AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಜ್ಯೋತಿಕಾ? 20 ವರ್ಷದ ಬಳಿಕ ದಳಪತಿ ವಿಜಯ್​ ಜೊತೆ ನಟನೆ

ಖ್ಯಾತ ನಟಿ ಜ್ಯೋತಿಕಾ ಅವರ ಬಗ್ಗೆ ಒಂದು ಇಂಟರೆಸ್ಟಿಂಗ್​ ಸುದ್ದಿ ಕೇಳಿಬಂದಿದೆ. ದಳಪತಿ ವಿಜಯ್​ ನಟಿಸಲಿರುವ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಜ್ಯೋತಿಕಾ ಕೂಡ ಒಂದು ಪ್ರಮುಖ ಪಾತ್ರ ಮಾಡಲಿದ್ದಾರೆ. ಬರೋಬ್ಬರಿ 20 ವರ್ಷಗಳ ಬಳಿಕ ಜ್ಯೋತಿಕಾ ಮತ್ತು ದಳಪತಿ ವಿಜಯ್​ ಅವರು ತೆರೆಹಂಚಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ.

ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಜ್ಯೋತಿಕಾ? 20 ವರ್ಷದ ಬಳಿಕ ದಳಪತಿ ವಿಜಯ್​ ಜೊತೆ ನಟನೆ
ದಳಪತಿ ವಿಜಯ್​, ಜ್ಯೋತಿಕಾ
ಮದನ್​ ಕುಮಾರ್​
|

Updated on: Aug 13, 2023 | 7:52 AM

Share

ನಟಿ ಜ್ಯೋತಿಕಾ (Jyothika) ಅವರು ಒಂದು ಕಾಲದಲ್ಲಿ ಸಖತ್​ ಬ್ಯುಸಿ ಹಿರೋಯಿನ್​ ಆಗಿದ್ದರು. ಅನೇಕ ಹೀರೋಗಳ ಜೊತೆಗೆ ನಟಿಸಿ ಅವರು ಸೈ ಎನಿಸಿಕೊಂಡಿದ್ದರು. ಆದರೆ ಸೂರ್ಯ (Suriya) ಜೊತೆ ಮದುವೆ ಆದ ಬಳಿಕ ಅವರು ಸಿನಿಮಾಗಳ ಆಯ್ಕೆಯಲ್ಲಿ ಸಖತ್​ ಚ್ಯೂಸಿ ಆದರ. ಹಾಗಂತ ಅವರು ಸಂಪೂರ್ಣವಾಗಿ ಚಿತ್ರರಂಗದಿಂದ ದೂರ ಉಳಿದುಕೊಂಡಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಾ, ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿ ಇದ್ದಾರೆ. ಈಗ ಜ್ಯೋತಿಕಾ ಅವರ ಬಗ್ಗೆ ಒಂದು ಇಂಟರೆಸ್ಟಿಂಗ್​ ಸುದ್ದಿ ಕೇಳಿಬಂದಿದೆ. ದಳಪತಿ ವಿಜಯ್​ (Thalapathy Vijay) ನಟಿಸಲಿರುವ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಜ್ಯೋತಿಕಾ ಕೂಡ ಒಂದು ಪ್ರಮುಖ ಪಾತ್ರ ಮಾಡಲಿದ್ದಾರೆ. ಬರೋಬ್ಬರಿ 20 ವರ್ಷಗಳ ಬಳಿಕ ಇವರಿಬ್ಬರು ತೆರೆಹಂಚಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಸೃಷ್ಟಿ ಆಗಿದೆ.

ದಳಪತಿ ವಿಜಯ್​ ಅವರು ಈಗ ‘ಲಿಯೋ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಚಿತ್ರಕ್ಕೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆಗೆ ರಾಜಕೀಯ ಪ್ರವೇಶದ ಬಗ್ಗೆಯೂ ವಿಜಯ್​ ಆಲೋಚಿಸುತ್ತಿದ್ದಾರೆ ಎನ್ನಲಾಗಿದೆ. ಈ ನಡುವೆ ಅವರ ಹೊಸ ಸಿನಿಮಾದ ಬಗ್ಗೆಯೂ ಗಾಸಿಪ್​ ಹಬ್ಬಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತಯಾರಾಗಲಿರುವ ವಿಜಯ್​ ಅವರ ಹೊಸ ಚಿತ್ರಕ್ಕೆ ವೆಂಕಟ್​ ಪ್ರಭು ನಿರ್ದೇಶನ ಮಾಡಲಿದ್ದು, ಆ ಚಿತ್ರದಲ್ಲಿ ಜ್ಯೋತಿಕಾ ಕೂಡ ನಟಿಸುತ್ತಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Jyothika: 50ನೇ ಚಿತ್ರದ ಬಿಡುಗಡೆಯ ಸಂಭ್ರಮದಲ್ಲಿ ಜ್ಯೋತಿಕಾ; ಅಚ್ಚರಿಯ ಗಿಫ್ಟ್ ನೀಡಿದ ಆಮೆಜಾನ್ ಪ್ರೈಮ್

ತಮಿಳು, ತೆಲುಗು, ಕನ್ನಡ ಹಾಗೂ ಹಿಂದಿ ಸಿನಿಮಾಗಳಲ್ಲಿ ಜ್ಯೋತಿಕಾ ಮಿಂಚಿದ್ದಾರೆ. ತಮಿಳಿನ ‘ಖುಷಿ’ (2000), ‘ತಿರುಮಲೈ’ (2003) ಸಿನಿಮಾಗಳಲ್ಲಿ ಜ್ಯೋತಿಕಾ ಮತ್ತು ದಳಪತಿ ವಿಜಯ್​ ಅವರು ಜೊತೆಯಾಗಿ ನಟಿಸಿದ್ದರು. ಈಗ ಅವರು 2 ದಶಕದ ಬಳಿಕ ತೆರೆಹಂಚಿಕೊಳ್ಳಲಿದ್ದಾರೆ ಎಂಬ ವಿಷಯ ಕೇಳಿ ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ. ಈ ಸುದ್ದಿ ಬಗ್ಗೆ ಸಿನಿಮಾ ತಂಡದಿಂದ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ. ಈ ಸಿನಿಮಾದಲ್ಲಿ ಜ್ಯೋತಿಕಾ ಅವರು ನಾಯಕಿ ಪಾತ್ರ ಮಾಡುತ್ತಾರೋ ಅಥವಾ ಬೇರೆ ಯಾವುದಾದರೂ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುತ್ತಾರೋ ಎಂಬುದು ಕೂಡ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಫ್ಯಾಮಿಲಿ ಸಮೇತ ಮುಂಬೈನಲ್ಲಿ ಸೆಟ್ಲ್​ ಆದ ನಟ ಸೂರ್ಯ; ಚೆನ್ನೈ ತೊರೆಯುವಂಥದ್ದು ಏನಾಯ್ತು?

ಜ್ಯೋತಿಕಾ ಅವರಿಗೆ ಈಗ 44 ವರ್ಷ ವಯಸ್ಸು. ಚಿತ್ರರಂಗದಲ್ಲಿ ಅವರು ಈಗಲೂ ಬೇಡಿಕೆ ಉಳಿಸಿಕೊಂಡಿದ್ದಾರೆ. ಅಜಯ್​ ದೇವಗನ್​ ಮತ್ತು ಆರ್​. ಮಾಧನವನ್​ ನಟಿಸಲಿರುವ ಬಾಲಿವುಡ್​ನ ಹೊಸ ಸಿನಿಮಾದಲ್ಲಿ ಜ್ಯೋತಿಕಾ ಅಭಿನಯಿಸುತ್ತಿದ್ದಾರೆ. ಪತಿ, ಕಾಲಿವುಡ್​ ನಟ ಸೂರ್ಯ ಅವರ ವೃತ್ತಿಜೀವನಕ್ಕೆ ಜ್ಯೋತಿಕಾ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ