‘ಕಂಗನಾ ರಣಾವತ್​ ‘ತಲೈವಿ’ಗೆ ಐದು ರಾಷ್ಟ್ರ ಪ್ರಶಸ್ತಿ ಬರಲೇಬೇಕು, ಇಲ್ಲವಾದರೆ ಬೇಸರವಾಗುತ್ತದೆ’

ಈಗಾಗಲೇ ರಿಲೀಸ್​ ಆಗಿರುವ ಸಿನಿಮಾದ ಪೋಸ್ಟರ್​, ಟ್ರೇಲರ್​ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದಲ್ಲಿ ಜಯಲಲಿತಾ ರೀತಿಯಲ್ಲೇ ಕಾಣುತ್ತಿದ್ದಾರೆ ಕಂಗನಾ. ಇದು ಸಿನಿಮಾಗೆ ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

‘ಕಂಗನಾ ರಣಾವತ್​ ‘ತಲೈವಿ’ಗೆ ಐದು ರಾಷ್ಟ್ರ ಪ್ರಶಸ್ತಿ ಬರಲೇಬೇಕು, ಇಲ್ಲವಾದರೆ ಬೇಸರವಾಗುತ್ತದೆ’
ಕಂಗನಾ ರಣಾವತ್ ಅಭಿನಯದ ‘ತಲೈವಿ’
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 06, 2021 | 7:11 PM

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜೀವನ ಆಧರಿಸಿ ‘ತಲೈವಿ’ ಸಿನಿಮಾ ಸಿದ್ಧಗೊಂಡಿದೆ. ಕೊವಿಡ್​ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಆದರೆ, ಈಗ ಸೆಪ್ಟೆಂಬರ್​ 10ರಂದು ಸಿನಿಮಾ ಎಲ್ಲೆಡೆ ಬಿಡುಗಡೆ ಆಗುತ್ತಿದೆ. ಬಾಲಿವುಡ್​ ನಟಿ ಕಂಗನಾ ಈ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬುದು ಒಂದು ಕಡೆಯಾದರೆ, ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದ ಸಿಎಂ ಜಯಲಲಿತಾ ಜೀವನ ಆಧಾರಿತ ಸಿನಿಮಾ ಎಂಬುದು ಮತ್ತೊಂದು ಕಡೆ. ‘ತಲೈವಿ’ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದ್ದು, ಇದರ ರಿಲೀಸ್​ಗೆ ಅನೇಕರು ಕಾಯುತ್ತಿದ್ದಾರೆ. ಈ ಮಧ್ಯೆ ಸಿನಿಮಾದ ನಿರ್ಮಾಪಕರು, ‘ತಲೈವಿ’ ಸಿನಿಮಾಗೆ ಕನಿಷ್ಠ 5 ರಾಷ್ಟ್ರ ಪ್ರಶಸ್ತಿಗಳು ಬರಬೇಕು ಎಂದು ನಿರೀಕ್ಷಿಸುತ್ತಿದ್ದಾರೆ.

ತಮಿಳುನಾಡಿನಲ್ಲಿ ಅಮ್ಮ ಎಂದೇ ಖ್ಯಾತಿ ಪಡೆದವರು ಜಯಲಲಿತಾ. ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರು ಮೃತಪಟ್ಟಾಗ ಆದ ಶಾಕ್​ನಿಂದ ಅನೇಕರು ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಕೂಡ ಇದೆ. ಈಗ ಅವರ ಜೀವನ ಆಧರಿಸಿ ಸಿನಿಮಾ ಸಿದ್ಧಗೊಂಡಿದ್ದು, ಜಯಲಲಿತಾ ಪಾತ್ರವನ್ನು ಕಂಗನಾ ನಿರ್ವಹಿಸಿದ್ದಾರೆ.

ಈಗಾಗಲೇ ರಿಲೀಸ್​ ಆಗಿರುವ ಸಿನಿಮಾದ ಪೋಸ್ಟರ್​, ಟ್ರೇಲರ್​ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದಲ್ಲಿ ಜಯಲಲಿತಾ ರೀತಿಯಲ್ಲೇ ಕಾಣುತ್ತಿದ್ದಾರೆ ಕಂಗನಾ. ಇದು ಸಿನಿಮಾಗೆ ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಸೆಪ್ಟೆಂಬರ್ 10 ಗಣೇಶ ಚತುರ್ಥಿ. ಈ ವಿಶೇಷ ದಿನದಂದೇ ಸಿನಿಮಾ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಹೈದರಾಬಾದ್​ನಲ್ಲಿ ಗ್ರ್ಯಾಂಡ್​ ಆಗಿ  ಪ್ರಿ-ರಿಲೀಸ್​ ಇವೆಂಟ್​ ಹಮ್ಮಿಕೊಂಡಿತ್ತು. ಚಿತ್ರದ ನಿರ್ಮಾಪಕ ವಿಷ್ಣು ವರ್ಧನ್​ ಇಂದುರಿ ಅವರು ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ವ್ಯಕ್ತಪಡಿಸಿದರು.

‘ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಸಿನಿಮಾ ಅದ್ಭುತವಾಗಿ ಮೂಡಿ ಬಂದಿದೆ. ಈ ಸಿನಿಮಾದಲ್ಲಿ ಕಂಗನಾ ನಟನೆ ಅದ್ಭುತವಾಗಿದೆ. ‘ತಲೈವಿ’ ಕನಿಷ್ಠ 5 ರಾಷ್ಟ್ರ ಪ್ರಶಸ್ತಿಗಳನ್ನು ಬಾಚಿಕೊಳ್ಳಬೇಕು. ಇಲ್ಲವಾದರೆ, ನನಗೆ ತುಂಬಾನೇ ಬೇಸರವಾಗುತ್ತದೆ’ ಎಂದರು.

ಕೊವಿಡ್​ ಎರಡನೇ ಅಲೆ ಮುಗಿಯುವ ಹಂತದಲ್ಲಿದೆ. ಈ ಮಧ್ಯೆ ಮೂರನೇ ಅಲೆ ಎದುರಾಗುವ ಭಯ ಕಾಡುತ್ತಿದೆ. ಈ ಕಾರಣಕ್ಕೆ ಅನೇಕ ರಾಜ್ಯಗಳಲ್ಲಿ ಇನ್ನೂ ಚಿತ್ರಮಂದಿರಗಳಲ್ಲಿ ಸಂಪೂರ್ಣ ಭರ್ತಿಗೆ ಅವಕಾಶ ನೀಡಿಲ್ಲ. ಈ ಮೊದಲು ರಿಲೀಸ್​ ಆದ ಅಕ್ಷಯ್​ ಕುಮಾರ್​ ನಟನೆಯ ‘ಬೆಲ್​ ಬಾಟಮ್​’ ಚಿತ್ರ ಉತ್ತಮ ವಿಮರ್ಶೆ ಪಡೆದುಕೊಂಡ ಹೊರತಾಗಿಯೂ ಬಾಕ್ಸ್​ ಆಫೀಸ್​ನಲ್ಲಿ ಗಳಿಕೆ ಮಾಡಿಲ್ಲ. ‘ತಲೈವಿ’ ಚಿತ್ರಕ್ಕೂ ಇದೇ ತೊಂದರೆ ಎದುರಾದರೂ ಅಚ್ಚರಿ ಇಲ್ಲ.

ಇದನ್ನೂ ಓದಿ: Thalaivii: ‘ತಲೈವಿ’ ಚಿತ್ರದ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಂಗನಾ; ಜಯಲಲಿತಾ ಸ್ಮಾರಕಕ್ಕೆ ಭೇಟಿ

Thalaivii: ಕಂಗನಾ ಆಕ್ರೋಶದ ನಂತರ ‘ತಲೈವಿ’ಯ ಪ್ರದರ್ಶನಕ್ಕೆ PVR ಒಪ್ಪಿಗೆ; ಆದರೂ ಬಗೆಹರಿದಿಲ್ಲ ಹಿಂದಿ ಆವೃತ್ತಿಯ ಸಮಸ್ಯೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ