AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಿಗ್​ಬಾಸ್ ಮನೆಗೆ ಹೋಗ್ತಾರಾ ವರ್ತೂರು ಸಂತೋಷ್: ವಕೀಲರು ಹೇಳಿದ್ದೇನು?

Varthur Santhosh: ಬಿಗ್​ಬಾಸ್ ಮನೆಯಲ್ಲಿರುವಾಗಲೇ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ವರ್ತೂರು ಸಂತೋಷ್ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದು ಮತ್ತೆ ಬಿಗ್​ಬಾಸ್​ಗೆ ಹೋಗುತ್ತಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಆ ಬಗ್ಗೆ ಅವರು ವಕೀಲರು ಮಾತನಾಡಿದ್ದಾರೆ.

ಮತ್ತೆ ಬಿಗ್​ಬಾಸ್ ಮನೆಗೆ ಹೋಗ್ತಾರಾ ವರ್ತೂರು ಸಂತೋಷ್: ವಕೀಲರು ಹೇಳಿದ್ದೇನು?
ಮಂಜುನಾಥ ಸಿ.
|

Updated on: Oct 27, 2023 | 8:23 PM

Share

ಬಿಗ್​ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ (Varthur Santhosh), ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿ ಇದೀಗ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಜೈಲಿನಿಂದ ಹೊರಬಂದ ಸಂತೋಷ್​ರನ್ನು ಅವರ ಗೆಳೆಯರು, ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬಿಗ್​ಬಾಸ್ ಮನೆಯಿಂದಲೇ ಬಂಧನಕ್ಕೆ ಒಳಗಾಗಿದ್ದ ಸಂತೋಷ್ ಈಗ ಮತ್ತೆ ಬಿಗ್​ಬಾಸ್ ಮನೆಗೆ ಹೋಗುತ್ತಾರಾ ಎಂಬ ಪ್ರಶ್ನೆ ಎಲ್ಲರನ್ನೂ ಮೂಡಿದೆ.

ಪ್ರಸ್ತುತ ಜಾಮೀನಿನ ಮೇಲೆ ಹೊರಬಂದಿರುವ ವರ್ತೂರು ಸಂತೋಷ್​ಗೆ ನ್ಯಾಯಾಲಯ ಷರತ್ತುಗಳನ್ನು ವಿಧಿಸಿರುತ್ತದೆ ಹೀಗಿರುವಾಗ ಅವರು ಬಿಗ್​ಬಾಸ್​ ಮನೆಗೆ ಮತ್ತೆ ಹೋಗಬಲ್ಲರೆ? ಎಂಬ ಅನುಮಾನ ಮೂಡಿತ್ತು, ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ವರ್ತೂರು ಸಂತೋಷ್ ಪರ ವಕೀಲರು, ‘ಸಂತೋಷ್ ಬಯಸಿದಲ್ಲಿ ಅವರು ಮತ್ತೆ ಬಿಗ್​ಬಾಸ್ ಮನೆಗೆ ಹೋಗಬಹುದು ಅದಕ್ಕೆ ಯಾವುದೇ ಕಾನೂನು ತೊಡಕಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ವರ್ತೂರು ಸಂತೋಷ್ ಮೇಲೆ ಮಾಡಲಾಗಿರುವ ಆರೋಪ ಸಮನ್ಸ್ ನೀಡಿ ವಿಚಾರಣೆ ಮಾಡಬೇಕಾಗಿದ್ದ ಆರೋಪ ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಅರ್ಥಹೀನ ಸೆಕ್ಷನ್​ಗಳನ್ನು ಹೇರಿದ್ದಾರೆ. ಆದರೆ ನ್ಯಾಯಾಲಯವು ಯಾವುದೇ ಹೆಚ್ಚುವರಿ ಷರತ್ತುಗಳನ್ನು ವಿಧಿಸದೆ ಜಾಮೀನು ನೀಡಿದೆ. ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಂಪರ್ಕ ಬಯಸಿದಾಗ ಅವರಿಗೆ ಸಂಪರ್ಕಕ್ಕೆ ದೊರಕಬೇಕು ಎಂದಷ್ಟೆ ನ್ಯಾಯಾಲಯ ಹೇಳಿದೆ. ಹಾಗಾಗಿ ಅವರು ಬಿಗ್​ಬಾಸ್ ಮನೆಗೆ ಹೋಗಬಹುದು” ಎಂದಿದ್ದಾರೆ.

ಇದನ್ನೂ ಓದಿ:ಜೈಲಿಂದ ಹೊರಬಂದ ವರ್ತೂರು ಸಂತೋಷ್​ಗೆ ಸಿಕ್ಕ ಅದ್ಧೂರಿ ಸ್ವಾಗತ ಹೀಗಿತ್ತು ನೋಡಿ

”ವರ್ತೂರು ಸಂತೋಷ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿರುವ ಅರಣ್ಯಾ ಇಲಾಖೆ ವಿರುದ್ಧ ನಾವು ಕಾನೂನು ಹೋರಾಟ ಮಾಡಲಿದ್ದೇವೆ. ಹುಲಿ ಕೊಂದು ಉಗುರು ತಂದಿದ್ದಾರೆಂಬಂತೆ ಅವರು ಆರೋಪಗಳನ್ನು ಮಾಡಿ, ಸೆಕ್ಷನ್​ಗಳನ್ನು ಹೇರಿದ್ದಾರೆ. ವರ್ತೂರು ಸಂತೋಷ್ ಧರಿಸಿದ್ದ ಹುಲಿ ಉಗುರನ್ನು ಫೊರ್ಯಾನ್ಸಿಕ್ ಪರೀಕ್ಷೆಗೆ ಕಳಿಸಲಾಗಿದೆ. ಅದರ ವರದಿ ಬಂದ ಬಳಿಕವಷ್ಟೆ ಸಂತೋಷ್ ವಿರುದ್ಧ ಮುಂದಿನ ಕ್ರಮ ಜರುಗಿಸಬಹುದಾಗಿದೆ” ಎಂದಿದ್ದಾರೆ ವಕೀಲರು.

ಬಿಗ್​ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಚೈನು ಧರಿಸಿದ್ದರು, ಇದನ್ನು ಆಧರಿಸಿ ಸುಮೋಟೊ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದರು. ಸೋಮವಾರದಂದು ಬಿಗ್​ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅವರಿಗೆ ಇಂದು (ಅಕ್ಟೊಬರ್ 27) ಜಾಮೀನು ದೊರೆತಿದೆ. ಜೈಲಿನಿಂದ ಹೊರಬಂದ ವರ್ತೂರು ಸಂತೋಷ್ ಅವರಿಗೆ ಅದ್ಧೂರಿ ಸ್ವಾಗತ ಸಹ ದೊರಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​