‘ಕನ್ನಡ ಬಿಗ್ ಬಾಸ್’ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಗ್ ಬಾಸ್ (Bigg Boss) ಮನೆ ಒಳಗೆ ಅರಣ್ಯಾಧಿಕಾರಿಗಳ ಎಂಟ್ರಿ ಆಗಿದೆ ಎನ್ನಲಾಗುತ್ತಿದೆ. ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಭಾನುವಾರ (ಅಕ್ಟೋಬರ್ 22) ತಡರಾತ್ರಿ ಅರೆಸ್ಟ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಚರ್ಚೆ ಆಗುತ್ತಿದೆ. ಕೆಲವು ಮೂಲಗಳು ಇದನ್ನು ಖಚಿತಪಡಿಸಿವೆ. ಆದರೆ, ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಅವರು ಮಾಡಿದ ತಪ್ಪೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಹಳ್ಳಿಕಾರ್ ಕ್ಯಾಟಲ್ ಬ್ರೀಡ್ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಇದಲ್ಲದೆ ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಂತೋಷ್ ಅವರು ಕತ್ತಿಗೆ ಒಂದು ಚೈನ್ ಹಾಕಿದ್ದರು. ಇದರಲ್ಲಿ ಹುಲಿಯ ಉಗುರು ಕಾಣಿಸಿದೆ. ಈ ಕಾರಣದಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ವರ್ತೂರು ಸಂತೋಷ್ ಅವರು ಬಿಗ್ ಬಾಸ್ಗೆ ಬರುವ ಸಂದರ್ಭದಲ್ಲಿ ಕತ್ತಿನಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಚೈನ್ ಹಾಕಿದ್ದರು. ಈ ಪೆಂಡೆಂಟ್ ಚರ್ಚೆ ಹುಟ್ಟುಹಾಕಿತ್ತು. ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಅವರು ಬಂಧನಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Bigg Boss Kannada: ಬಿಗ್ ಬಾಸ್ ತ್ರಿಮೂರ್ತಿಗಳ ಬಣ್ಣ ಬಯಲು ಮಾಡಿದ ಕಿಚ್ಚ ಸುದೀಪ್
ಒಮ್ಮೆ ಬಿಗ್ ಬಾಸ್ ಮನೆಯಿಂದ ಹೊರಬಿದ್ದರೆ ಅವರಿಗೆ ಮತ್ತೆ ಮನೆ ಒಳಗೆ ಪ್ರವೇಶ ನೀಡುವುದಿಲ್ಲ. ಈಗ ವರ್ತೂರು ಸಂತೋಷ್ ಅವರು ಅರೆಸ್ಟ್ ಆಗಿರುವುದರಿಂದ ಅವರಿಗೆ ಮತ್ತೆ ಬಿಗ್ ಬಾಸ್ ಮನೆ ಒಳಗೆ ಬರೋಕೆ ಅವಕಾಶ ಸಿಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಅವರು ಎಲಿಮಿನೇಟ್ ಆದ ಲೆಕ್ಕವೇ ಎಂದು ಕೆಲವರು ಊಹಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:48 am, Mon, 23 October 23