ಬಿಗ್ ಬಾಸ್ ಮನೆಯಲ್ಲೇ ವರ್ತೂರು ಸಂತೋಷ್​ ಅರೆಸ್ಟ್; ಮಾಡಿದ ಕ್ರೈಮ್ ಏನು?

ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಭಾನುವಾರ (ಅಕ್ಟೋಬರ್ 22) ತಡರಾತ್ರಿ ಅರೆಸ್ಟ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಚರ್ಚೆ ಆಗುತ್ತಿದೆ. ಕೆಲವು ಮೂಲಗಳು ಇದನ್ನು ಖಚಿತಪಡಿಸಿವೆ. ಆದರೆ, ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಅವರು ಮಾಡಿದ ತಪ್ಪೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಬಿಗ್ ಬಾಸ್ ಮನೆಯಲ್ಲೇ ವರ್ತೂರು ಸಂತೋಷ್​ ಅರೆಸ್ಟ್; ಮಾಡಿದ ಕ್ರೈಮ್ ಏನು?
ವರ್ತೂರ್ ಸಂತೋಷ್
Follow us
ರಾಜೇಶ್ ದುಗ್ಗುಮನೆ
|

Updated on:Oct 23, 2023 | 10:25 AM

‘ಕನ್ನಡ ಬಿಗ್ ಬಾಸ್’ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಗ್ ಬಾಸ್ (Bigg Boss) ಮನೆ ಒಳಗೆ ಅರಣ್ಯಾಧಿಕಾರಿಗಳ ಎಂಟ್ರಿ ಆಗಿದೆ ಎನ್ನಲಾಗುತ್ತಿದೆ. ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಭಾನುವಾರ (ಅಕ್ಟೋಬರ್ 22) ತಡರಾತ್ರಿ ಅರೆಸ್ಟ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಚರ್ಚೆ ಆಗುತ್ತಿದೆ. ಕೆಲವು ಮೂಲಗಳು ಇದನ್ನು ಖಚಿತಪಡಿಸಿವೆ. ಆದರೆ, ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಅವರು ಮಾಡಿದ ತಪ್ಪೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಹಳ್ಳಿಕಾರ್ ಕ್ಯಾಟಲ್ ಬ್ರೀಡ್​ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಇದಲ್ಲದೆ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಂತೋಷ್ ಅವರು ಕತ್ತಿಗೆ ಒಂದು ಚೈನ್ ಹಾಕಿದ್ದರು. ಇದರಲ್ಲಿ ಹುಲಿಯ ಉಗುರು ಕಾಣಿಸಿದೆ. ಈ ಕಾರಣದಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವರ್ತೂರು ಸಂತೋಷ್ ಅವರು ಬಿಗ್ ಬಾಸ್​ಗೆ ಬರುವ ಸಂದರ್ಭದಲ್ಲಿ ಕತ್ತಿನಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ  ಚೈನ್ ಹಾಕಿದ್ದರು. ಈ ಪೆಂಡೆಂಟ್ ಚರ್ಚೆ ಹುಟ್ಟುಹಾಕಿತ್ತು. ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಅವರು ಬಂಧನಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Bigg Boss Kannada: ಬಿಗ್ ಬಾಸ್ ತ್ರಿಮೂರ್ತಿಗಳ ಬಣ್ಣ ಬಯಲು ಮಾಡಿದ ಕಿಚ್ಚ ಸುದೀಪ್

ಒಮ್ಮೆ ಬಿಗ್ ಬಾಸ್ ಮನೆಯಿಂದ ಹೊರಬಿದ್ದರೆ ಅವರಿಗೆ ಮತ್ತೆ ಮನೆ ಒಳಗೆ ಪ್ರವೇಶ ನೀಡುವುದಿಲ್ಲ. ಈಗ ವರ್ತೂರು ಸಂತೋಷ್ ಅವರು ಅರೆಸ್ಟ್​ ಆಗಿರುವುದರಿಂದ ಅವರಿಗೆ ಮತ್ತೆ ಬಿಗ್ ಬಾಸ್ ಮನೆ ಒಳಗೆ ಬರೋಕೆ ಅವಕಾಶ ಸಿಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಅವರು ಎಲಿಮಿನೇಟ್ ಆದ ಲೆಕ್ಕವೇ ಎಂದು ಕೆಲವರು ಊಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:48 am, Mon, 23 October 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್