AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಮಾಸ್ಕ್​ ಧರಿಸಿ ಮಿಂಚಿದ ವೈಷ್ಣವಿ ಗೌಡ; ಈ ಸಲ ಕಪ್​ ನಮ್ಮದೇ ಎಂದ ಸನ್ನಿಧಿ

ವೈಷ್ಣವಿ ಗೌಡ ಅವರು ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಪರಿಚಯಗೊಂಡರು. ಆ ಧಾರಾವಾಹಿಯಲ್ಲಿ ಅವರು ನಿರ್ವಹಿಸಿದ್ದ ಸನ್ನಿಧಿ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಅನೇಕರು ಅವರನ್ನು ವೈಷ್ಣವಿ ಎನ್ನುವ ಬದಲು ಸನ್ನಿಧಿ ಎಂದೇ ಕರೆದ ಉದಾಹರಣೆ ಇದೆ.

ಆರ್​ಸಿಬಿ ಮಾಸ್ಕ್​ ಧರಿಸಿ ಮಿಂಚಿದ ವೈಷ್ಣವಿ ಗೌಡ; ಈ ಸಲ ಕಪ್​ ನಮ್ಮದೇ ಎಂದ ಸನ್ನಿಧಿ
ವೈಷ್ಣವಿ ಗೌಡ
TV9 Web
| Edited By: |

Updated on: Sep 24, 2021 | 7:26 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ ವೈಷ್ಣವಿ ಗೌಡ ಅವರು ಫಿನಾಲೆ ರೇಸ್​ನಲ್ಲಿದ್ದರು. ಟಾಪ್​ ಎರಡರಲ್ಲಿ ಅವರು ಕೂಡ ಇರುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ, ಮೂರನೇ ರನ್ನರ್​​ಅಪ್​ ಸ್ಥಾನಕ್ಕೆ ಖುಷಿಪಟ್ಟುಕೊಂಡರು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ವಿವಿಧ ಪೋಸ್ಟ್​ಗಳನ್ನು ಹಾಕುವ ಮೂಲಕ ಅಭಿಮಾನಿಗಳ ಜತೆ ಸಂಪರ್ಕದಲ್ಲಿದ್ದಾರೆ. ಈಗ ಅವರು ಆರ್​ಸಿಬಿಗೆ ಸಪೋರ್ಟ್​ ಮಾಡಿ ಪೋಸ್ಟ್​ ಒಂದನ್ನು ಮಾಡಿದ್ದಾರೆ.

ವೈಷ್ಣವಿ ಗೌಡ ಅವರು ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಪರಿಚಯಗೊಂಡರು. ಆ ಧಾರಾವಾಹಿಯಲ್ಲಿ ಅವರು ನಿರ್ವಹಿಸಿದ್ದ ಸನ್ನಿಧಿ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಅನೇಕರು ಅವರನ್ನು ವೈಷ್ಣವಿ ಎನ್ನುವ ಬದಲು ಸನ್ನಿಧಿ ಎಂದೇ ಕರೆದ ಉದಾಹರಣೆ ಇದೆ. ಬಿಗ್​ ಬಾಸ್​ ಮನೆ ಪ್ರವೇಶಿಸಿದ ನಂತರದಲ್ಲಿ ಅವರು ಖ್ಯಾತಿ ದುಪ್ಪಟ್ಟಾಗಿದೆ. ಈಗ ವೈಷ್ಣವಿ ಆರ್​ಸಿಬಿಗೆ ಸಪೋರ್ಟ್​ ಮಾಡಿ ಪೋಸ್ಟ್ ಒಂದನ್ನು ಮಾಡಿದ್ದಾರೆ.

ಇಂದು (ಸೆಪ್ಟೆಂಬರ್​ 24) ವಿರಾಟ್​ ಕೊಹ್ಲಿ ನೇತೃತ್ವದ ಆರ್​ಸಿಬಿ ಹಾಗೂ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್​ ನಡುವೆ ಹಣಾಹಣಿ ಏರ್ಪಡುತ್ತಿದೆ. ಆರ್​ಸಿಬಿ vs ಸಿಎಸ್​ಕೆ ಮ್ಯಾಚ್​ ಬಂದರೆ ಸಾಕು ಅಭಿಮಾನಿಗಳ ಪಾಲಿಗೆ ಹಬ್ಬದೂಟ. ಈ ಮ್ಯಾಚ್​ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿರುತ್ತಾರೆ. ಇಂದು ಧೋನಿ ಹಾಗೂ ಕೊಹ್ಲಿ ಮುಖಮುಖಿ ಆಗುತ್ತಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಮ್ಯಾಚ್​ನಲ್ಲಿ ವೈಷ್ಣವಿ ಅವರು ಆರ್​ಸಿಬಿಯನ್ನು ಬೆಂಬಲಿಸಿದ್ದಾರೆ.

ಆರ್​ಸಿಬಿ ಲೋಗೋ ಇರುವ ಮಾಸ್ಕ್​ ಧರಿಸಿರುವ ವೈಷ್ಣವಿ ‘ಈ ಸಲ ಕಪ್​ ನಮ್ದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಫೋಟೋ ಪೋಸ್ಟ್​ ಮಾಡಿದ್ದಾರೆ. ಅಲ್ಲದೆ, ಆರ್​ಸಿಬಿ ಮ್ಯಾಚ್​ಗಾಗಿ ಕಾಯುತ್ತಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಸದ್ಯ, ಈ ಫೋಟೋ ಸಾಕಷ್ಟು ವೈರಲ್​ ಆಗುತ್ತಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ಅಂಕಪಟ್ಟಿಯಲ್ಲಿ ಚೆನ್ನೈ ಮೊದಲ ಸ್ಥಾನದಲ್ಲಿದ್ದರೆ, ಆರ್​ಸಿಬಿ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೆ ಬದಲಾದ ವೈಷ್ಣವಿ ಗೌಡ; ಬೇಸರಗೊಂಡ ರಘು 

ಕುಟುಂಬದವರ ಸುದ್ದಿಗೆ ಬಂದ ಶಮಂತ್​ಗೆ ಸರಿಯಾಗೇ ತಿರುಗೇಟು ನೀಡಿದ ವೈಷ್ಣವಿ ಗೌಡ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ