‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್​

Beast Movie: ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದೆ. ಅಭಿಮಾನಿಗಳು ಬೆಂಕಿ ಹಚ್ಚಿದ್ದಾರೆ ಎಂಬ ಕ್ಯಾಪ್ಷನ್​ನೊಂದಿಗೆ ಇದನ್ನು ಪೋಸ್ಟ್​ ಮಾಡಲಾಗಿದೆ.

‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್​
‘ಬೀಸ್ಟ್​’ ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್​ ಪರದೆಗೆ ಬೆಂಕಿ
Follow us
TV9 Web
| Updated By: ಮದನ್​ ಕುಮಾರ್​

Updated on: Apr 13, 2022 | 1:57 PM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದ್ದ ‘ಬೀಸ್ಟ್​’ ಸಿನಿಮಾ (Beast Movie) ಇಂದು (ಏ.13) ಬಿಡುಗಡೆ ಆಗಿದೆ. ದೇಶದ ಹಲವು ನಗರಗಳಲ್ಲಿ ಈ ಚಿತ್ರ ತೆರೆಕಂಡಿದೆ. ತಮಿಳುನಾಡಿನಲ್ಲಿ ದಳಪತಿ ವಿಜಯ್​ (Thalapathy Vijay) ಅಭಿಮಾನಿಗಳು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಆದರೆ ‘ಬೀಸ್ಟ್’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಹತಾಶರಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ನೆಗೆಟಿವ್ ವಿಮರ್ಶೆ ತುಂಬಿ ತುಳುಕುತ್ತಿದೆ. #BeastDisaster ಎಂಬ ಹ್ಯಾಶ್​ ಟ್ಯಾಗ್​ ಬಳಸಿ ಜನರು ಪೋಸ್ಟ್​ ಮಾಡುತ್ತಿದ್ದಾರೆ. ಈ ನಡುವೆ ಸಿನಿಮಾ ತುಂಬ ಬೋರಿಂಗ್​ ಆಗಿದೆ ಎಂದು ಹತಾಶರಾದ ಕೆಲವು ಅಭಿಮಾನಿಗಳು (Thalapathy Vijay Fans) ಚಿತ್ರಮಂದಿರದ ಪರದೆಗೆ ಬೆಂಕಿ ಇಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ವೈರಲ್​ ಆಗುತ್ತಿದೆ. ದಳಪತಿ ವಿಜಯ್​ ಅಭಿಮಾನಿಗಳ ಕೃತ್ಯಕ್ಕೆ ಅನೇಕರು ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಶಾರ್ಟ್​ ಸರ್ಕ್ಯೂಟ್​ ಕಾರಣದಿಂದ ಬೆಂಕಿ ತಗುಲಿರಬಹುದಾ ಅಥವಾ ಪ್ರೇಕ್ಷಕರೇ ಬೆಂಕಿ ಹಚ್ಚಿದ್ದಾರಾ ಎಂಬ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಆದರೆ ಅಭಿಮಾನಿಗಳು ಬೆಂಕಿ ಹಚ್ಚಿದ್ದಾರೆ ಎಂಬ ಕ್ಯಾಪ್ಷನ್​ನೊಂದಿಗೆ ಈ ವಿಡಿಯೋ ವೈರಲ್​ ಆಗುತ್ತಿದೆ.

ವಿಜಯ್​ ನಟನೆಯ ‘ಬೀಸ್ಟ್’ ಸಿನಿಮಾಗೆ ನೆಲ್ಸನ್​ ದಿಲೀಪ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ. ಆ್ಯಕ್ಷನ್​ ಮತ್ತು ಕಾಮಿಡಿ ಮೂಲಕ ಜನರನ್ನು ರಂಜಿಸಲು ಅವರು ಪ್ರಯತ್ನಿಸಿದ್ದಾರೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ. ನಾಯಕಿ ಪೂಜಾ ಹೆಗ್ಡೆ ಪಾತ್ರಕ್ಕೆ ಮಹತ್ವ ಇಲ್ಲ, ವಿಲನ್​ ಪಾತ್ರಗಳು ಪ್ರಬಲವಾಗಿಲ್ಲ, ಕಾಮಿಡಿ ದೃಶ್ಯಗಳು ಇದ್ದರೂ ನಗು ಬರಲ್ಲ, ದೃಶ್ಯಗಳು ರಿಪೀಟ್​ ಎನಿಸುತ್ತವೆ, ಕಥೆ ನೀರಸವಾಗಿದೆ, ಲಾಜಿಕ್​ ಇಲ್ಲ.. ಹೀಗೆ ಹತ್ತಾರು ನೆಗೆಟಿವ್​ ಪ್ರತಿಕ್ರಿಯೆ ಸಿಕ್ಕಿರುವುದು ‘ಬೀಸ್ಟ್​’ ಚಿತ್ರಕ್ಕೆ ಹಿನ್ನಡೆ ಆಗಿದೆ.

ಕಾಲಿವುಡ್​ನಲ್ಲಿ ಅಜಿತ್​ ಫ್ಯಾನ್ಸ್ ವರ್ಸಸ್​ ವಿಜಯ್​ ಫ್ಯಾನ್ಸ್ ಎಂಬ ವಾತಾವರಣ ಮೊದಲಿನಿಂದಲೂ ಇದೆ. ‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಮಾತನ್ನು ಕೇಳಿ ಅಜಿತ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವ ನೂರಾರು ಮೀಮ್ಸ್​ ಇದ್ದಕ್ಕೆ ಸಾಕ್ಷಿ. ಈಗ ವಿಜಯ್​ ಅಭಿಮಾನಿಗಳು ಚಿತ್ರಮಂದಿರದ ಪರದೆಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾದ ವಿಡಿಯೋ ಕೂಡ ಅಜಿತ್​ ಅಭಿಮಾನಿಗಳ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹೆಚ್ಚು ವೈರಲ್​ ಆಗುತ್ತಿದೆ. ಘಟನೆ ಕುರಿತು ದಳಪತಿ ವಿಜಯ್​ ಅವರು ಈವರೆಗೂ ಪ್ರತಿಕ್ರಿಯೆ ನೀಡಿಲ್ಲ.

ಚಿತ್ರಮಂದಿರದ ಪರದೆಗೆ ಬೆಂಕಿ ಬಿದ್ದಿರುವುದರಿಂದ ಸಹಜವಾಗಿಯೇ ಥಿಯೇಟರ್​ ಮಾಲಿಕರಿಗೆ ನಷ್ಟ ಉಂಟಾಗಿದೆ. ಯಾವುದೇ ಪ್ರಾಣ ಹಾನಿ ಆಗಿರುವ ಬಗ್ಗೆ ವರದಿ ಆಗಿಲ್ಲ. ತನಿಖೆ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ.

ಇದನ್ನೂ ಓದಿ:

Beast Twitter Review: ‘ಬೀಸ್ಟ್’​ ನೋಡಿ ಡಿಸಾಸ್ಟರ್​ ಎಂದ ಪ್ರೇಕ್ಷಕರು; ದಳಪತಿ ವಿಜಯ್​ ಸಿನಿಮಾ ಹೇಗಿದೆ?

ದಳಪತಿ ವಿಜಯ್ ಚಿತ್ರಕ್ಕೆ ಹಿನ್ನಡೆ; ಕಲೆಕ್ಷನ್​ ವಿಚಾರದಲ್ಲಿ ‘ಕೆಜಿಎಫ್​ 2’ ಹಿಂದಿಕ್ಕಲು ಬೀಸ್ಟ್​’ಗೆ ಅಸಾಧ್ಯ?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ