AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತಕ್ಕೆ ತುತ್ತಾದ ನಟ ಸಾಯಿ ಧರಂ ತೇಜ್: ಅತಿವೇಗದಲ್ಲಿ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದೇ ಕಾರಣ ಎಂಬ ಶಂಕೆ

ಅತಿಯಾದ ವೇಗದಲ್ಲಿ ಬೈಕ್​ ಓಡಿಸಿದ್ದರಿಂದಲೇ ಅನಾಹುತ ಸಂಭವಿಸಿರುವುದು ಮೇಲ್ನೋಟಕ್ಕೆ ಕಾಣಿಸಿದ್ದು, ಸ್ಪೋರ್ಟ್ಸ್ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿ ಧರಂ ತೇಜ್ ಅವರ​ ಬಲಗಣ್ಣು, ಎದೆ, ಹೊಟ್ಟೆ ಭಾಗದಲ್ಲಿ ಗಾಯಗಳಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಭೀಕರ ಅಪಘಾತಕ್ಕೆ ತುತ್ತಾದ ನಟ ಸಾಯಿ ಧರಂ ತೇಜ್: ಅತಿವೇಗದಲ್ಲಿ ಸ್ಪೋರ್ಟ್ಸ್​ ಬೈಕ್​ ಓಡಿಸಿದ್ದೇ ಕಾರಣ ಎಂಬ ಶಂಕೆ
ಭೀಕರ ಅಪಘಾತಕ್ಕೆ ತುತ್ತಾದ ನಟ ಸಾಯಿ ಧರಂ ತೇಜ್
TV9 Web
| Edited By: |

Updated on: Sep 11, 2021 | 6:58 AM

Share

ಹೈದರಾಬಾದ್: ತೆಲುಗು ನಟ ಸಾಯಿ ಧರಂ ತೇಜ್ ಚಲಾಯಿಸುತ್ತಿದ್ದ​ ಬೈಕ್ ಗಂಭೀರ​ ಅಪಘಾತಕ್ಕೆ ಒಳಗಾಗಿರುವ ಘಟನೆ ಹೈದರಾಬಾದ್‌ನ ಮಾದಾಪುರ ಕೇಬಲ್ ಬ್ರಿಡ್ಜ್​​ ಬಳಿ ನಡೆದಿದೆ. 34 ವರ್ಷದ ಈ ನಟ ತನ್ನ ಸ್ಪೋರ್ಟ್ಸ್ ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅಪಘಾತದಲ್ಲಿ ನಟ ಸಾಯಿ ಧರಂ ತೇಜ್ ಗಂಭೀರವಾಗಿ ಗಾಯಗೊಂಡಿದ್ದು, ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ವೇಳೆ ಸಾಯಿ ಧರಂ ತೇಜ್ ಹೆಲ್ಮೆಟ್​ ಧರಿಸಿದ್ದರು ಆದ್ದರಿಂದ ತಲೆ ಭಾಗಕ್ಕೆ ಬೀಳಬೇಕಾಗಿದ್ದ ತೀವ್ರ ಸ್ವರೂಪದ ಏಟು ತಪ್ಪಿಹೋಗಿದೆ. ಅತಿಯಾದ ವೇಗದಲ್ಲಿ ಬೈಕ್​ ಓಡಿಸಿದ್ದರಿಂದಲೇ ಅನಾಹುತ ಸಂಭವಿಸಿರುವುದು ಮೇಲ್ನೋಟಕ್ಕೆ ಕಾಣಿಸಿದ್ದು, ಸ್ಪೋರ್ಟ್ಸ್ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿ ಧರಂ ತೇಜ್ ಅವರ​ ಬಲಗಣ್ಣು, ಎದೆ, ಹೊಟ್ಟೆ ಭಾಗದಲ್ಲಿ ಗಾಯಗಳಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಅಪಘಾತಕ್ಕೆ ಒಳಗಾಗಿರುವ ಯುವ ನಟನನ್ನು ನೋಡಲು ನಟ ಚಿರಂಜೀವಿ, ಪವನ್​ ಕಲ್ಯಾಣ್​ ಸೇರಿದಂತೆ ಕೆಲವರು ಆಸ್ಪತ್ರೆಗೆ ಆಗಮಿಸಿದ್ದಾರೆ. ಸಾಯಿ ಧರಂ ತೇಜ್​ ಅವರನ್ನು ನೋಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪವನ್ ಕಲ್ಯಾಣ್, ಸಾಯಿ ಧರಮ್ ತೇಜ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರು ಕೋಮಾದಲ್ಲಿ ಇದ್ದಾರೆ. ಆದರೂ ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆ ಇದೆ. ಆ ಬಗ್ಗೆ ಚಿಂತಿಸಬೇಕಾದದ್ದು ಏನೂ ಇಲ್ಲ. ಇನ್ನೂ ಉತ್ತಮ ಚಿಕಿತ್ಸೆ ಬೇಕಾದಲ್ಲಿ ಅದಕ್ಕೆ ಸೂಕ್ತ ವ್ಯವಸ್ಥೆಯೂ ಆಗಲಿದೆ. ಗಾಬರಿ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರಾತ್ರಿ ಮತ್ತೊಂದು ಶಾಸಕ ಪುತ್ರಿ ಕಾರ್ ಅಪಘಾತ: ಯಲಹಂಕ ಫ್ಲೈ ಓವರ್ ಮೇಲೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು 

ಅಪಘಾತಕ್ಕೂ ಮುನ್ನ ಜಿಗ್​ಜ್ಯಾಗ್​ ರೈಡ್: ಪೊಲೀಸರ​ ಮೇಲೆಯೇ ಕಾರು ಹತ್ತಿಸೋ ಯತ್ನ, ಜೊಮ್ಯಾಟೋ ಹುಡುಗ ಜಸ್ಟ್​ ಮಿಸ್

(Telugu actor Sai Dharam Tej met with major accident under treatment in ICU)

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್