ಯುವ ನಟಿಯ ಜತೆ ದಳಪತಿ ವಿಜಯ್ ಡೇಟಿಂಗ್​? ವಿಚ್ಛೇದನ ಸುದ್ದಿ ಹುಟ್ಟಲು ಇದುವೇ ಕಾರಣ

ಈ ಜೋಡಿ ಎರಡು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದೆ. ಇಬ್ಬರ ಮಧ್ಯೆ ಆಪ್ತತೆ ಬೆಳೆದಿದೆ. ಇದು ಸಂಗೀತಾ ಗಮನಕ್ಕೆ ಬಂದಿದ್ದು ಈ ಕಾರಣಕ್ಕೆ ಅವರು ವಿಚ್ಛೇದನ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಯುವ ನಟಿಯ ಜತೆ ದಳಪತಿ ವಿಜಯ್ ಡೇಟಿಂಗ್​? ವಿಚ್ಛೇದನ ಸುದ್ದಿ ಹುಟ್ಟಲು ಇದುವೇ ಕಾರಣ
ಕೀರ್ತಿ ಸುರೇಶ್​-ದಳಪತಿ ವಿಜಯ್
Follow us
ರಾಜೇಶ್ ದುಗ್ಗುಮನೆ
|

Updated on: Jan 27, 2023 | 7:51 AM

ನಟ ದಳಪತಿ ವಿಜಯ್ (Thalapathy Vijay) ಹಾಗೂ ಪತ್ನಿ ಸಂಗೀತಾ (Sangeetha) ಅವರು ಮದುವೆ ಆಗಿ 22 ವರ್ಷಗಳ ಬಳಿಕ ವಿಚ್ಛೇದನ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ಹುಟ್ಟಿಕೊಂಡಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದ ಇವರು ಬೇರೆ ಆಗುತ್ತಿದ್ದಾರೆ ಎನ್ನುವ ವದಂತಿ ಹುಟ್ಟಲು ಕಾರಣ ಏನು ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ದಳಪತಿ ವಿಜಯ್ ಅವರು ಯುವನಟಿಯ ಜತೆ ಡೇಟಿಂಗ್ ಶುರು ಹಚ್ಚಿಕೊಂಡಿದ್ದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ಸುದ್ದಿ ಈಗ ಕಾಡ್ಗಿಚ್ಚಿನಂತೆ ಹಬ್ಬಿದೆ.

ದಳಪತಿ ವಿಜಯ್ ಹಾಗೂ ಸಂಗೀತಾ ಮಧ್ಯೆ ವೈಮನಸ್ಸು ಮೂಡಿದೆ ಎನ್ನಲಾಗಿದೆ. ಇದಕ್ಕೆ ಕಾರಣವಾಗಿದ್ದು ನಟಿ ಕೀರ್ತಿ ಸುರೇಶ್ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ. ಈ ಜೋಡಿ ಎರಡು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದೆ. ಇಬ್ಬರ ಮಧ್ಯೆ ಆಪ್ತತೆ ಬೆಳೆದಿದೆ. ಇದು ಸಂಗೀತಾ ಗಮನಕ್ಕೆ ಬಂದಿದ್ದು ಈ ಕಾರಣಕ್ಕೆ ಅವರು ವಿಚ್ಛೇದನ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ.

ದಳಪತಿ ವಿಜಯ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತದೆ. ಈಗ ಅವರ ಹೆಸರು ಕೀರ್ತಿ ಸುರೇಶ್ ಜೊತೆ ತಳುಕು ಹಾಕಿಕೊಂಡಿರೋದು ಅನೇಕರಿಗೆ ಬೇಸರ ಮೂಡಿಸಿದೆ. ಈ ಬಗ್ಗೆ ವಿಜಯ್ ಅವರು ಸ್ಪಷ್ಟನೆ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ ದಳಪತಿ ವಿಜಯ್ ಈ ಬಗ್ಗೆ ಮೌನ ತಾಳಿದ್ದಾರೆ.

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ವಿಜಯ್ ಅವರು ವಿವಾದದಿಂದ ದೂರ ಇರಲು ಇಷ್ಟಪಡುತ್ತಾರೆ. ಆದಾಗ್ಯೂ ಕೆಲವೊಮ್ಮೆ ವಿವಾದಗಳು ಹುಟ್ಟಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಅವರು ಸ್ಪಷ್ಟನೆ ನೀಡಿದ ಉದಾಹರಣೆ ಇದೆ. ಈಗ ವಿಚ್ಛೇದನ ಹಾಗೂ ಡೇಟಿಂಗ್ ವಿಚಾರದಲ್ಲಿ ಅವರಿಂದ ಯಾವ ರೀತಿಯ ಉತ್ತರ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:  ರಶ್ಮಿಕಾ ಬಳಿಕ ದಳಪತಿ ವಿಜಯ್ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ? ‘ಸಿಂಪಲ್​ ಸ್ಟಾರ್​’ಗೆ ಕಾಲಿವುಡ್​ನಲ್ಲಿ ಬೇಡಿಕೆ

ದಳಪತಿ ವಿಜಯ್ ನಟನೆಯ ‘ವಾರಿಸು’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ತಮಿಳು ಹಾಗೂ ತೆಲುಗಿನಲ್ಲಿ ರಿಲೀಸ್ ಆದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ 2023ರ ಆರಂಭದಲ್ಲೇ ವಿಜಯ್​ಗೆ ಗೆಲುವು ಸಿಕ್ಕಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ