AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?

Vaishnavi Gowda Engagement: ಖ್ಯಾತ ಕನ್ನಡ ನಟಿ ವೈಷ್ಣವಿ ಗೌಡ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅವರ ನಿಶ್ಚಿತಾರ್ಥದ ಫೋಟೋಗಳು ಮತ್ತು ವಿಡಿಯೋಗಳು ಅಭಿಮಾನಿಗಳಲ್ಲಿ ಸಂತೋಷ ಮತ್ತು ಆಶ್ಚರ್ಯವನ್ನು ಉಂಟುಮಾಡಿದೆ. ವಿವಾಹದ ದಿನಾಂಕವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

Vaishnavi Gowda: ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?
ವೈಷ್ಣವಿ ಎಂಗೇಜ್​ಮೆಂಟ್ ಫೋಟೋ
Follow us
ರಾಜೇಶ್ ದುಗ್ಗುಮನೆ
|

Updated on:Apr 15, 2025 | 12:25 PM

ನಟಿ ವೈಷ್ಣವಿ ಗೌಡ (Vaishnavi Gowda) ಅವರು ಅಭಿಮಾನಿಗಳಿಗೆ ಸರ್​ಪ್ರೈಸ್ ನೀಡಿದ್ದಾರೆ. ಅವರು ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನಟಿ ನಿಶ್ಚಿತಾರ್ಥ ಆಗಿರೋದು ಅಭಿಮಾನಿಗಳಿಗೆ ಶಾಕ್ ಹಾಗೂ ಖುಷಿ ಎರಡನ್ನೂ ನೀಡಿದೆ. ಅವರಿಗೆ ಎಲ್ಲ ಕಡೆಗಳಿಂದ ಅಭಿನಂದನೆಗಳು ಬರುತ್ತಿವೆ. ಹಾಗಾದರೆ ವೈಷ್ಣವಿ ಗೌಡ ಅವರು ಮದುವೆ ಆಗುತ್ತಿರುವ ಹುಡುಗ ಯಾರು? ಅವರ ಹಿನ್ನೆಲೆ ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ತಮಗೆ ಮದುವೆ ಬಗ್ಗೆ ಇರುವ ಕನಸುಗಳ ಬಗ್ಗೆ ಹೇಳಿಕೊಂಡಿದ್ದರು. ಮದುವೆನ ಹೀಗೆ ಆಗ್ತೀನಿ, ಹಾಗೆ ಆಗ್ತೀನಿ ಎಂದೆಲ್ಲ ವಿವರಿಸಿದ್ದರು. ಅವರಿಗೆ ಸಾಕಷ್ಟು ಮದುವೆ ಆಫರ್​ಗಳು ಬಂದರೂ ಅದನ್ನು ಒಪ್ಪಿಲ್ಲ ಎಂದಿದ್ದರು. ಈಗ ವೈಷ್ಣವಿ ಗೌಡ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಅವರ ಎಂಗೇಜ್​ಮೆಂಟ್ ಫೋಟೋ ಹಾಗೂ ವಿಡಿಯೋಗಳನ್ನು ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ವೈಷ್ಣವಿ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರ ಸಾಕಷ್ಟು ಗಮನ ಸೆಳೆದಿದೆ. ಈ ಧಾರಾವಾಹಿಯ ಕಲಾವಿದೆ ಮೇಘನಾ ಶಂಕರಪ್ಪ ಅವರು ಇತ್ತೀಚೆಗೆ ವಿವಾಹ ಆಗಿದ್ದರು. ಈಗ ಧಾರಾವಾಹಿ ತಂಡದಲ್ಲಿ ಮತ್ತೊಂದು ಮದುವೆ ನೆರವೇರುತ್ತಿದೆ.

ಇದನ್ನೂ ಓದಿ
Image
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
Image
860 ಸಿನಿಮಾ ಮಾಡಿದರೂ ಬ್ಯಾಂಕ್ ಬ್ಯಾಲೆನ್ಸ್ ಇಲ್ಲ; ಮರುಗಿದ್ದ ನಟ
Image
ಬ್ಯಾಂಕ್ ಜನಾರ್ಧನ್ ವೃತ್ತಿ ಜೀವನ ಬದಲಿಸಿದ್ದು ಆ ಇಬ್ಬರು ವ್ಯಕ್ತಿಗಳು
Image
ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ  

ಹುಡುಗ ಯಾರು?

ವೈಷ್ಣವಿ ಗೌಡ ಅವರು ಮದುವೆ ಆಗುತ್ತಿರುವ ಹುಡುಗನ ಹೆಸರು ಅನುಕೂಲ್ ಮಿಶ್ರಾ​ ಎಂದು. ಅವರು ಏರ್​ಫೋರ್ಸ್​ನಲ್ಲಿ ಕೆಲಸ ಮಾಡುತ್ತಾ ಇದ್ದಾರೆ. ಈ ಮೂಲಕ ವೈಷ್ಣವಿ ಅವರು ಬಣ್ಣದ ಲೋಕದವರನ್ನು ಬಿಟ್ಟು ಹೊರಗಿನವರನ್ನು ಕೈ ಹಿಡಿಯುತ್ತಿದ್ದಾರೆ.

ಇದನ್ನೂ ಓದಿ: ‘ಸೀತಾ ರಾಮ’ ಧಾರಾವಾಹಿ ನಟಿ ವೈಷ್ಣವಿ ಗೌಡಗೆ ಬಿತ್ತು ದಂಡ; ಮಾಡಿದ ತಪ್ಪೇನು?

ಅದ್ದೂರಿ ಎಂಗೇಜ್​ಮೆಂಟ್

ವೈಷ್ಣವಿ ಗೌಡ ಅವರು ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮದುವೆ ಹಾಗೂ ಎಂಗೇಜ್​ಮೆಂಟ್ ಬಗ್ಗೆ ಅವರು ತಮ್ಮದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಅವರು ಅಂದುಕೊಂಡ ರೀತಿಯಲ್ಲೇ ನಿಶ್ಚಿತಾರ್ಥ ನೆರವೇರಿದೆ ಎಂದು ಹೇಳಲಾಗುತ್ತಿದೆ. ಈ ವಿವಾಹಕ್ಕೆ ಆಪ್ತರು ಹಾಗೂ ಕುಟುಂಬದವರು ಮಾತ್ರ ಹಾಜರಿ ಹಾಕಿದ್ದರು. ವಿವಾಹದ ದಿನಾಂಕ ಇನ್ನಷ್ಟೇ ರಿವೀಲ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:55 am, Tue, 15 April 25

ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ