Tunisha Sharma: ನಟಿ ತುನಿಶಾ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಟುಡಿಯೋದಲ್ಲಿ ಅಗ್ನಿ ಅವಘಡ; ಹೆಚ್ಚಿತು ಅನುಮಾನ

Sheezan Khan: ತುನಿಶಾ ಶರ್ಮಾ ಸಾವಿನ ಬಗ್ಗೆ ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಆ ಪ್ರಕರಣದ ತನಿಖೆ ಅಂತ್ಯವಾಗುವುದಕ್ಕೂ ಮುನ್ನವೇ ಸ್ಟುಡಿಯೋಗೆ ಬೆಂಕಿ ಬಿದ್ದಿರುವುದು ಅನುಮಾನ ಮೂಡಿಸಿದೆ.

Tunisha Sharma: ನಟಿ ತುನಿಶಾ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಟುಡಿಯೋದಲ್ಲಿ ಅಗ್ನಿ ಅವಘಡ; ಹೆಚ್ಚಿತು ಅನುಮಾನ
ತುನಿಶಾ ಶರ್ಮಾ
Follow us
ಮದನ್​ ಕುಮಾರ್​
|

Updated on: May 14, 2023 | 8:19 AM

ಖ್ಯಾತ ಕಿರುತೆರೆ ನಟಿ ತುನಿಶಾ ಶರ್ಮಾ (Tunisha Sharma) ಅವರನ್ನು ಕಳೆದುಕೊಂಡಿದ್ದು ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿತ್ತು. ಹಿಂದಿಯ ಜನಪ್ರಿಯ ‘ಅಲಿ ಬಾಬಾ’ (Ali Baba Dastaan-E-Kabul) ಧಾರಾವಾಹಿಯಲ್ಲಿ ನಟಿಸುತ್ತಿದ್ದ ಅವರು ಅದೇ ಸೀರಿಯಲ್​ನ ಚಿತ್ರೀಕರಣ ನಡೆಯುತ್ತಿದ್ದ ಸ್ಟುಡಿಯೋದಲ್ಲಿ ಕಳೆದ ವರ್ಷ ನೇಣು ಬಿಗಿದುಕೊಂಡರು. ಆದರೆ ಈ ಸ್ಟುಡಿಯೋ ಈಗ ಬೆಂಕಿಗೆ ಆಹುತಿ (Fire Accident) ಆಗಿದೆ. ‘ದಿ ಬಂಜನ್​ಲಾಲ್​ ಸ್ಟುಡಿಯೋಸ್​’ನಲ್ಲಿ ಅನೇಕ ಧಾರಾವಾಹಿಗಳನ್ನು ಚಿತ್ರೀಕರಣ ಮಾಡಲಾಗುತ್ತಿತ್ತು. ತುನಿಶಾ ಶರ್ಮಾ ಅವರ ನಿಧನದ ಬಳಿಕ ಅನೇಕ ಅನುಮಾನಗಳು ಮೂಡಿದ್ದವು. ಅವರ ಸಾವಿಗೆ ನಿಜವಾದ ಕಾರಣ ಏನು ಎಂಬುದು ಇನ್ನೂ ತಿಳಿದಿಲ್ಲ. ಅಷ್ಟರಲ್ಲೇ ಈ ಸ್ಟುಡಿಯೋಗೆ ಬೆಂಕಿ ಬಿದ್ದಿರುವುದು ಅನುಮಾನ ಹೆಚ್ಚಲು ಕಾರಣ ಆಗಿದೆ.

ಮುಂಬೈನ ಹೊರ ವಲಯದಲ್ಲಿ ಈ ಸ್ಟುಡಿಯೋ ಇದೆ. ಶುಕ್ರವಾರ (ಮೇ 12) ರಾತ್ರಿ ಇದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅನಾಹುತಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ನಟ ಶೀಜಾನ್​ ಖಾನ್​ ಅವರನ್ನು ತುನಿಶಾ ಶರ್ಮಾ ಪ್ರೀತಿಸುತ್ತಿದ್ದರು. ಆದರೆ ನಿಧನರಾಗುವುದಕ್ಕೂ ಕೆಲವೇ ದಿನಗಳ ಮುನ್ನ ಬ್ರೇಕಪ್​ ಆಗಿತ್ತು. ಹಾಗಾಗಿ ಅವರ ಸಾವಿನ ಸುತ್ತ ಅನೇಕ ಅನುಮಾನಗಳು ಹುಟ್ಟಿಕೊಂಡಿದ್ದವು. ಆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಸ್ಟುಡಿಯೋಗೆ ಬೆಂಕಿ ಬಿದ್ದಿರುವುದು ಹಲವು ಅನುಮಾನಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: Sheezan Khan: ತುನಿಶಾ ಶರ್ಮಾ ಸಾವಿನ ಕೇಸ್​: 70 ದಿನಗಳ ಬಳಿಕ ಜೈಲಿನಿಂದ ಹೊರಬಂದ ಶೀಜಾನ್​ ಖಾನ್​

ಇದನ್ನೂ ಓದಿ
Image
Tunisha Sharma Funeral: ತುನಿಶಾ ಶರ್ಮಾ ಅಂತ್ಯಕ್ರಿಯೆ: ಅಗಲಿದ ನಟಿಗೆ ಅಂತಿಮ ನಮನ ಸಲ್ಲಿಸಿದ ಕಿರುತೆರೆ ಸೆಲೆಬ್ರಿಟಿಗಳು
Image
Tunisha Sharma: ಶ್ರದ್ಧಾ ವಾಕರ್​ ಕೊಲೆ ಕೇಸ್​ ಪ್ರಭಾವದಿಂದ ತುನಿಶಾ ಶರ್ಮಾ, ಶೀಜಾನ್​ ಖಾನ್​ ನಡುವೆ ನಡೆದಿತ್ತು ಬ್ರೇಕಪ್​
Image
Tunisha Sharma: ಬ್ರೇಕಪ್​ ಆಗಿ 15 ದಿನಕ್ಕೆ ನಟಿ ತುನಿಶಾ ಶರ್ಮಾ ಆತ್ಮಹತ್ಯೆ; ಪ್ರಿಯಕರ ಶೀಜಾನ್​ ಖಾನ್​ ಬಂಧನ
Image
Tunisha Sharma’s Death: ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಲವ್​​ ಜಿಹಾದ್​​ ಕಾರಣವೇ ಎಂಬುದು ತನಿಖೆಯಾಗಬೇಕು: ಬಿಜೆಪಿ ಶಾಸಕ

ಹಿಂದಿಯ ‘ಅಲಿಬಾಬಾ’ ಧಾರಾವಾಹಿಯಲ್ಲಿ ಶೀಜಾನ್​ ಖಾನ್​ ಮತ್ತು ತುನಿಶಾ ಶರ್ಮಾ ಅವರು ಜೊತೆಯಾಗಿ ನಟಿಸುತ್ತಿದ್ದರು. ಇಬ್ಬರ ನಡುವೆ ಸಾಕಷ್ಟು ಆಪ್ತತೆ ಬೆಳೆದಿತ್ತು. ಪರಸ್ಪರ ಪ್ರೀತಿಸುತ್ತಿದ್ದ ಅವರು ಕೆಲವು ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. 2022ರ ಡಿಸೆಂಬರ್​ 24ರಂದು ನೇಣು ಬಿಗಿದ ಸ್ಥಿತಿಯಲ್ಲಿ ತುನಿಶಾ ಶರ್ಮಾ ಅವರ ಮೃತದೇಹ ಪತ್ತೆ ಆಗಿತ್ತು.

ಇದನ್ನೂ ಓದಿ: Tunisha Sharma: ಶೀಜಾನ್​ ಖಾನ್​ ಜತೆಗಿನ ಲವ್​​ ಬಳಿಕ ಹಿಜಾಬ್​ ಧರಿಸುತ್ತಿದ್ದ ತುನಿಶಾ ಶರ್ಮಾ; ಬಾಯ್ಬಿಟ್ಟ ಸಂಬಂಧಿ

2022ರ ಡಿ.25ರಂದು ಬೆಳಗ್ಗೆ ತುನಿಶಾ ಶರ್ಮಾ ಅವರ ಮರಣೋತ್ತರ ಪರೀಕ್ಷೆ ಮಾಡಲಾಯಿತು. ಅವರ ದೇಹದ ಮೇಲೆ ಯಾವುದೇ ಗಾಯದ ಕಲೆಗಳು ಕಂಡುಬರಲಿಲ್ಲ. ನೇಣು ಬಿಗಿದುಕೊಂಡಿದ್ದರಿಂದಲೇ ಅವರ ಪ್ರಾಣ ಹೋಗಿದೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂತು. ತುನಿಶಾ ಶರ್ಮಾ ಪ್ರೆಗ್ನೆಂಟ್​ ಆಗಿದ್ದಿರಬಹುದೇ ಎಂಬ ಅನುಮಾನ ಕೂಡ ವ್ಯಕ್ತವಾಗಿತ್ತು. ಆದರೆ ಅವರು ಪ್ರೆಗ್ನೆಂಟ್​ ಆಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದರು.

ತುನಿಶಾ ಶರ್ಮಾ ಕುಟುಂಬದವರ ಆರೋಪದ ಮೇರೆಗೆ ಶೀಜಾನ್ ಖಾನ್​ ಅವರನ್ನು ಬಂಧಿಸಲಾಗಿತ್ತು. 70 ದಿನ ಜೈಲಿನಲ್ಲಿದ್ದ ಅವರಿಗೆ ಈ ವರ್ಷ ಮಾರ್ಚ್ 4ರಂದು​ ಜಾಮೀನು ಸಿಕ್ಕಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್