ನಾಲ್ಕನೇ ಮದುವೆ ಆದ ನರೇಶ್; ನಟಿ ಪವಿತ್ರಾ ಲೋಕೇಶ್ ಜೊತೆ ಸಪ್ತಪದಿ ತುಳಿದ ಹೀರೋ

Naresh Pavitra Lokesh Marriage: ಪವಿತ್ರಾಗೆ ಕಿಸ್ ಮಾಡುತ್ತಿರುವ ವಿಡಿಯೋನ ಹೊಸ ವರ್ಷದ ಸಂದರ್ಭದಲ್ಲಿ ನರೇಶ್ ಶೇರ್ ಮಾಡಿಕೊಂಡಿದ್ದರು. ಈಗ ಅವರು ಮದುವೆ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ನಾಲ್ಕನೇ ಮದುವೆ ಆದ ನರೇಶ್; ನಟಿ ಪವಿತ್ರಾ ಲೋಕೇಶ್ ಜೊತೆ ಸಪ್ತಪದಿ ತುಳಿದ ಹೀರೋ
ನರೇಶ್-ಪವಿತ್ರಾ

Updated on: Mar 10, 2023 | 1:07 PM

ನರೇಶ್ ಹಾಗೂ ಪವಿತ್ರಾ ಲೋಕೇಶ್ (Pavitra Lokesh) ಮದುವೆ ಆಗುತ್ತಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈಗ ಇದು ನಿಜವಾಗಿದೆ. ಇವರ ಮದುವೆ ವಿಡಿಯೋ ವೈರಲ್ ಆಗಿದೆ. ಪವಿತ್ರಾ ಲೋಕೇಶ್ ಜೊತೆ ಸಪ್ತಪದಿ ತುಳಿದ ವಿಡಿಯೋನ ನರೇಶ್ ಅವರೇ ಸ್ವತಃ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಆಶೀರ್ವಾದ ಮಾಡುವಂತೆ ಅವರು ಅಭಿಮಾನಿಗಳಲ್ಲಿ ಕೋರಿದ್ದಾರೆ. ಈ ವಿಡಿಯೋಗೆ ಬಗೆಬಗೆಯಲ್ಲಿ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಪವಿತ್ರಾ ಲೋಕೇಶ್ ಹಾಗೂ ನರೇಶ್ ಮಧ್ಯೆ ಪ್ರೀತಿ ಚಿಗುರಿ ಸಾಕಷ್ಟು ಸಮಯ ಕಳೆದಿದೆ. ಈ ವಿಚಾರ ಸಾಕಷ್ಟು ಸುದ್ದಿ ಆಗಿತ್ತು. ಈ ವಿಚಾರದಲ್ಲಿ ನರೇಶ್ ಹಾಗೂ ಅವರ ಪತ್ನಿ ರಮ್ಯಾ ಕಿತ್ತಾಡಿಕೊಂಡಿದ್ದರು. ಈ ವಿವಾದ ತಣ್ಣಗಾಯಿತು ಎನ್ನುವಾಗ ಪವಿತ್ರಾಗೆ ಕಿಸ್ ಮಾಡುತ್ತಿರುವ ವಿಡಿಯೋನ ಹೊಸ ವರ್ಷದ ಸಂದರ್ಭದಲ್ಲಿ ನರೇಶ್ ಶೇರ್ ಮಾಡಿಕೊಂಡಿದ್ದರು. ಈಗ ಅವರು ಮದುವೆ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಅನೇಕರು ನವ ದಂಪತಿಗೆ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಮದುವೆ ಅಲ್ಲ, ಸಿನಿಮಾ ಪ್ರಮೋಷನ್ ಗಿಮಿಕ್​? ಪವಿತ್ರಾ​-ನರೇಶ್ ಕಿಸ್ಸಿಂಗ್ ವಿಡಿಯೋ ಬಗ್ಗೆ ಅನುಮಾನ

ಇದನ್ನೂ ಓದಿ
‘NBK108’ ಸೆಟ್​ನಲ್ಲಿ ಕನ್ನಡತಿ ಶ್ರೀಲೀಲಾ; ಕಣ್​ ಹೊಡೆದು ಬಾಲಯ್ಯನ ಚಿತ್ರಕ್ಕೆ ಎಂಟ್ರಿ
Ramya Raghupathi: ‘ನಾನು ವಿಚ್ಛೇದನ ಕೊಡಲ್ಲ’; ನರೇಶ್​ಗೆ ನೇರವಾಗಿ ಹೇಳಿದ ಪತ್ನಿ ರಮ್ಯಾ ರಘುಪತಿ
ಮದುವೆ ಅಲ್ಲ, ಸಿನಿಮಾ ಪ್ರಮೋಷನ್ ಗಿಮಿಕ್​? ಪವಿತ್ರಾ​-ನರೇಶ್ ಕಿಸ್ಸಿಂಗ್ ವಿಡಿಯೋ ಬಗ್ಗೆ ಅನುಮಾನ

ನರೇಶ್ ಹೇಳಿದ್ದೇನು?

‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್​’ ಎಂದು ನರೇಶ್​ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಒಂದೇ ರೂಮ್​ನಲ್ಲಿ ನಟಿ ಪವಿತ್ರಾ ಲೋಕೇಶ್, ನಟ ನರೇಶ್: ರೂಂ ಮುಂದೆ ರಮ್ಯ ರಘುಪತಿ ಹೈಡ್ರಾಮಾ

ವಿಚ್ಛೇದನ ಸಿಗದೆ ಮದುವೆ ಆದ್ರಾ?

ನರೇಶ್ ಹಾಗೂ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಕೌಟುಂಬಿಕ ಕಲಹ ಬೀದಿಗೆ ಬಂದಾಗ ಪವಿತ್ರಾ ಲೋಕೇಶ್ ಹೆಸರು ಹೊರಬಿದ್ದಿತ್ತು. ನಟಿ ಪವಿತ್ರಾ ಲೋಕೇಶ್ ಅವರನ್ನು ನರೇಶ್ ಲವ್​ ಮಾಡುತ್ತಿದ್ದಾರೆ, ಅವರಿಬ್ಬರು ಒಟ್ಟಿಗೆ ಬಾಳುತ್ತಿದ್ದಾರೆ ಎಂದು ಆರೋಪಿಸಿ ರಮ್ಯಾ ರಘುಪತಿ ಈ ಮೊದಲು ಗಲಾಟೆ ಮಾಡಿದ್ದರು. ಆಗಲೇ ನರೇಶ್ ಹಾಗೂ ಪವಿತ್ರಾ ಮದುವೆ ಆಗುತ್ತಾರೆ ಎಂಬುದು ಗೊತ್ತಾಗಿತ್ತು. ಹೊಸ ವರ್ಷದ ಆರಂಭದಲ್ಲಿ ಮಾತನಾಡಿದ್ದ ರಮ್ಯಾ, ‘ನಾವಿಬ್ಬರೂ ಬೇರೆ ಆಗುವುದಿಲ್ಲ ಎಂದು ಮಗನಿಗೆ ಪ್ರಾಮಿಸ್ ಮಾಡಿದ್ದೇನೆ. ಅದನ್ನು ಉಳಿಸಿಕೊಳ್ಳುತ್ತೇನೆ. ಏನೇ ಆದರೂ ವಿಚ್ಛೇದನ ಕೊಡಲ್ಲ’ ಎಂದಿದ್ದರು. ಈಗ ವಿಚ್ಛೇದನ ಸಿಗದೆಯೇ ಪವಿತ್ರಾ ಲೋಕೇಶ್ ಅವರನ್ನು ನರೇಶ್ ಮದುವೆ ಆದರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:41 am, Fri, 10 March 23