ಲಿ ತಮ್ಮನ್ನು ತಾವು ಬದಲಾಯಿಸಿಕೊಂಡರು. ವರ್ತೂರು ಸಂತೋಷ್ ಜೊತೆಗಿನ ಫ್ರೆಂಡ್ಶಿಪ್ ಕಾರಣದಿಂದಲೂ ಅವರು ಸುದ್ದಿ ಆದರು. ಈಗ ಕಾರು ಖರೀದಿಸಿ ಸುದ್ದಿ ಆಗಿದ್ದಾರೆ.

ಇದನ್ನೂ ಓದಿ:ಬಿಗ್ ಬಾಸ್ ಕನ್ನಡ: ಹೆಂಡತಿಯನ್ನು ‘ಅಣ್ಣ’ ಅಂದ್ರಂತೆ ತುಕಾಲಿ ಸಂತು: ಯಾಕೆ?

‘ಬಿಗ್ ಬಾಸ್’ ಹಲವರ ಜೀವನ ಬದಲಾಯಿಸಿದೆ. ಅದೇ ರೀತಿ ತುಕಾಲಿ ಸಂತೋಷ್ ಅವರ ಜೀವನ ಕೂಡ ಚೇಂಜ್ ಆಗಿದೆ. ‘ಬಿಗ್ ಬಾಸ್’ ಫಿನಾಲೆವರೆಗೆ ಇದ್ದ ಅವರು ನಾಲ್ಕನೇ ರನ್ನರ್ಅಪ್ ಆಗಿ ಹೊರ ಹೊಮ್ಮಿದರು. ಬಿಗ್ ಬಾಸ್ನಿಂದ ಬಂದ ಸಂಭಾವನೆಯಿಂದ ಅವರು ಕಾರು ಖರೀದಿ ಮಾಡಿದ್ದಾರೆ. ಕಿಯಾ ಕಂಪನಿಯ ಕಾರನ್ನು ಅವರು ಖರೀದಿ ಮಾಡಿದ್ದಾರೆ. ಅವರ ಪತ್ನಿ ಮಾನಸಾ ಕೂಡ ಪೋಸ್ ನೀಡಿದ್ದಾರೆ.

ತುಕಾಲಿ ಸಂತೋಷ್ ರೀತಿ ಅವರ ಪತ್ನಿ ಮಾನಸಾ ಕೂಡ ಅನೇಕರಿಗೆ ಇಷ್ಟ ಆಗಿದ್ದಾರೆ. ಫ್ಯಾಮಿಲಿ ವೀಕ್ನಲ್ಲಿ ಅವರು ಕೂಡ ಆಗಮಿಸಿದ್ದರು. ಈ ವೇಳೆ ಇಬ್ಬರ ಮಧ್ಯೆ ನಡೆದ ಫನ್ ಸಂಭಾಷಣೆ ಅನೇಕರಿಗೆ ಇಷ್ಟ ಆಗಿತ್ತು. ಈ ಮೂಲಕ ಅವರು ಎಲ್ಲರ ಮೆಚ್ಚುಗೆ ಪಡೆದರು. ಈಗ ಇಬ್ಬರೂ ಸೇರಿ ಬಿಳಿ ಬಣ್ಣದ ಕಿಯಾ ಕಾರನ್ನು ಖರೀದಿ ಮಾಡಿದ್ದಾರೆ.

ರಕ್ಷಕ್ ಕಾರು

ಬುಲೆಟ್ ಪ್ರಕಾಶ ಮಗ ರಕ್ಷಕ್ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಕೇವಲ ಒಂದೇ ತಿಂಗಳಿಗೆ ಅವರು ಔಟ್ ಆದರು. ಅವರು ಕೂಡ ಹೊಸ ಕಾರು ಖರೀದಿ ಮಾಡಿದ್ದಾರೆ. ಬಿಎಂಡಬ್ಲ್ಯೂ ಕಾರನ್ನು ಅವರು ತಂದಿದ್ದಾರೆ. ಈ ಮೊದಲು ಥಾರ್ನಲ್ಲಿ ಓಡಾಡುತ್ತಿದ್ದರು. ‘ಕುಟುಂಬಕ್ಕೆ ಹೊಸ ಸದಸ್ಯ’ ಎಂದು ಅವರು ಪೋಸ್ಟ್ ಮಾಡಿದ್ದರು. ಈ ಫೋಟೋ ವೈರಲ್ ಆಗಿತ್ತು. ಈ ವಿಚಾರದಲ್ಲೂ ಅವರನ್ನು ಅನೇಕರು ಟ್ರೋಲ್ ಮಾಡಿದ್ದರು. ‘ಇಷ್ಟೊಂದು ಹಣ ಬಂದಿದ್ದು ಎಲ್ಲಿಂದ’ ಎಂದು ಕೇಳಿದ್ದರು. ಆದರೆ, ಇದಕ್ಕೆಲ್ಲ ಅವರು ತೆಲೆಕೆಡಿಸಿಕೊಂಡಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Sun, 3 March 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ