AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಡೇಟ್ ಮೇಲೆ ‘ಜನ ನಾಯಗನ್’ ಕಣ್ಣು? ಅಪರೂಪದ ಘಟನೆಗೆ ಸಾಕ್ಷಿಯಾಗಲಿದೆ ತಮಿಳುನಾಡು

ದಳಪತಿ ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದ್ದು, ಅವರ ಅಂತಿಮ ಸಿನಿಮಾ 'ಜನ ನಾಯಗನ್' ಬಿಡುಗಡೆ ಕುರಿತು ಚರ್ಚೆ ಶುರುವಾಗಿದೆ. KVN ಪ್ರೊಡಕ್ಷನ್ಸ್ ನಿರ್ಮಿಸಿದ ಈ ಚಿತ್ರ, ಮುಖ್ಯಮಂತ್ರಿ ಅಧಿಕಾರದಲ್ಲಿದ್ದಾಗ ತೆರೆಗೆ ಬರುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದೆ. ಜೂನ್ 4ರಂದು 'ಟಾಕ್ಸಿಕ್' ಬದಲಿಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ.

‘ಟಾಕ್ಸಿಕ್’ ಡೇಟ್ ಮೇಲೆ ‘ಜನ ನಾಯಗನ್’ ಕಣ್ಣು? ಅಪರೂಪದ ಘಟನೆಗೆ ಸಾಕ್ಷಿಯಾಗಲಿದೆ ತಮಿಳುನಾಡು
ಜನ ನಾಯಗನ್
ರಾಜೇಶ್ ದುಗ್ಗುಮನೆ
|

Updated on: May 05, 2026 | 3:06 PM

Share

ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 106 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆ. ಬೆಳವಣಿಗೆಯ ನಡುವೆ, ಅವರ ಅಂತಿಮ ಸಿನಿಮಾ ಎನ್ನಲಾದ ‘ಜನ ನಾಯಗನ್’ ಬಿಡುಗಡೆಯ ಕುರಿತು ಈಗ ಹೊಸ ಚರ್ಚೆಗಳು ಶುರುವಾಗಿವೆ.

ಚುನಾವಣಾ ದಿನಾಂಕ ಘೋಷಣೆಗೂ ಮೊದಲು ವಿಜಯ್​​ ಸಿನಿಮಾ ರಿಲೀಸ್ ಮಾಡಲು ಹಲವು ಅಡ್ಡಿ-ಆತಂಕಗಳು ಬಂದವು. ಈ ಕಾರಣದಿಂದ ಚುನಾವಣೆಗೂ ಮೊದಲು ಸಿನಿಮಾ ತೆರೆಗೆ ಬರಲಿಲ್ಲ. ಈಗ ಚುನಾವಣೆ ಪೂರ್ಣಗೊಂಡಿದ್ದು, ವಿಜಯ್ ಸಿಎಂ ಆಗೋದು ಬಹುತೇಕ ಖಚಿತವಾಗಿದೆ. ಸಿಎಂ ಆದ ಬಳಿಕ ಈ ಸಿನಿಮಾವನ್ನು ಬಿಡುಗಡೆ ಮಾಡುವುದು ಚಿತ್ರತಂಡದ ಯೋಜನೆಯಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ವಿಜಯ್ ಅವರ ವೃತ್ತಿಜೀವನದ ಕೊನೆಯ ಸಿನಿಮಾ ಆಗಲಿದೆ. ಓರ್ವ ನಟ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗ ಅವರ ಸಿನಿಮಾ ತೆರೆಗೆ ಬರುವುದು ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಅಪರೂಪದ ವಿದ್ಯಮಾನವಾಗಲಿದೆ.

ಈ ಚಿತ್ರವನ್ನು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಕೆವಿಎನ್ (KVN) ಪ್ರೊಡಕ್ಷನ್ಸ್ ನಿರ್ಮಿಸಿದೆ. ಒಂದು ಕಡೆ ಅವರ ನಿರ್ಮಾಣದ ‘ಕೆಡಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದರೆ, ಮತ್ತೊಂದೆಡೆ ತಮ್ಮ ಸಿನಿಮಾದ ನಾಯಕನೇ ರಾಜ್ಯದ ಮುಖ್ಯಮಂತ್ರಿಯಾಗುತ್ತಿರುವುದು ಸಂಸ್ಥೆಯ ಖುಷಿಯನ್ನು ಇಮ್ಮಡಿಗೊಳಿಸಿದೆ. ‘ಜನ ನಾಯಗನ್’ ಸಿನಿಮಾ ವಿಜಯ್ ಅವರ ರಾಜಕೀಯ ಸಿದ್ಧಾಂತಗಳನ್ನು ಒಳಗೊಂಡಿದೆ.

ಜೂನ್ 4ಕ್ಕೆ ರಿಲೀಸ್?

ಜೂನ್ 4ರಂದು ಕೆವಿಎನ್ ನಿರ್ಮಾಣದ ‘ಟಾಕ್ಸಿಕ್’ ತೆರೆಗೆ ಬರಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ಮುಂದಕ್ಕೆ ಹೊಗಿದೆ. ಈಗ ಈ ಸ್ಲಾಟ್ ಅನ್ನು ವಿಜಯ್ ಅವರು ತಮ್ಮದಾಗಿಸಿಕೊಳ್ಳಬಹುದು ಎಂದು ಹೇಳಲಾಗುತ್ತಾ ಇದೆ. ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಂತರವೇ ಈ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದ್ದು, ಬಾಕ್ಸ್ ಆಫೀಸ್‌ನಲ್ಲಿ ಎಲ್ಲಾ ದಾಖಲೆಗಳನ್ನು ಮುರಿಯುವ ನಿರೀಕ್ಷೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us