AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪ್ರಕರಣ: ಜನಪ್ರಿಯ ನಟನ ಬಂಧನ, ಮತ್ತೊಬ್ಬ ನಟನಿಗಾಗಿ ಹುಡುಕಾಟ

Actor Sriram: ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಾಯಕನಾಗಿ, ಎರಡನೇ ನಾಯಕನಾಗಿ ನಟಿಸುತ್ತಾ ಬಂದಿರುವ ಜನಪ್ರಿಯ ನಟನೊಬ್ಬನನ್ನು ತಮಿಳುನಾಡು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಮಾತ್ರವಲ್ಲದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ನಟನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಡ್ರಗ್ಸ್ ಪ್ರಕರಣ: ಜನಪ್ರಿಯ ನಟನ ಬಂಧನ, ಮತ್ತೊಬ್ಬ ನಟನಿಗಾಗಿ ಹುಡುಕಾಟ
Sriram
ಮಂಜುನಾಥ ಸಿ.
|

Updated on: Jun 24, 2025 | 1:02 PM

Share

ತೆಲುಗು ಚಿತ್ರರಂಗದಲ್ಲಿ (Tollywood) ಡ್ರಗ್ಸ್ ಪ್ರಕರಣ ಆಗಾಗ್ಗೆ ಸದ್ದು ಮಾಡುತ್ತಲೇ ಇರುತ್ತದೆ. ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ನಟಿಸಿ ಜನಪ್ರಿಯವಾಗಿರುವ ನಟರೊಬ್ಬರನ್ನು ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೆನ್ನೈ ಮೂಲದವರಾದ ಶ್ರೀಕಾಂತ್ (ಶ್ರೀರಾಮ್) ತೆಲುಗು ಹಾಗೂ ತಮಿಳು ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರು. ಹಲವಾರು ಸಿನಿಮಾಗಳಲ್ಲಿ ನಾಯಕನಾಗಿ, ಎರಡನೇ ನಾಯಕನಾಗಿ ನಟಿಸಿದ್ದಾರೆ. ಇದೀಗ ತಮಿಳುನಾಡು ಪೊಲೀಸರು, ಡ್ರಗ್ಸ್ ಪ್ರಕರಣದಲ್ಲಿ ಶ್ರೀರಾಮ್ ಅವರನ್ನು ಬಂಧಿಸಲಾಗಿದೆ.

ಕೆಲ ದಿನಗಳ ಹಿಂದೆ ಸೇಲಂನಲ್ಲಿ ಪ್ರದೀಪ್ ಹೆಸರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತನ ಪರೀಕ್ಷೆ ನಡೆಸಿದಾಗ ಆತ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿತ್ತು. ಆ ವ್ಯಕ್ತಿಯ ವಿಚಾರಣೆ ನಡೆಸಿದ ಬಳಿಕ ಜಾನ್ ಹೆಸರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತನಿಂದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಆ ಬಳಿಕ ಇನ್ನೂ ಕೆಲವು ವ್ಯಕ್ತಿಗಳ ಬಂಧನ ಆಗಿತ್ತು. ಜಾನ್ ಡ್ರಗ್ ಡೀಲರ್ ಆಗಿದ್ದು, ಆತನಿಂದ ನಟ ಶ್ರೀರಾಮ್, ಡ್ರಗ್ಸ್ ಖರೀದಿ ಮಾಡಿದ್ದಾರೆ ಎಂಬ ವಿಷಯ ಪೊಲೀಸರ ವಿಚಾರಣೆಯಲ್ಲಿ ತಿಳಿದಿತ್ತು.

ಇದೇ ಕಾರಣಕ್ಕೆ ಪೊಲೀಸರು ನಟ ಶ್ರೀರಾಮ್​ಗೆ ಕೆಲ ದಿನಗಳ ಹಿಂದೆ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಅಂತೆಯೇ ಶ್ರೀರಾಮ್ ಅವರ ರಕ್ತ ತಪಾಸಣೆ ನಡೆಸಲಾಗಿ ಶ್ರೀರಾಮ್ ಡ್ರಗ್ಸ್ ಸೇವಿಸಿರುವುದು ಖಾತ್ರಿ ಆಗುತ್ತಿದ್ದಂತೆ ಅವರನ್ನು ಬಂಧಿಸಲಾಗಿದೆ. ಜೂನ್ 23 ರಂದು ಶ್ರೀರಾಮ್ ಬಂಧನ ಆಗಿದ್ದು, ಇನ್ನೊಬ್ಬ ನಟ ಕೃಷ್ಣಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮಾದಕ ವಸ್ತು ಮಾರಾಟ ಜಾಲವೊಂದರಿಂದ ನಟ ಶ್ರೀರಾಮ್ ಹಾಗೂ ನಟ ಕೃಷ್ಣ ಅವರು ಡ್ರಗ್ಸ್ ಖರೀದಿ ಮಾಡಿ ಸೇವಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ:ಡ್ರಗ್ಸ್ ಪ್ರಕರಣ ಇಬ್ಬರು ಮಲಯಾಳಂ ನಿರ್ದೇಶಕರ ಬಂಧನ

ಸೇಲಂನಲ್ಲಿ ಬಂಧಿತವಾದ ಪ್ರದೀಪ್ ಅಲಿಯಾಸ್ ಪ್ರಾಡೊ ಹಾಗೂ ಘಾನಾ ಪ್ರಜೆ ಜಾನ್ ಎಂಬುವರು ಎಐಎಡಿಎಂಕೆ ಪಕ್ಷದ ನಾಯಕನಾಗಿದ್ದ ಟಿ ಪ್ರಸಾದ್ ಎಂಬುವರಿಗೆ ಮಾದಕ ವಸ್ತು ಕೊಕೇನ್ ಅನ್ನು ಮಾರಾಟ ಮಾಡಿದರಂತೆ. ಪ್ರಸಾದ್, ಕಳೆದ ತಿಂಗಳು ಚೆನ್ನೈನ ಪಬ್ ಒಂದರಲ್ಲಿ ಶ್ರೀರಾಮ್​ಗೆ ಡ್ರಗ್ಸ್ ಮಾರಾಟ ಮಾಡಿದ್ದರಂತೆ.

ಬಂಧಿತವಾಗಿರುವ ಶ್ರೀರಾಮ್, 2002 ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ತಮಿಳಿನ ಸಿನಿಮಾ ಮೂಲಕ ನಾಯಕ ನಟನಾಗಿ ಎಂಟ್ರಿ ಕೊಟ್ಟ ಶ್ರೀರಾಮ್ ಆ ಬಳಿಕ ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ