ಹಿಂದೂ ದೇವರಿಗೆ ಅವಹೇಳನ ಮಾಡಿದ ಆರೋಪ; ಬಿಗ್​ ಬಾಸ್​ ಕೊನೆಯ ಸೀಸನ್​ನ ಸ್ಪರ್ಧಿ ಅರೆಸ್ಟ್​

ಕಳೆದ ವರ್ಷ ‘ತೆಲುಗು ಬಿಗ್​ ಬಾಸ್​ ಸೀಸನ್​ 5’ ಪೂರ್ಣಗೊಂಡಿತ್ತು. ನಟ ಅಕ್ಕಿನೇನಿ ನಾಗಾರ್ಜುನ ಅವರು ಈ ಶೋ ನಡೆಸಿಕೊಟ್ಟಿದ್ದರು. ಆ ಸೀಸನ್​ನಲ್ಲಿ ಮನೆಗೆ ಎಂಟ್ರಿ ಕೊಟ್ಟಿದ್ದ ಸರಯು ಅವರು ಈಗ ಅರೆಸ್ಟ್​ ಆದ ಮಹಿಳೆ.

ಹಿಂದೂ ದೇವರಿಗೆ ಅವಹೇಳನ ಮಾಡಿದ ಆರೋಪ; ಬಿಗ್​ ಬಾಸ್​ ಕೊನೆಯ ಸೀಸನ್​ನ ಸ್ಪರ್ಧಿ ಅರೆಸ್ಟ್​
ಸರಯು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 08, 2022 | 11:38 AM

ಇತ್ತೀಚಿನ ವರ್ಷಗಳಲ್ಲಿ ಸೋಶಿಯಲ್ ಮೀಡಿಯಾ (Social Media) ಸಾಕಷ್ಟು ಸ್ಟ್ರಾಂಗ್​ ಆಗಿದೆ. ಯಾವುದೇ ಕಮೆಂಟ್​ಗಳನ್ನು ಮಾಡುವಾಗ, ಯಾವುದೇ ಪೋಸ್ಟ್​ಗಳನ್ನು ಹಾಕುವಾಗ ತುಂಬಾನೇ ಎಚ್ಚರಿಕೆಯಿಂದ ಇರಬೇಕು. ಈಗ ಬಿಗ್​ ಬಾಸ್​ (Bigg Boss) ಸ್ಪರ್ಧಿಗೂ ಇದೇ ಸಮಸ್ಯೆ ಆಗಿದೆ. ಯೂಟ್ಯೂಬ್​ನಲ್ಲಿ ಪೋಸ್ಟ್​ ಮಾಡಿದ ವಿಡಿಯೋದಲ್ಲಿ ಇರುವ ಅವಹೇಳನಕಾರಿ ವಿಚಾರದಿಂದ ಅವರು ಅರೆಸ್ಟ್​ ಆಗಿದ್ದಾರೆ. ಅವರನ್ನು ಪೊಲೀಸರು ಅರೆಸ್ಟ್​ ಮಾಡಿ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಕೆಲವರು ಇವರ ಪರ ಬ್ಯಾಟ್​ ಬೀಸಿದರೆ, ಇನ್ನೂ ಕೆಲವರು ಇವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕಳೆದ ವರ್ಷ ‘ತೆಲುಗು ಬಿಗ್​ ಬಾಸ್​ ಸೀಸನ್​ 5’ ಪೂರ್ಣಗೊಂಡಿತ್ತು. ನಟ ಅಕ್ಕಿನೇನಿ ನಾಗಾರ್ಜುನ ಅವರು ಈ ಶೋ ನಡೆಸಿಕೊಟ್ಟಿದ್ದರು. ಆ ಸೀಸನ್​ನಲ್ಲಿ ಮನೆಗೆ ಎಂಟ್ರಿ ಕೊಟ್ಟಿದ್ದ ಸರಯು ಅವರು ಈಗ ಅರೆಸ್ಟ್​ ಆದ ಮಹಿಳೆ. ಬಿಗ್​ ಬಾಸ್​ ಮನೆಯಲ್ಲಿ ತಮ್ಮ ನೇರ ನಡೆನುಡಿಯಿಂದ ಅವರು ಸುದ್ದಿಯಾಗಿದ್ದರು. ಸಾಕಷ್ಟು ಕಾಂಟ್ರವರ್ಸಿಗಳನ್ನು ಅವರು ಮಾಡಿಕೊಂಡಿದ್ದಾರೆ. ಈಗ ಅವರ ಹೆಸರಿಗೆ ಹೊಸ ವಿವಾದವೊಂದು ಸುತ್ತಿಕೊಂಡಿದ್ದು, ಈ ಪ್ರಕರಣದಲ್ಲಿ ಅವರನ್ನು ಅರೆಸ್ಟ್​ ಮಾಡಲಾಗಿದೆ.

ಸರಯು ರೆಸ್ಟೋರೆಂಟ್​ ಒಂದರ ಪ್ರಚಾರಕ್ಕೆ ವಿಡಿಯೋ ಒಂದನ್ನು ಯೂಟ್ಯೂಬ್​ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಸರಯೂ ಮತ್ತಿತರರು ತಲೆಯ ಮೇಲೆ ಗಣಪತಿ ಬಪ್ಪಾ ಮೋರೆಯಾ ಬ್ಯಾಂಡ್ ಧರಿಸಿದ್ದರು. ದೇವರ ಗೊಂಬೆಗಳನ್ನು ಧರಿಸಿ ಮದ್ಯ ಸೇವನೆ ಮಾಡಿದ್ದರು. ಇದು ವಿವಾದ ಹತ್ತಿಕೊಳ್ಳಲು ಪ್ರಮುಖ ಕಾರಣವಾಗಿತ್ತು.

ಈ ಘಟನೆಗೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್​ ಸಂಘಟನೆಯವರು ಸರಯೂ ವಿರುದ್ಧ ದೂರು ದಾಖಲು ಮಾಡಿದ್ದರು. ಸಿರ್ಸಿಲ್ಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅಲ್ಲಿಯೇ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಹೈದರಾಬಾದ್​ನ ಬಂಜಾರ್​ ಹಿಲ್ಸ್​ ಪೊಲೀಸ್​ ಠಾಣೆಗೆ ಹಸ್ತಾಂತರ ಮಾಡಲಾಗಿತ್ತು. ಈ ಕಾರಣಕ್ಕೆ ಬಂಜಾರ್​ ಹಿಲ್ಸ್​ ಪೊಲೀಸರು ಸರಯು ಅವರನ್ನು ಅರೆಸ್ಟ್ ಮಾಡಿದ್ದಾರೆ.

ಈ ಘಟನೆಯನ್ನು ವಿಶ್ವ ಹಿಂದೂ ಪರಿಷತ್​ ಸಂಘಟನೆಯವರು ಖಂಡಿಸಿದ್ದಾರೆ. ಅಲ್ಲದೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಪೊಲೀಸರು ಮುಂದೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ರೀಲ್ಸ್ ಮಾಡುವಾಗ ಬಿಗ್ ಬಾಸ್ ಸ್ಪರ್ಧಿ ಧರಿಸಿದ ಬಟ್ಟೆ ನೋಡಿ ಶಾಕ್ ಆದ ಅಭಿಮಾನಿಗಳು

Bigg Boss 5 Winner: ‘ಬಿಗ್​ ಬಾಸ್​ ತೆಲುಗು 5’ ವಿನ್ನರ್​ ಯಾರು? ಇಲ್ಲಿದೆ ಮಾಹಿತಿ

Published On - 11:37 am, Tue, 8 February 22

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ