AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೇಲ್ಸ್​ಮೆನ್ ತರ ನೋಡ್ತಿದ್ರು’; ಯಶ್ ಹೇಳಿದ ಹಳೆಯ ವಿಡಿಯೋ ವೈರಲ್

ತೆಲುಗು ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಬಂದಿವೆ ನಿಜ. ಈ ಕಾರಣದಿಂದ ತೆಲುಗು ಚಿತ್ರರಂಗದಿಂದ ಒಂದು ದೊಡ್ಡ ಸಿನಿಮಾ ಬರುತ್ತದೆ ಎಂದರೆ ಅದನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ಅನೇಕರು ಕಾದಿರುತ್ತಾರೆ. ಆದರೆ, ‘ಕೆಜಿಎಫ್’ಗೂ ಮೊದಲು ಆ ರೀತಿ ಇರಲಿಲ್ಲ. ಅನೇಕರಿಗೆ ಕನ್ನಡದ ಸಿನಿಮಾಗಳ ಬಗ್ಗೆ ಗೊತ್ತೇ ಇರಲಿಲ್ಲ. ಯಶ್ ಎಲ್ಲವನ್ನೂ ಬದಲಸಿದರು.

‘ಸೇಲ್ಸ್​ಮೆನ್ ತರ ನೋಡ್ತಿದ್ರು’; ಯಶ್ ಹೇಳಿದ ಹಳೆಯ ವಿಡಿಯೋ ವೈರಲ್
ಯಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 20, 2025 | 8:00 AM

Share

ಯಶ್ ಅವರು ‘ಕೆಜಿಎಫ್’ ಚಿತ್ರವನ್ನು ವಿಶ್ವ ಮಟ್ಟಕ್ಕೆ ತೆಗೆದುಕೊಂಡು ಹೋದರು. ಈ ಚಿತ್ರವನ್ನು ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್ ಮಾಡುವ ಆಲೋಚನೆ ಪ್ರಶಾಂತ್​ ನೀಲ್ ಹಾಗೂ ಹೊಂಬಾಳೆ ಫಿಲ್ಮ್ಸ್​​ಗೆ ಇತ್ತು ಎನ್ನಲಾಗಿತ್ತು. ಆದರೆ, ಇದನ್ನು ದೊಡ್ಡ ಹಂತಕ್ಕೆ ತೆಗೆದುಕೊಂಡು ಹೋಗಿದ್ದು ಯಶ್. ಈ ಬಗ್ಗೆ ಅವರು ಈ ಮೊದಲು ಮಾತನಾಡಿದ್ದರು. ಅವರ ಕೆಲಸವನ್ನು, ಅವರು ಹಾಕಿದ ಶ್ರಮವನ್ನು ಎಲ್ಲರೂ ಹೊಗಳಲೇ ಬೇಕು.

ತೆಲುಗು ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಬಂದಿವೆ ನಿಜ. ಈ ಕಾರಣದಿಂದ ತೆಲುಗು ಚಿತ್ರರಂಗದಿಂದ ಒಂದು ದೊಡ್ಡ ಸಿನಿಮಾ ಬರುತ್ತದೆ ಎಂದರೆ ಅದನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ಅನೇಕರು ಕಾದಿರುತ್ತಾರೆ. ಆದರೆ, ‘ಕೆಜಿಎಫ್’ಗೂ ಮೊದಲು ಆ ರೀತಿ ಇರಲಿಲ್ಲ. ಅನೇಕರಿಗೆ ಕನ್ನಡದ ಸಿನಿಮಾಗಳ ಬಗ್ಗೆ ಗೊತ್ತೇ ಇರಲಿಲ್ಲ.

ಯಶ್ ಕೆಜಿಎಫ್​ನ ಪ್ಯಾನ್ ಇಂಡಿಯಾ ಮಾಡ್ತೀನಿ ಎಂದು ಹೋದಾಗ, ಸೇಲ್ಸ್​ಮೆನ್ ರೀತಿ ನೋಡುತ್ತಿದ್ದರಂತೆ. ಆದರೆ, ಅದನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋದ ಖ್ಯಾತಿ ಅವರಿಗೆ ಇದೆ. ಆಗ ಎದುರಾದ ಸಮಸ್ಯೆಗಳ ಬಗ್ಗೆ ಹೇಳಿದ್ದರು. ‘ಕೆಜಿಎಫ್​ನ ಪ್ಯಾನ್ ಇಂಡಿಯಾ ಎಂದು ತೆಗೆದುಕೊಂಡು ಹೋದಾಗ, ಸೇಲ್ಸ್ ಮೆನ್ ಬಂದಾಗ ಬೇಡ ನಮಗೆ ಅಂತಾರಲ್ಲ ಆ ರೀತಿ ಬೇಡ ಅಂತಿದ್ರು. ಕ್ರೆಡಿಟ್ ಕಾರ್ಡ್​ಗೆ ಕರೆ ಮಾಡಿದ ತರ ಫೀಲ್. ಆದರೆ, ಈಗ ಮೆಂಬರ್​ಶಿಪ್​ ತರ ಈಗ ಕೇಳ್ತಾ ಇದಾರೆ’ ಎಂದು ಯಶ್ ಹೇಳಿದ್ದರು.

ಇದನ್ನೂ ಓದಿ: ‘ಕಾಂತಾರ’ ಕಲೆಕ್ಷನ್: ನಂಬರ್ 1 ಆಗಲು ಇಡಬೇಕಿರುವುದು ಕೆಲವೇ ಹೆಜ್ಜೆ

ಇದು ನಿಜವಾಗಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿ ಗಮನ ಸೆಳೆದಿದೆ. ಇಷ್ಟೇ ಅಲ್ಲ, ‘ಸು ಫ್ರಮ್ ಸೋ’ ಹೆಸರಿನ ಸಾಧಾರಣ ಬಜೆಟ್ ಚಿತ್ರ ಕೂಡ 100 ಕೋಟಿ ರೂಪಾಯಿ ಗಳಿಸಿದೆ. ಇದಕ್ಕೆಲ್ಲ ಕಾರಣ ಆಗಿದ್ದು, ಪ್ಯಾನ್ ಇಂಡಿಯಾ ಎಂಬ ಕಾನ್ಸೆಪ್ಟ್. ಇದಕ್ಕೆ ಯಶ್ ಅವರು ಬುನಾದಿ ಹಾಕಿದ್ದಾರೆ ಎಂದರೂ ತಪ್ಪಾಗಲಾರದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ