ತೆಲುಗು ಯುವ ನಟನಿಗೆ ಸೊಳ್ಳೆಯ ಕಾಟ; ಆಸ್ಪತ್ರೆಗೆ ದಾಖಲು

ಬಿಳಿ ಸೊಳ್ಳೆ ಕಚ್ಚುವುದರಿಂದ ಡೆಂಘೆ ಕಾಣಿಸಿಕೊಳ್ಳುತ್ತದೆ. ಶೂಟಿಂಗ್ ತೆರಳಿದ್ದ ಸಂದರ್ಭದಲ್ಲಿಶ್ರೀವಿಷ್ಣು ಅವರಿಗೆ ಸೊಳ್ಳೆ ಕಚ್ಚಿದೆ ಎನ್ನಲಾಗಿದೆ.

ತೆಲುಗು ಯುವ ನಟನಿಗೆ ಸೊಳ್ಳೆಯ ಕಾಟ; ಆಸ್ಪತ್ರೆಗೆ ದಾಖಲು
ಶ್ರೀವಿಷ್ಣು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 23, 2022 | 5:44 PM

ಟಾಲಿವುಡ್ ನಟ ಶ್ರೀವಿಷ್ಣು (Sree Vishnu) ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಅವರು ಹಲವು ಭಿನ್ನ ರೀತಿಯ ಸಿನಿಮಾಗಳನ್ನು ಮಾಡಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪರೀಕ್ಷೆ ಮಾಡಿದಾಗ ಅವರಿಗೆ ಡೆಂಘೆ ಜ್ವರ ಇರುವುದು ತಿಳಿದು ಬಂದಿದೆ. ಸದ್ಯ ಅವರು ಚೇತರಿಕೆ ಕಾಣುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ವರದಿ ಆಗಿದೆ.

ಬಿಳಿ ಸೊಳ್ಳೆ ಕಚ್ಚುವುದರಿಂದ ಡೆಂಘೆ ಕಾಣಿಸಿಕೊಳ್ಳುತ್ತದೆ. ಶೂಟಿಂಗ್ ತೆರಳಿದ್ದ ಸಂದರ್ಭದಲ್ಲಿಶ್ರೀವಿಷ್ಣು ಅವರಿಗೆ ಸೊಳ್ಳೆ ಕಚ್ಚಿದೆ ಎನ್ನಲಾಗಿದೆ. ಅವರ ರಕ್ತದ ಪ್ಲೇಟ್​ಲೆಟ್​ಗಳು ತೀವ್ರ ಗತಿಯಲ್ಲಿ ಕುಸಿದಿತ್ತು. ಆತಂಕಗೊಂಡ ಕುಟುಂಬದವರು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ತಕ್ಷಣವೇ ಅವರಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೀಗಾಗಿ, ಅವರಿಗೆ ಯಾವುದೇ ತೊಂದರೆ ಆಗಿಲ್ಲ.

ಶ್ರೀವಿಷ್ಣು ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಬಾನಮ್’ ಚಿತ್ರದ ಮೂಲಕ. ಈ ಸಿನಿಮಾ 2009ರಲ್ಲಿ ತೆರೆಗೆ ಬಂತು. 2016ರವರೆಗೂ ಅವರು ಪೋಷಕ ಪಾತ್ರ ಮಾಡುತ್ತಾ ಬಂದರು. ‘ಅಪ್ಪಟ್ಲೋ ಒಕಡುಂಡೇವಾಡು’ ಸಿನಿಮಾದಲ್ಲಿ ಅವರು ಮೊದಲ ಬಾರಿಗೆ ಹೀರೋ ಆಗಿ ನಟಿಸಿದರು. ನಂತರ ಹೀರೋ ಆಗಿ ಅವರು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ಸರ್ಜಾ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ; ಅರ್ಜುನ್ ಸರ್ಜಾಗೆ ಮಾತೃವಿಯೋಗ

ಶ್ರೀವಿಷ್ಣು ಅವರು ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಭಳಾ ತಂದನಾನಾ’ ಚಿತ್ರ ಇತ್ತೀಚೆಗೆ ತೆರೆಗೆ ಬಂತು. ಈ ಚಿತ್ರ ಸೋಲು ಕಂಡಿತು. ಹೀಗಾಗಿ ಶ್ರೀವಿಷ್ಣುವಿಗೆ ಹಿನ್ನಡೆ ಆಗಿದೆ. ‘ಅಲ್ಲುರಿ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರದೀಪ್ ವರ್ಮ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್​ಗಳು ಈಗಾಗಲೇ ಸಾಕಷ್ಟು ಗಮನ ಸೆಳೆದಿವೆ. ಈ ಚಿತ್ರದ ಮೂಲಕ ಅವರು ಗೆಲುವು ಕಾಣಲಿ ಎಂಬುದು ಫ್ಯಾನ್ಸ್ ಆಸೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್