ತಲೈವಿ ರಿಲೀಸ್​ಗೂ ಮುನ್ನ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ಕಂಗನಾ ರಣಾವತ್​

ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ.

ತಲೈವಿ ರಿಲೀಸ್​ಗೂ ಮುನ್ನ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ಕಂಗನಾ ರಣಾವತ್​
ನಟಿ ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on: Apr 09, 2021 | 9:39 PM

ಕೊರೊನಾ ವೈರಸ್​ ಎರಡನೇ ಅಲೆಗೆ ಸಿನಿಮಾ ರಂಗ ಮತ್ತೆ ತೊಂದರೆಗೆ ಸಿಲುಕಿದೆ. ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದರಿಂದಾಗಿ ಅನೇಕ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿದೆ. ಈಗ ಈ ಸಾಲಿಗೆ ಕಂಗನಾ ರಣಾವತ್​ ನಟನೆಯ ತಲೈವಿ ಸಿನಿಮಾ ಹೊಸ ಸೇರ್ಪಡೆ. ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ. ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡಿದ್ದರು ಎನ್ನುವುದು ವಿಶೇಷ. ಈ ಎಲ್ಲಾ ಕಾರಣಕ್ಕಾಗಿ ಸಿನಿಮಾ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ, ಈಗ ಚಿತ್ರತಂಡ ಶುಕ್ರವಾರ ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವ ಬಗ್ಗೆ ಘೋಷಣೆ ಮಾಡಿದೆ.

ನಾವು ಈ ಸಿನಿಮಾ ಮಾಡೋಕೆ ತುಂಬಾನೇ ಶ್ರಮ ಹಾಕಿದ್ದೇವೆ. ಸಿನಿಮಾ ತಂಡದಲ್ಲಿರುವ ಪ್ರತಿ ಸದಸ್ಯರು ಈ ಸಿನಿಮಾಗಾಗಿ ದುಡಿದಿದ್ದಾರೆ. ಬೇರೆ ಬೇರೆ ಭಾಷೆಗಳಲ್ಲಿ ನಾವು ಸಿನಿಮಾವನ್ನು ತೆರೆಗೆ ತರುತ್ತಿದ್ದೇವೆ. ಆದರೆ, ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ, ಚಿತ್ರತಂಡದ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್​ 23ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಸರ್ಕಾರದ ಕೆಲ ನಿರ್ಬಂಧಗಳಿಂದ ಸಿನಿಮಾ ಮುಂದೂಡಿದ್ದೇವೆ ಎಂದು ಟ್ವೀಟ್​ ಮಾಡಲಾಗಿದೆ.

ಸದ್ಯ, ಚಿತ್ರತಂಡದಿಂದ ಮುಂದಿನ ರಿಲೀಸ್​ ದಿನಾಂಕ ಯಾವಾಗ ಎಂಬುದು ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ. ಕೊರೊನಾ ಪ್ರಕರಣಗಳು ಕಡಿಮೆ ಆದ ನಂತರದಲ್ಲಿ ಸಿನಿಮಾ ತೆರೆಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್