Weekend With Ramesh: ವೀಕೆಂಡ್ ವಿತ್ ರಮೇಶ್ ಅತಿಥಿಗಳ ಪಟ್ಟಿ ಬಹಿರಂಗಪಡಿಸಿದ ರಮೇಶ್

ವೀಕೆಂಡ್ ವಿತ್ ರಮೇಶ್ ಹೊಸ ಸೀಸನ್ ಮಾರ್ಚ್ 25 ರಿಂದ ಪ್ರಸಾರವಾಗಲಿದೆ. ಈ ಸೀಸನ್​ನಲ್ಲಿ ಸಾಧಕರ ಕುರ್ಚಿ ಮೇಲೆ ಕೂರಲಿರುವ ಅತಿಥಿಗಳ ಪಟ್ಟಿಯನ್ನು ನಿರೂಪಕ ರಮೇಶ್ ಅರವಿಂದ್ ಬಹಿರಂಗಗೊಳಿಸಿದ್ದಾರೆ. ಇಲ್ಲಿದೆ ನೋಡಿ ಪಟ್ಟಿ.

Weekend With Ramesh: ವೀಕೆಂಡ್ ವಿತ್ ರಮೇಶ್ ಅತಿಥಿಗಳ ಪಟ್ಟಿ ಬಹಿರಂಗಪಡಿಸಿದ ರಮೇಶ್
ವೀಕೆಂಡ್ ವಿತ್ ರಮೇಶ್
Follow us
ಮಂಜುನಾಥ ಸಿ.
|

Updated on: Mar 20, 2023 | 6:27 PM

ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ (Reality Show) ಒಂದಾಗಿದ ‘ವೀಕೆಂಡ್ ವಿತ್ ರಮೇಶ್‘ (Weekend With Ramesh) ಹೊಸ ಸೀಸನ್ ಪ್ರಾರಂಭವಾಗಲಿದೆ. ಶೋನ ಪ್ರೋಮೋಗಳು ಈಗಾಗಲೇ ಬಿಡುಗಡೆ ಆಗಿದ್ದು, ಮೊದಲ ಸಂಚಿಕೆ ಮಾರ್ಚ್ 25 ರಂದು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಐದನೇ ಸೀಸನ್ ಇದಾಗಿರಲಿದ್ದು ಸೀಸನ್ ಪ್ರಾರಂಭಕ್ಕೂ ಮುನ್ನ ನಿರೂಪಕ ರಮೇಶ್ ಅರವಿಂದ್ ಹಾಗೂ ಜೀ ವಾಹಿನಿಯ ಚೀಫ್ ಕಂಟೆಂಟ್ ಆಫೀಸರ್ ರಾಘವೇಂದ್ರ ಹುಣಸೂರು ಅವರು ಪತ್ರಿಕಾಗೋಷ್ಠಿಯಲ್ಲಿ ಶೋ ಕುರಿತಾಗಿ ಮಾಹಿತಿ ನೀಡಿದ್ದು, ಮೊದಲ ಎಪಿಸೋಡ್​ನ ಅತಿಥಿ ಯಾರಾಗಲಿದ್ದಾರೆ ಎಂಬುದರ ಜೊತೆಗೆ ಈ ಸೀಸನ್​ನಲ್ಲಿ ಕಾಣಿಸಿಕೊಳ್ಳುವ ಇತರೆ ಕೆಲವು ಅತಿಥಿಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಇಷ್ಟು ದಿನ ಹರಿದಾಡಿದ್ದ ಸುದ್ದಿಯ ಪ್ರಕಾರ ಮೊದಲ ಎಪಿಸೋಡ್​ನಲ್ಲಿ ರಿಷಬ್ ಶೆಟ್ಟಿ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ ಅದು ಸುಳ್ಳಾಗಿದ್ದು ಮೊದಲ ಎಪಿಸೋಡ್​ಗೆ ಸ್ಯಾಂಡಲ್​ವುಡ್ ಕ್ವೀನ್ ನಟಿ ರಮ್ಯಾ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ರಮ್ಯಾ ಜೊತೆಗಿನ ಎಪಿಸೋಡ್​ನ ಚಿತ್ರೀಕರಣ ಮಾರ್ಚ್ 21 ರಿಂದ ಪ್ರಾರಂಭವಾಗಲಿದೆ. ಎರಡನೇ ಎಪಿಸೋಡ್ ನಲ್ಲಿ ಡ್ಯಾನ್ಸ್ ಲಿಜೆಂಡ್ ಪ್ರಭುದೇವ ಸಾಧಕರ ಕುರ್ಚಿಯ ಮೇಲೆ ಕೂರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಸೀಸನ್​ನಲ್ಲಿ ನಟ ಧ್ರುವ ಸರ್ಜಾ, ನಟಿ ರಚಿತಾ ರಾಮ್, ನಟಿ ಮಾಲಾಶ್ರೀ, ಇಶಾ ಫೌಂಡೇಶನ್​ನ ಜಗ್ಗಿ ವಾಸುದೇವ್ , ಖ್ಯಾತ ಹೃದ್ರೋಗ ತಜ್ಞ ಮಂಜುನಾಥ್ ಸೇರಿದಂತೆ ಇನ್ನೂ ಹಲವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷವೆಂದರೆ ಇನ್ನು 16 ಸಾಧಕರ ಬಳಿಕ ನೂರನೇ ಸಾಧಕರು ಬರಲಿದ್ದು, ಆ ಎಪಿಸೋಡ್​ಗೆ ಬಹಳ ವಿಶೇಷ ಅತಿಥಿಯೊಬ್ಬರು ಸಾಧಕರ ಕುರ್ಚಿ ಏರಲಿದ್ದಾರೆ. ನೂರನೇ ಎಪಿಸೋಡ್​ಗೆ ಬರುವ ಅತಿಥಿ ಆ ಚೇರ್​ಗೆ ನ್ಯಾಯ ಕೊಡಲಿದ್ದಾರೆ ಎಂದಿದ್ದಾರೆ ನಟ ರಮೇಶ್.

ಇಲ್ಲಿಯವರೆಗೂ 84 ಸಾಧಕರು ಕುರ್ಚಿಯ ಮೇಲೆ ಕೂತಿದ್ದು 110 ಸಂಚಿಕೆಗಳು ಪ್ರಸಾರವಾಗಿವೆ. ಇನ್ನು 16 ಸಾಧಕರು ಅದ ಬಳಿಕ ಸೆಂಚೂರಿ ಭಾರಿಸುತ್ತೇವೆ. ಸಿನಿಮಾದಲ್ಲಿಯೂ ಸೆಂಚುರಿ ಹೋಡಿದಿದ್ದೇನೆ. ಈಗ ಇದರಲ್ಲೂ ಹೋಡೆದರೆ ಖುಷಿ ಆಗುತ್ತ್ತದೆ. ಇದನ್ನೆಲ್ಲ ನೋಡಿದಾಗ ನನಗೆ ಅನಿಸುತ್ತಿರುವುದು, ಎಲ್ಲಾ ಸೇಮ್, ಎಲ್ಲಾ ಸಾಧಕರು ಸಾಧನೆಗೆ ಹೋರಾಟವನ್ನು ಮಾಡಿದ್ದಾರೆ. ಕರ್ನಾಟಕದಲ್ಲಿ ಸಾಧಕರಿಗೆ ಕೊರತೆ ಇಲ್ಲ. ಕೇವಲ ನಟ, ರಾಜಕಾರಣಿ ಅಲ್ಲ ವೈದ್ಯರು, ರೈತರು, ನರ್ಸ್, ಹೀಗೆ ಹಲವರನ್ನು ಕರೆಸಬಹುದು. ಸ್ಪೂರ್ತಿ ತುಂಬುವಂತಹ ಕೆಲಸ ಮಾಡಬೇಕು. ಅದರಿಂದ, ಕರ್ನಾಟಕದಲ್ಲಿರೋ ಎಲ್ಲರಿಗೂ ತಮ್ಮ ನಿಜವಾದ ಶಕ್ತಿಯ ಅರಿವಾಗಿ, ಎಲ್ಲರೂ ತಮ್ಮ ಅತ್ಯುತ್ತಮ ವ್ಯಕ್ತಿತ್ವನ್ನು ಹೊರಗೆ ತೋರಬೇಕು ಅನ್ನುವುದೇ ವೀಕೆಂಡ್ ವಿತ್ ರಮೇಶ್ ಅನ್ನೋದೆ ಉದ್ದೇಶ ಎಂದರು ರಮೇಶ್ ಅರವಿಂದ್. ಇದೇ ಮಾರ್ಚ್ 25 ರಿಂದ ಸೀಸನ್ 5 ಪ್ರಸಾರವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್