AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮಂದಿರಿಗೆ ಸುವರ್ಣಾವಕಾಶ; ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’

ಕರುನಾಡ ಅಮ್ಮಂದಿರ ನೃತ್ಯದ ಕನಸುಗಳಿಗೆ ರೆಕ್ಕೆ ಕಟ್ಟಲು ಜೀ ಕನ್ನಡ ವಾಹಿನಿಯು 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್' ಎಂಬ ಅದ್ಭುತ ರಿಯಾಲಿಟಿ ಶೋ ಮೂಲಕ ಮರಳಿ ಬರುತ್ತಿದೆ. ಸಂಸಾರದ ಜವಾಬ್ದಾರಿಗಳ ಮಧ್ಯೆ ತಮ್ಮ ಪ್ರತಿಭೆಯನ್ನು ಮರೆತಿದ್ದ ತಾಯಂದಿರಿಗಾಗಿ ಜುಲೈ 24ರಿಂದ ರಾಜ್ಯಾದ್ಯಂತ ಆಡಿಷನ್‌ಗಳು ಆರಂಭವಾಗುತ್ತಿದ್ದು, ವೇದಿಕೆಯ ಮೇಲೆ ಮಿಂಚಲು ಸುವರ್ಣ ಅವಕಾಶ ಲಭಿಸಿದೆ.

ಅಮ್ಮಂದಿರಿಗೆ ಸುವರ್ಣಾವಕಾಶ; ಜೀ ಕನ್ನಡದಲ್ಲಿ 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ - ಸೂಪರ್ ಮಾಮ್'
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್
ರಾಜೇಶ್ ದುಗ್ಗುಮನೆ
|

Updated on: Jul 14, 2026 | 12:13 PM

Share

ಮುಖ್ಯಾಂಶಗಳು

  • ಅಮ್ಮಂದಿರ ನೃತ್ಯದ ಕನಸು ನನಸಾಗಿಸಲು ಜೀ ಕನ್ನಡದ ಹೊಸ ಹೆಜ್ಜೆ
  • ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ ಡಿಕೆಡಿ ಸೂಪರ್ ಮಾಮ್ ಪ್ರೋಮೋ
  • ಜುಲೈ 24ರಿಂದ ರಾಜ್ಯಾದ್ಯಂತ ಆಡಿಷನ್‌ಗಳ ಆರಂಭ

ಮನೆಯ ಜವಾಬ್ದಾರಿಗಳು, ಸಂಸಾರದ ಒತ್ತಡಗಳ ಮಧ್ಯೆ ತಮ್ಮ ನೃತ್ಯದ ಕನಸುಗಳನ್ನು ಬದಿಗಿಟ್ಟಿದ್ದ ಕರುನಾಡಿನ ಅಮ್ಮಂದಿರಿಗಾಗಿ ಜೀ ಕನ್ನಡ ವಾಹಿನಿಯು ಮತ್ತೊಮ್ಮೆ ಒಂದು ಅದ್ಭುತ ವೇದಿಕೆಯನ್ನು ಸಿದ್ಧಪಡಿಸಿದೆ. ಹೌದು, ಕರುನಾಡಿನಾದ್ಯಂತ ಅಪಾರ ಜನಪ್ರಿಯತೆ ಗಳಿಸಿರುವ ಡ್ಯಾನ್ಸ್ ರಿಯಾಲಿಟಿ ಶೋ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ (DKD) ಇದೀಗ ಅಮ್ಮಂದಿರಿಗಾಗಿ ‘ಸೂಪರ್ ಮಾಮ್’ ಆವೃತ್ತಿಯೊಂದಿಗೆ ಧೂಳೆಬ್ಬಿಸಲು ಸಜ್ಜಾಗಿದೆ. ಇಷ್ಟು ದಿನ ಸಣ್ಣ ಮಕ್ಕಳಿಗೆ ಹಾಗೂ ಮಧ್ಯ ವಯಸ್ಸಿನವರಿಗೆ ಮಾತ್ರ ಅವಕಾಶ ಸಿಗುತ್ತಿತ್ತು. ಆದರೆ, ಈಗ ಅಮ್ಮಂದಿರಿಗೂ ಅವಕಾಶ ನೀಡಲಾಗುತ್ತಿದೆ.

ಕೇವಲ ಕರ್ನಾಟಕದ ಅಮ್ಮಂದಿರಿಗಾಗಿ ಮೀಸಲಾದ ವಿಶೇಷ ಡ್ಯಾನ್ಸ್ ಶೋ ಇದಾಗಿದೆ. ಜುಲೈ 24ರಿಂದ ದೇಶಾದ್ಯಂತ ಆಡಿಷನ್‌ಗಳು ಅಧಿಕೃತವಾಗಿ ಪ್ರಾರಂಭವಾಗಲಿವೆ. ಈ ಶೋ ಜೀ ಕನ್ನಡ ವಾಹಿನಿ ಹಾಗೂ ಜೀ5ನಲ್ಲಿ ಪ್ರಸಾರವಾಗಲಿದೆ.

View this post on Instagram

A post shared by Zee Kannada (@zeekannada)

ನಿಮ್ಮ ಮಮ್ಮಿಗೆ ಡ್ಯಾನ್ಸ್ ಬರುತ್ತಾ?

‘ಮಕ್ಕಳೇ, ನಿಮ್ಮ ತಾಯಿಗೆ ಡ್ಯಾನ್ಸ್ ಬರುತ್ತಾ? ಮಮ್ಮೀಸ್ ಆ್ಯಂಡ್ ಮಮ್ಮೀಸ್ ನಿಮ್ಮ ತಾಯಿಗೆ ಡ್ಯಾನ್ಸ್ ಬರುತ್ತಾ’ ಎಂದು ಪ್ರೋಮೋದಲ್ಲಿ ಹೇಳಲಾಗಿದೆ. ಮನೆಗೆಲಸ, ಮಕ್ಕಳ ಜವಾಬ್ದಾರಿ ಅಂತಲೇ ಕಾಲ ಕಳೆದು, ವೇದಿಕೆಯಿಂದ ದೂರವುಳಿದಿದ್ದ ಅಮ್ಮಂದಿರಿಗೆ ತೆರೆಮೇಲೆ ಮಿಂಚುವಂತೆ ಮಾಡಲು ಜೀ ಕನ್ನಡ ಈ ವೇದಿಕೆಯನ್ನು ಕಲ್ಪಿಸಿಕೊಡುತ್ತಿದೆ.

ಇದನ್ನೂ ಓದಿ: ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಫಿನಾಲೆಗೆ ವೇದಿಕೆ ರೆಡಿ; ಯಾರಾಗ್ತಾರೆ ಚಾಂಪಿಯನ್?

ಸೀರೆ ಉಟ್ಟು, ಕಾಲಿಗೆ ಸ್ಟೈಲಿಶ್ ಶೂ ಧರಿಸಿ, ಕಣ್ಣಿಗೆ ಕೂಲ್ ಆಗಿರೋ ಸನ್ ಗ್ಲಾಸ್ ಹಾಕಿ ವಿಭಿನ್ನ ಹಾಗೂ ರಗಡ್ ಲುಕ್‌ನಲ್ಲಿ ಕರ್ನಾಟಕದ ಅಮ್ಮಂದಿರು ವೇದಿಕೆಯ ಮೇಲೆ ಜಬರ್ದಸ್ತ್ ಆಗಿ ಹೆಜ್ಜೆ ಹಾಕಲಿದ್ದಾರೆ. ನೃತ್ಯದ ಮೇಲೆ ಒಲವಿರುವ ಕರುನಾಡಿನ ಪ್ರತಿಯೊಬ್ಬ ಅಮ್ಮಂದಿರು ಇದರಲ್ಲಿ ಉತ್ಸಾಹದಿಂದ ಭಾಗವಹಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಮತ್ತು ನಿಮ್ಮ ಹತ್ತಿರದ ಆಡಿಷನ್ ಸ್ಥಳಗಳ ಮಾಹಿತಿಗಾಗಿ ಜೀ ಕನ್ನಡದ ಅಧಿಕೃತ ಸಾಮಾಜಿಕ ಮಾಧ್ಯಮ ಪುಟಗಳನ್ನು ಗಮನಿಸಬೇಕಿದೆ.

ನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ