Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ
ವರ್ತೂರು ಸಂತೋಷ್
Follow us
ರಾಜೇಶ್ ದುಗ್ಗುಮನೆ
|

Updated on: Oct 23, 2023 | 12:02 PM

ವರ್ತೂರು ಸಂತೋಷ್ (Varthur Santhosh) ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಸದ್ಯ ಸಂತೋಷ್ ಅವರ ಬಳಿ ಇದ್ದಿದ್ದು ಹುಲಿ ಉಗುರು ಹೌದು ಎಂಬುದು ಸಾಬೀತಾದರೆ ಅವರಿಗೆ ಶಿಕ್ಷೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಇವರ ಬಂಧನ ಆಗಿದೆ. ಆರೋಪ ಸಾಬೀತಾದರೆ 3ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. 10,000ರಿಂದ 25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.

ಸದ್ಯ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ‘ನಾನು ವ್ಯಕ್ತಿಯೊಬ್ಬನಿಂದ ಹುಲಿ ಉಗುರು ಖರೀದಿಸಿದ್ದೆ’ ಎಂದು ಅವರು ಅರಣ್ಯಾಧಿಕಾರಿಗಳ ಎದುರು ಹೇಳಿದ್ದಾರಂತೆ. ಈ ಮೂಲಕ ತಮಗೆ ಹುಲಿ ಉಗುರು ಸಿಕ್ಕಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ಪ್ರಕರಣ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಹುಲಿಯುಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧಿಸಿದ ಅರಣ್ಯಾಧಿಕಾರಿಗಳು

ವರ್ತೂರು ಸಂತೋಷ್ ಅವರು ರೈತನಾಗಿ ಗುರುತಿಸಿಕೊಂಡಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಚರ್ಚೆಗೆ ಒಳಗಾಗಿದ್ದು ಇದೆ. ಬಿಗ್ ಬಾಸ್​ಗೆ ಹೋದ ಬಳಿಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. ಈಗ ಹುಲಿ ಉಗುರು ಪ್ರಕರಣದಲ್ಲಿ ಅವರಿಗೆ ಸಂಕಷ್ಟ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ