AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೆಳತಿ ಗಾಯತ್ರಿ’ ಧಾರಾವಾಹಿ ಮೂಲಕ ವೈಷ್ಣವಿ ಗೌಡ ಕಂಬ್ಯಾಕ್; ಪ್ರೋಮೋ ರಿಲೀಸ್ 

ಜೀ ಕನ್ನಡದ 'ಸೀತಾ ರಾಮ' ಧಾರಾವಾಹಿಯ ಭರ್ಜರಿ ಯಶಸ್ಸಿನ ಬಳಿಕ ಕಿರುತೆರೆ ನಟಿ ವೈಷ್ಣವಿ ಗೌಡ ಅವರು ಉದಯ ಟಿವಿಯ ಹೊಸ ಸೀರಿಯಲ್ 'ಗೆಳತಿ ಗಾಯತ್ರಿ' ಮೂಲಕ ಮರಳುತ್ತಿದ್ದಾರೆ. ಇದರ ಅಧಿಕೃತ ಪ್ರೋಮೋ ಬಿಡುಗಡೆಯಾಗಿದೆ. ಇದೊಂದು ಭಾವನಾತ್ಮಕ ಸ್ನೇಹದ ಕಥೆಯಾಗಿದ್ದು, ಇದರಲ್ಲಿ ವೈಷ್ಣವಿ ಅವರು ಎಲ್ಲಾ ಸುಖ-ಸೌಲಭ್ಯಗಳಿದ್ದರೂ ಬಾಲ್ಯದ ಗೆಳತಿಯನ್ನು ಹುಡುಕುವ ಶ್ರೀಮಂತ ಗೃಹಿಣಿ ಪಾರ್ವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

'ಗೆಳತಿ ಗಾಯತ್ರಿ' ಧಾರಾವಾಹಿ ಮೂಲಕ ವೈಷ್ಣವಿ ಗೌಡ ಕಂಬ್ಯಾಕ್; ಪ್ರೋಮೋ ರಿಲೀಸ್ 
ವೈಷ್ಣವಿ ಗೌಡ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 07, 2026 | 8:14 AM

Share

ಮುಖ್ಯಾಂಶಗಳು

  • ಉದಯ ಟಿವಿಯ 'ಗೆಳತಿ ಗಾಯತ್ರಿ' ಮೂಲಕ ವೈಷ್ಣವಿ ಕಂಬ್ಯಾಕ್
  • ಬಾಲ್ಯದ ಜೀವದ ಗೆಳತಿಯ ಹುಡುಕಾಟದಲ್ಲಿ ಪಾರ್ವತಿ
  • ಭಾರಿ ಕುತೂಹಲ ಮೂಡಿಸಿದ ಹೊಸ ಧಾರಾವಾಹಿಯ ಪ್ರೋಮೋ

‘ಸೀತಾ ರಾಮ’ ಧಾರಾವಾಹಿಯ ಭರ್ಜರಿ ಯಶಸ್ಸಿನ ಬಳಿಕ ವೈಷ್ಣವಿ ಗೌಡ ಈಗ ಉದಯ ಟಿವಿಯ ಹೊಸ ಸೀರಿಯಲ್ ಮೂಲಕ ಕಿರುತೆರೆಗೆ ಮರಳಲು ಸಜ್ಜಾಗಿದ್ದಾರೆ. ಈ ಹೊಸ ಧಾರಾವಾಹಿಯ ಶೂಟಿಂಗ್ ಈಗಾಗಲೇ ಆರಂಭವಾಗಿದ್ದು, ಇದೀಗ ಇದರ ಅಧಿಕೃತ ಪ್ರೋಮೋ ಬಿಡುಗಡೆಯಾಗಿದೆ. ಉದಯ ಟಿವಿಯಲ್ಲಿ ಪ್ರಸಾರವಾಗಲಿರುವ ಈ ಹೊಸ ಧಾರಾವಾಹಿಗೆ ‘ಗೆಳತಿ ಗಾಯತ್ರಿ’ ಎಂದು ಹೆಸರಿಡಲಾಗಿದೆ. ಬಿಡುಗಡೆಯಾಗಿರುವ ಪ್ರೋಮೋದಲ್ಲಿ ವೈಷ್ಣವಿ ಗೌಡ ಅವರು ‘ಪಾರ್ವತಿ’ ಎಂಬ ಶ್ರೀಮಂತ ಗೃಹಿಣಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಬಳಿ ಐಷಾರಾಮಿ ಮನೆ, ಕಾರು, ಗಂಡ ಮತ್ತು ಎಲ್ಲಾ ತರಹದ ಸುಖ-ಸೌಲಭ್ಯಗಳಿವೆ. ಆದರೆ, ಅವರ ಮನಸ್ಸಿನಲ್ಲಿ ಒಂದು ಕೊರಗಿದೆ. ಅದೇ ತಮ್ಮ ಬಾಲ್ಯದ ಆಪ್ತ ಗೆಳತಿ ಗಾಯತ್ರಿಯ ನೆನಪು.

ಪ್ರೋಮೋದ ಹೈಲೈಟ್ಸ್

ಪ್ರೋಮೋದಲ್ಲಿ ಪಾರ್ವತಿ ತನ್ನ ಶಾಲಾ ದಿನಗಳ ಫೋಟೋವನ್ನು ನೋಡುತ್ತಾ ಬಾಲ್ಯದ ಗೆಳತಿಯನ್ನು ನೆನಪಿಸಿಕೊಳ್ಳುತ್ತಾಳೆ. ರನ್ನಿಂಗ್ ರೇಸ್‌ನಲ್ಲಿ ತಾನು ಗೆಲ್ಲಲಿ ಎಂದು ತನಗಾಗಿ ಸೋಲುತ್ತಿದ್ದ ಗೆಳತಿಯ ಅಪಾರ ಪ್ರೀತಿಯನ್ನು ನೆನೆದು ಭಾವುಕಳಾಗುತ್ತಾಳೆ.

ಇದನ್ನೂ ಓದಿ: ‘ಅಗ್ನಿಸಾಕ್ಷಿ’ ರೀಯೂನಿಯಲ್ಲಿ ವೈಷ್ಣವಿ ಗೌಡ ಸಖತ್ ಮಿಂಚಿಂಗ್

‘25 ವರ್ಷಗಳಿಂದ ಕಾಯುತ್ತಿದ್ದೇನೆ ಅಂದರೆ ನಿಮಗೂ ಸ್ವಲ್ಪ ಓವರ್ ಅನಿಸಬಹುದು ಅಲ್ವಾ?’ ಎನ್ನುತ್ತಾ ತನ್ನ ಗೆಳತಿ ಗಾಯತ್ರಿ ಖಂಡಿತ ಮರಳಿ ಬರುತ್ತಾಳೆ ಎಂಬ ಭರವಸೆಯನ್ನು ವ್ಯಕ್ತಪಡಿಸುತ್ತಾಳೆ. ಪ್ರೋಮೋ ನೋಡಿದರೆ ಇದು ಇಬ್ಬರು ಜೀವದ ಗೆಳತಿಯರ ಸುತ್ತ ಸಾಗುವ ಅತ್ಯಂತ ಭಾವನಾತ್ಮಕ ಮತ್ತು ಕುತೂಹಲಕಾರಿ ಕಥೆ ಎಂಬುದು ಸ್ಪಷ್ಟವಾಗುತ್ತದೆ.

View this post on Instagram

A post shared by Udaya TV (@udayatv)

ಶೀಘ್ರದಲ್ಲೇ ಪ್ರಸಾರ

‘ಗೆಳತಿ ಗಾಯತ್ರಿನ ಹುಡುಕೊಂಡು ಪಾರ್ವತಿ ಬರ್ತಿದ್ದಾಳೆ’ ಎಂಬ ವಾಯ್ಸ್ ಓವರ್‌ನೊಂದಿಗೆ ಪ್ರೋಮೋ ಮುಕ್ತಾಯವಾಗುತ್ತದೆ. ವೈಷ್ಣವಿ ಗೌಡ ಅವರ ಮುದ್ದಾದ ನಟನೆ ಮತ್ತು ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರಾವಾಹಿ ಶೀಘ್ರದಲ್ಲೇ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ. ‘ಸೀತಾ ರಾಮ’ ನಂತರ ವೈಷ್ಣವಿ ಅವರನ್ನು ಮತ್ತೆ ತೆರೆಮೇಲೆ ನೋಡಲು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್