ನರೇಂದ್ರ ಮೋದಿ, ಅಕ್ಷಯ್, ರಜನಿಕಾಂತ್ ಸಾಲಿನಲ್ಲಿ ಅಜಯ್ ದೇವಗನ್, ವಿಕ್ಕಿ ಕೌಶಲ್; ಏನಿದು ಸಮಾಚಾರ?

Vicky Kaushal and Ajay Devgan: ಭಾರತದ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಸೂಪರ್​ಸ್ಟಾರ್ ರಜನಿಕಾಂತ್ ಸಾಲಿಗೆ ಮತ್ತಿಬ್ಬರು ಬಾಲಿವುಡ್ ಸೆಲೆಬ್ರಿಟಿಗಳು ಸೇರ್ಪಡೆಯಾಗಿದ್ದಾರೆ. ಏನಿದು ಸಮಾಚಾರ? ಇದರ ಕುತೂಹಲಕರ ಮಾಹಿತಿ ಇಲ್ಲಿದೆ.

ನರೇಂದ್ರ ಮೋದಿ, ಅಕ್ಷಯ್, ರಜನಿಕಾಂತ್ ಸಾಲಿನಲ್ಲಿ ಅಜಯ್ ದೇವಗನ್, ವಿಕ್ಕಿ ಕೌಶಲ್; ಏನಿದು ಸಮಾಚಾರ?
ವಿಕ್ಕಿ ಕೌಶಲ್, ಬೇರ್ ಗ್ರಿಲ್ಸ್ ಹಾಗೂ ಅಜಯ್ ದೇವಗನ್
Follow us
TV9 Web
| Updated By: shivaprasad.hs

Updated on:Sep 16, 2021 | 11:04 AM

ಡಿಸ್ಕವರಿ ವಾಹಿನಿಯಲ್ಲಿ ಪ್ರಸಾರವಾಗುವ ‘ಇನ್​ ಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್’ ಕಾರ್ಯಕ್ರಮವು ಹಲವಾರು ಕಾರಣಗಳಿಂದ ಜನಪ್ರಿಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರು ಸೆಲೆಬ್ರಿಟಿಗಳು ಎಂಬುದು ನೋಡುಗರ ಕುತೂಹಲಕ್ಕೆ ಒಂದು ಮುಖ್ಯ ಕಾರಣವಾದರೆ, ಅದರ ವಿಷಯ ವಸ್ತು ವೀಕ್ಷಕರಿಗೆ ಬಹಳ ಆಸಕ್ತಿಯ ವಿಷಯ ಎಂಬುದು ಶೋನ ಖ್ಯಾತಿಗೆ ಮತ್ತೊಂದು ಕಾರಣ. ಈಗಾಗಲೇ ಈ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್​ನ ಖ್ಯಾತ ನಟ ಅಕ್ಷಯ್ ಕುಮಾರ್ ಹಾಗೂ ಸೂಪರ್​ಸ್ಟಾರ್ ರಜನಿಕಾಂತ್ ಕಾಣಿಸಿಕೊಂಡಿದ್ದಾರೆ. ಮುಂದಿನ ಸಂಚಿಕೆಗಳಲ್ಲಿ ಬಾಲಿವುಡ್​ನಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟರಾದ ಅಜಯ್ ದೇವಗನ್ ಹಾಗೂ ವಿಕ್ಕಿ ಕೌಶಲ್ ಕಾಣಿಸಿಕೊಳ್ಳಲಿದ್ದಾರೆ.

ಈ‌ ಕುರಿತು ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ಮಾಲ್ಡೀವ್ಸ್​ನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಅಜಯ್ ಈಗಾಗಲೇ ಭಾಗಿಯಾಗಿದ್ದಾರೆ. ಈ ಹಿಂದೆ ತಮ್ಮ‌ಇನ್ಸ್ಟಾಗ್ರಾಂ ಖಾತೆಯಲ್ಲಿ ಕಾರ್ಯಕ್ರಮವನ್ನು‌ ನಡೆಸಿಕೊಡುವ ಬ್ರಿಟಿಷ್ ಮೂಲದ ನಿರೂಪಕ‌ ಬೇರ್ ಗ್ರಿಲ್ಸ್, ಬಾಲಿವುಡ್​ನ ಇಬ್ಬರು ಖ್ಯಾತ ತಾರೆಯರು ಭಾಗವಹಿಸುವುದನ್ನು ಖಚಿತಪಡಿಸಿದ್ದರು. ಇದೀಗ ಆ ಪಟ್ಟಿಯಲ್ಲಿ ಅಜಯ್ ಹಾಗೂ ವಿಕ್ಕಿ ಹೆಸರು ಕಾಣಿಸಿಕೊಂಡಿದೆ. ವಿಕ್ಕಿ ಹಾಗೂ ಬೇರ್ ಗ್ರಿಲ್ಸ್, ಸಮುದ್ರ ತೀರದ ಪ್ರದೇಶವೊಂದರಲ್ಲಿ ಚಿತ್ರೀಕರಣ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

‘ಇನ್​ಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್’ ಖ್ಯಾತ ಕಾರ್ಯಕ್ರಮವಾಗಿದ್ದು, ಕಾಡಿನಲ್ಲಿ ಅತ್ಯಂತ ಕಷ್ಟದ ಸಂದರ್ಭದಲ್ಲಿ ಬಚಾವಾಗುವುದು ಹೇಗೆ ಎಂಬ ಪರಿಕಲ್ಪನೆಯಲ್ಲಿ ಮೂಡಿಬರುತ್ತದೆ. ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಖ್ಯಾತ ಟೆನ್ನಿಸ್ ತಾರೆ ರೋಜರ್ ಫೆಡರರ್ ಸೇರಿದಂತೆ ಅನೇಕರು ಬ್ರಿಟನ್ ಮೂಲದ ಬೇರ್ ಗ್ರಿಲ್ಸ್ ನಡೆಸಿಕೊಡುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ:

KBC 13: ಫುಡ್ ಡೆಲಿವರಿ ಬಾಯ್ ಆದ ಅಮಿತಾಭ್ ಬಚ್ಚನ್; ಭಾವುಕ ಸನ್ನಿವೇಶಕ್ಕೆ ಸಾಕ್ಷಿಯಾಯ್ತು ಕೆಬಿಸಿ ವೇದಿಕೆ

ಪದೇ ಪದೇ ಮದ್ದೂರಿಗೆ ಭೇಟಿ: ಅಭಿಷೇಕ್ ಅಂಬರೀಶ್ ಮದ್ದೂರಿನಲ್ಲಿ ಚುನಾವಣೆಗೆ ನಿಲ್ತಾರಾ?

(Vicky Koushal joins with Ajay Devgan for Into the wild with Bear Gyllys show in Maldives)

Published On - 11:01 am, Thu, 16 September 21

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ