Tamizhaga Vetri Kazhagam: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ

Thalapathy Vijay Party Name: ತಮಿಳು ನಟ ದಳಪತಿ ವಿಜಯ್ ರಾಜಕೀಯ ಪ್ರವೇಶಿಸಿದ್ದು, ತಮ್ಮ ಪಕ್ಷಕ್ಕೆ ತಮಿಳಗ ವೆಟ್ರಿ ಕಳಗಂ ಎಂದು ನಾಮಕರಣ ಮಾಡಿದ್ದಾರೆ. ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Tamizhaga Vetri Kazhagam: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ, ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ
Follow us
ನಯನಾ ರಾಜೀವ್
|

Updated on:Feb 02, 2024 | 2:04 PM

ತಮಿಳು ನಟ ದಳಪತಿ ವಿಜಯ್(Thalapathy Vijay)ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ತಮಿಳಗ ವೆಟ್ರಿ ಕಳಗಂ ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ. ದಳಪತಿ ವಿಜಯ್ ಅವರು ರಾಜಕೀಯಕ್ಕೆ ಧುಮುಕಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಇದು ತಮಿಳುನಾಡಿನ ಸಿನಿಮಾ ಹಾಗೂ ರಾಜಕೀಯದಲ್ಲಿ ಹೊಸ ತಿರುವು ತರಲಿದೆ ಎಂದು ಭಾವಿಸಲಾಗಿದೆ.

ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly Elaction)ಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ನಟ ವಿಜಯ್ ಅವರು ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು 2018 ರಲ್ಲಿ ತುತ್ತುಕುಡಿ ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು, ಇದು ಅವರ ರಾಜಕೀಯ ಗಂಭೀರತೆಯನ್ನು ಸೂಚಿಸುತ್ತದೆ. ನಟ ಡಿಸೆಂಬರ್‌ನಲ್ಲಿ ಪ್ರವಾಹದಿಂದ ಜರ್ಜರಿತವಾಗಿರುವ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಿಗೆ ಭೇಟಿ ನೀಡಿದ್ದರು .

ಮತ್ತಷ್ಟು ಓದಿ: ಕೊಟ್ಟ ಸೂಚನೆ ನಿರ್ಲಕ್ಷಿಸಿದ ಖ್ಯಾತ ನಿರ್ದೇಶಕ; ಇದುವೇ ಸಿನಿಮಾ ಸೋಲಿಗೆ ಕಾರಣ ಆಯ್ತು?

2024ರ ಚುನಾವಣೆಯಲ್ಲಿ ನಮ್ಮ ಪಕ್ಷ  ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು, ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:50 pm, Fri, 2 February 24

Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು