AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆನ್ಸಾರ್ ಕಟ್ ಇಲ್ಲದೆ ‘ಜನ ನಾಯಗನ್’ ಸಿನಿಮಾ ನೋಡಲು ವಿಜಯ್ ಅಭಿಮಾನಿಗಳಿಗೆ ಸುವರ್ಣಾವಕಾಶ

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸ್ಟಾರ್ ನಟ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ 'ಜನ ನಾಯಗನ್' ಬಿಡುಗಡೆಗೆ ಸಜ್ಜಾಗಿದೆ. ಭಾರತದಲ್ಲಿ ಸೆನ್ಸಾರ್ ಮಂಡಳಿಯ ಹಲವು ಕಟ್‌ಗಳು ಮತ್ತು 'A' ಸರ್ಟಿಫಿಕೇಟ್‌ನೊಂದಿಗೆ ಸಿನಿಮಾ ರಿಲೀಸ್ ಆಗುತ್ತಿದ್ದರೆ, ವಿದೇಶಗಳಲ್ಲಿ ಯಾವುದೇ ಕತ್ತರಿ ಇಲ್ಲದೆ ಒರಿಜಿನಲ್ ವರ್ಷನ್ ಪ್ರದರ್ಶನಗೊಳ್ಳಲಿದೆ. ವಿಜಯ್ ಅವರ ರಾಜಕೀಯ ಪಕ್ಷ 'TVK' ಕುರಿತಾದ ಡೈಲಾಗ್ಸ್ ಹಾಗೂ ಹಲವು ದೃಶ್ಯಗಳಿಗೆ ಭಾರತದಲ್ಲಿ ಸೆನ್ಸಾರ್ ಮಂಡಳಿ ಕತ್ತರಿ ಹಾಕಿದೆ.

ಸೆನ್ಸಾರ್ ಕಟ್ ಇಲ್ಲದೆ 'ಜನ ನಾಯಗನ್' ಸಿನಿಮಾ ನೋಡಲು ವಿಜಯ್ ಅಭಿಮಾನಿಗಳಿಗೆ ಸುವರ್ಣಾವಕಾಶ
ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 13, 2026 | 11:12 AM

Share

ಮುಖ್ಯಾಂಶಗಳು

  • ದಳಪತಿ ವಿಜಯ್ 'ಜನ ನಾಯಗನ್' ಚಿತ್ರಕ್ಕೆ ಹೊಸ ಟ್ವಿಸ್ಟ್
  • ರಾಜಕೀಯ ಪಕ್ಷ 'TVK' ಡೈಲಾಗ್‌ಗೆ ಬಿದ್ದಿತು ಬ್ರೇಕ್
  • ವಿಜಯ್ ಸಿನಿಮಾದಲ್ಲಾದ ಪ್ರಮುಖ ಬದಲಾವಣೆಗಳೇನು?

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸ್ಟಾರ್ ನಟ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಗೆ ಸಜ್ಜಾಗಿದೆ. ಸೆನ್ಸಾರ್ ಮಂಡಳಿ ಈ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಿದೆ. ಸುಮಾರು 7 ತಿಂಗಳ ವಿಳಂಬದ ನಂತರ ಸಿನಿಮಾ ಥಿಯೇಟರ್‌ಗೆ ಬರುತ್ತಿದೆ. ಭಾರತದಲ್ಲಿ ರಿಲೀಸ್ ಆಗುವ ಸಿನಿಮಾಗೆ ಸೆನ್ಸಾರ್ ಮಂಡಳಿ ಹಲವು ಕಟ್‌ಗಳನ್ನು ಮಾಡಿದೆ. ಆದರೆ ವಿದೇಶಗಳಲ್ಲಿ ಯಾವುದೇ ಕಟ್ ಇಲ್ಲದೆ ಒರಿಜಿನಲ್ ಸಿನಿಮಾ ಬಿಡುಗಡೆಯಾಗುತ್ತಿದೆ. ವಿದೇಶದಲ್ಲಿರುವ ವಿಜಯ್ ಅಭಿಮಾನಿಗಳು ಚಿತ್ರದ ರಾ ಮತ್ತು ಅನ್‌ಕಟ್ ವರ್ಷನ್ ನೋಡಬಹುದು.

ವಿದೇಶಿ ವಿತರಕರಿಂದ ಅಧಿಕೃತ ಪ್ರಕಟಣೆ

ಯುಕೆಯಲ್ಲಿ ಈ ಚಿತ್ರವನ್ನು ‘ಅಹಿಂಸಾ ಎಂಟರ್‌ಟೈನ್‌ಮೆಂಟ್’ ಸಂಸ್ಥೆ ವಿತರಣೆ ಮಾಡುತ್ತಿದೆ. ಜುಲೈ 24 ರಂದು ಯುಕೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ವಿತರಕರು ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಅಲ್ಲಿ ಈ ಚಿತ್ರಕ್ಕೆ 15+ ರೇಟಿಂಗ್ ಸಿಕ್ಕಿದೆ. ಯಾವುದೇ ಸೀನ್ ಅಥವಾ ಡೈಲಾಗ್‌ಗೆ ಕತ್ತರಿ ಹಾಕಲಾಗಿಲ್ಲ. ವಿಜಯ್ ಅವರ ಮಾಸ್ ಆಕ್ಷನ್ ಇಡೀ ಸಿನಿಮಾವನ್ನು ಒರಿಜಿನಲ್ ಆಗಿಯೇ ನೋಡಬಹುದು ಎಂದು ವಿತರಕರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಜನ ನಾಯಗನ್’ ಸೆನ್ಸಾರ್ ಪ್ರಕ್ರಿಯೆ ಪೂರ್ಣ: ಸಿಎಂ ವಿಜಯ್ ಚಿತ್ರಕ್ಕೆ ‘A’ ಪ್ರಮಾಣಪತ್ರ

ಭಾರತದ ವರ್ಷನ್‌ನಲ್ಲಿ ಆದ ಪ್ರಮುಖ ಬದಲಾವಣೆಗಳು

ಈ ಸಿನಿಮಾದಲ್ಲಿ ವಿಜಯ್ ಅವರ ಪಾತ್ರದ ಹೆಸರು ‘ದಳಪತಿ ವೆಟ್ರಿ ಕೊಂಡಾನ್’. ಇದರ ಮೊದಲ ಅಕ್ಷರಗಳನ್ನು ಸೇರಿಸಿದರೆ ‘TVK’ ಎಂದಾಗುತ್ತದೆ. ಇದು ವಿಜಯ್ ಅವರ ರಾಜಕೀಯ ಪಕ್ಷದ (ತಮಿಳಗ ವೆಟ್ರಿ ಕಳಗಂ) ಹೆಸರೂ ಹೌದು. ಸಿನಿಮಾದಲ್ಲಿದ್ದ ‘ಅಂಬೇಡ್ಕರ್ ಸಟಮ್… ಟು… TVK ಸಟಮ್’ ಎಂಬ ಡೈಲಾಗ್‌ ಅನ್ನು ಸೆನ್ಸಾರ್ ಮಂಡಳಿ ತೆಗೆದುಹಾಕಿದೆ. ಆಡಿಯೋ ಮತ್ತು ವಿಡಿಯೋ ಎರಡರಲ್ಲೂ ಈ ಬದಲಾವಣೆ ಮಾಡಲಾಗಿದೆ.

ಸೆನ್ಸಾರ್ ಕತ್ತರಿಗೆ ಸಿಲುಕಿದ ಇತರ ದೃಶ್ಯಗಳು

ಸಿನಿಮಾದಲ್ಲಿ ಬರುವ ‘ಓಂ’ ಮತ್ತು ‘ನ್ಯೂ ಇಂಡಿಯಾ’ ಎಂಬ ಪದಗಳನ್ನು ಮ್ಯೂಟ್ ಮಾಡಲಾಗಿದೆ. ಸದ್ದಾಂ ಹುಸೇನ್ ಗಲ್ಲು ಶಿಕ್ಷೆಗೆ ಸಂಬಂಧಿಸಿದ ಡೈಲಾಗ್‌ಗಳನ್ನು ಬದಲಾಯಿಸಲಾಗಿದೆ. ಪೊಲೀಸ್ ಅಧಿಕಾರಿಯ ಬ್ಯಾಡ್ಜ್‌ಗೆ ಗೌರವ ನೀಡದ ದೃಶ್ಯವನ್ನು ತೆಗೆಯಲಾಗಿದೆ. ‘ಭಾಗವತಂ’ ಮತ್ತು ‘ರಂಗನಾಥರ್’ ಎಂಬ ಪದಗಳನ್ನು ಕೂಡ ಸೈಲೆನ್ಸ್ ಮಾಡಲಾಗಿದೆ. ಕೆಲವು ಅಶ್ಲೀಲ ಬೈಗುಳದ ಪದಗಳನ್ನು ಮ್ಯೂಟ್ ಮಾಡಲಾಗಿದೆ. ಮಗುವನ್ನು ಸುಡುವ ದೃಶ್ಯ ಮತ್ತು ಭಾರತದ ರಾಷ್ಟ್ರಧ್ವಜ ನೆಲಕ್ಕೆ ಬೀಳುವ ದೃಶ್ಯಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ