AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ದೊಡ್ಡ ಸೀಕ್ರೆಟ್ ರಿವೀಲ್

ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಜುಲೈ 23ಕ್ಕೆ ಬಿಡುಗಡೆಯಾಗಲಿದೆ. ಎಚ್. ವಿನೋದ್ ನಿರ್ದೇಶನದ ಈ ಚಿತ್ರ 'ಭಗವಂತ್ ಕೇಸರಿ'ಯ ತಮಿಳು ರಿಮೇಕ್. ಮೂಲ ಕಥೆಯ ಶೇ. 50 ಮಾತ್ರ ಇರಲಿದ್ದು, ವಿಜಯ್ ಮಹಿಳಾ ಸಬಲೀಕರಣದ ವಿಷಯಕ್ಕೆ ಒತ್ತು ನೀಡಿದ್ದಾರೆ. ಕನ್ನಡದ ಕೆವಿಎನ್ ಸಂಸ್ಥೆ ಬಂಡವಾಳ ಹೂಡಿದೆ. ವಿಜಯ್ ಅವರ ಕೊನೆಯ ಸಿನಿಮಾ ಇದಾಗಿರುವುದರಿಂದ ಭಾರಿ ನಿರೀಕ್ಷೆ ಮೂಡಿಸಿದೆ.

ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ದೊಡ್ಡ ಸೀಕ್ರೆಟ್ ರಿವೀಲ್
ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 22, 2026 | 12:22 PM

Share

ಮುಖ್ಯಾಂಶಗಳು

  • ಮೂಲ ಕಥೆಗೆ ಭರ್ಜರಿ ಕತ್ತರಿ
  • ‘ಭಗವಂತ್ ಕೇಸರಿ' ಚಿತ್ರಕ್ಕಿಂತ ಶೇ. 50ರಷ್ಟು ಚೇಂಜ್
  • ಕೊನೆಯ ಸಿನಿಮಾಗೆ ಹೆವಿ ಕಥೆ ಬೇಡ ಅಂದಿದ್ದ ದಳಪತಿ

ದಳಪತಿ ವಿಜಯ್ ನಟನೆಯ ‘‘ಜನ ನಾಯಗನ್’ ಸಿನಿಮಾ (Jana Nayagan) ಈ ವಾರವೇ ಥಿಯೇಟರ್‌ಗೆ ಬರ್ತಿದೆ. ಈ ಸಿನಿಮಾ ತೆಲುಗಿನ ಸೂಪರ್ ಹಿಟ್ ‘ಭಗವಂತ್ ಕೇಸರಿ’ ಚಿತ್ರದ ತಮಿಳು ರಿಮೇಕ್ ಆಗಿದೆ. ಈ ಬಿಗ್ ಬಜೆಟ್ ಸಿನಿಮಾವನ್ನು ಹೆಚ್. ವಿನೋದ್ ನಿರ್ದೇಶನ ಮಾಡಿದ್ದಾರೆ. ಇತ್ತೀಚಿನ ಇಂಟರ್ವ್ಯೂ ಒಂದರಲ್ಲಿ ಅವರು ಒರಿಜಿನಲ್ ಸಿನಿಮಾದಿಂದ ಎಷ್ಟು ಭಾಗವನ್ನು ಕಾಪಿ ಮಾಡಲಾಗಿದೆ ಅಂತ ಬಿಚ್ಚಿಟ್ಟಿದ್ದಾರೆ.

‘ಜನ ನಾಯಕನ್’ ಸಿನಿಮಾದಲ್ಲಿ ಒರಿಜಿನಲ್ ಕಥೆಯ ಶೇಕಡಾ 50 ರಷ್ಟು ಭಾಗ ಮಾತ್ರ ಇರಲಿದೆ ಎಂದು ಹೆಚ್. ವಿನೋದ್ ಹೇಳಿದ್ದಾರೆ. ಚಿತ್ರದ ಫಸ್ಟ್ ಹಾಫ್‌ನಲ್ಲಿ ಶೇ. 60 ರಷ್ಟು ಮತ್ತು ಸೆಕೆಂಡ್ ಹಾಫ್‌ನಲ್ಲಿ ಕೇವಲ ಶೇ. 20 ರಷ್ಟು ಮಾತ್ರ ಒರಿಜಿನಲ್ ಕಥೆ ಇರಲಿದೆ. ತಾವು ವಿಜಯ್ ಅವರಿಗೆ ರಿಮೇಕ್ ಯಾಕೆ ಮಾಡಬೇಕು ಎಂದು ಕೇಳಿದ್ದಾಗಿ ವಿನೋದ್ ಹೇಳಿದ್ದಾರೆ. ಅದಕ್ಕೆ ವಿಜಯ್ ಅವರು ಒರಿಜಿನಲ್ ಸಿನಿಮಾದ ಪ್ರತಿಯೊಂದು ಸೀನ್ ವಿವರಿಸಿ ತಮಗೆ ಯಾಕೆ ಇಷ್ಟ ಆಯ್ತು ಅಂತ ಹೇಳಿದ್ರಂತೆ. ವಿಜಯ್ ಅವರಿಗೆ ಮಹಿಳಾ ಸಬಲೀಕರಣದ ಕಥೆಗಳೆಂದರೆ ತುಂಬಾ ಇಷ್ಟ. ಈ ಹಿಂದೆ ಅಜಿತ್ ಕುಮಾರ್ ಜೊತೆ ‘ಪಿಂಕ್’ ರಿಮೇಕ್ ಮಾಡುವಾಗಲೂ ಇದೇ ರೀತಿ ಆಗಿತ್ತು ಎಂದು ವಿನೋದ್ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಜನ ನಾಯಗನ್’ ಹೊಸ ಟೀಸರ್ ನೋಡಿ ವಾವ್ ಎಂದ ವಿಜಯ್ ಅಭಿಮಾನಿಗಳು

ಮೊದಲಿಗೆ ತಾವು ವಿಜಯ್ ಅವರ ಕೊನೆಯ ಸಿನಿಮಾಗೆ ಬೇರೆ ಕಥೆ ರೆಡಿ ಮಾಡಿದ್ದಾಗಿ ಡೈರೆಕ್ಟರ್ ಹೇಳಿದ್ದಾರೆ. ಅದು ಇಬ್ಬರು ಬುದ್ಧಿವಂತರ ನಡುವೆ ನಡೆಯುವ ಜಿದ್ದಾಜಿದ್ದಿನ ಕಥೆಯಾಗಿತ್ತು. ಆದರೆ ಆ ಕಥೆ ತುಂಬಾ ಹೆವಿಯಾಗಿದೆ ಎಂದು ವಿಜಯ್ ರಿಜೆಕ್ಟ್ ಮಾಡಿದ್ದರು. ಅದರ ಬದಲು ‘ಭಗವಂತ್ ಕೇಸರಿ’ ಸಿನಿಮಾ ರಿಮೇಕ್ ಮಾಡಲು ಸಜೆಸ್ಟ್ ಮಾಡಿದ್ದರು. ಬಾಲಕೃಷ್ಣ ಅವರ ಸಿನಿಮಾಗಳ ಸ್ಟೈಲೇ ಬೇರೆ ಇರುತ್ತದೆ. ಆದರೆ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಇದಾಗಿರುವುದರಿಂದ ಈ ದೊಡ್ಡ ಅವಕಾಶವನ್ನು ಕೈಬಿಡಲು ತಮಗೆ ಇಷ್ಟವಿರಲಿಲ್ಲ ಎಂದು ಹೆಚ್. ವಿನೋದ್ ಮಾಹಿತಿ ನೀಡಿದ್ದಾರೆ.

‘ಜನ ನಾಯಗನ್’ ಸಿನಿಮಾ ಜುಲೈ 23ರಂದು ತೆರೆಗೆ ಬರಲಿದೆ. ಈ ಸಿನಿಮಾಗೆ ಕನ್ನಡದ ಕೆವಿಎನ್ ಸಂಸ್ಥೆ ಬಂಡವಾಳ ಹೂಡಿದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:14 am, Tue, 21 July 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ