AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ರಿಲೀಸ್ ಡೇಟ್?

ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎಂದೇ ಬಿಂಬಿತವಾಗಿರುವ ‘ಜನ ನಾಯಗನ್’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಅಧಿಕೃತವಾಗಿದೆ. ಹತ್ತಾರು ಅಡೆತಡೆಗಳ ನಂತರ ಈ ರಾಜಕೀಯ ಆಕ್ಷನ್ ಡ್ರಾಮಾ ಚಿತ್ರವು ಜುಲೈ 24ರಂದು ಜಾಗತಿಕವಾಗಿ ತೆರೆಗೆ ಬರಲು ಸಜ್ಜಾಗಿದೆ. ವಿನೋದ್ ನಿರ್ದೇಶನದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಬಿಗ್ ಬಜೆಟ್ ಸಿನಿಮಾ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ರಿಲೀಸ್ ಡೇಟ್?
ದಳಪತಿ ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 09, 2026 | 11:47 AM

Share

ಮುಖ್ಯಾಂಶಗಳು

  • ಜುಲೈ 24 ರಂದು ಜಾಗತಿಕ ರಿಲೀಸ್
  • ಎಲ್ಲಾ ಅನಿಶ್ಚಿತತೆಗಳಿಗೆ ತೆರೆ ಎಳೆದ ಚಿತ್ರತಂಡ
  • ಚಿತ್ರದ ಹೊಸ ಬಿಡುಗಡೆ ದಿನಾಂಕದ ಕುರಿತು ವಿತರಕರಿಗೆ ಮಾಹಿತಿ

ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎಂದೇ ಬಿಂಬಿತವಾಗಿರುವ ‘ಜನ ನಾಯಗನ್’ ಚಿತ್ರದ ಬಿಡುಗಡೆಗೆ ಎದುರಾಗಿದ್ದ ಹಾದಿ ಸುಗಮವಾಗಿದೆ ಎಂದು ವರದಿ ಆಗಿದೆ. ಹತ್ತಾರು ಅಡೆತಡೆಗಳು ಮತ್ತು ಸರಣಿ ಮುಂದೂಡಿಕೆಗಳ ಬಳಿಕ ಚಿತ್ರದ ರಿಲೀಸ್ ಡೇಟ್ ಕೊನೆಗೂ ಲಾಕ್ ಆಗಿದೆ. ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾದ ನಂತರವೂ ಈ ಚಿತ್ರದ ಬಗ್ಗೆ ಯಾವುದೇ ಅಧಿಕೃತ ಅಪ್‌ಡೇಟ್‌ಗಳು ಸಿಕ್ಕಿರಲಿಲ್ಲ. ಆದರೆ ಈಗ ವಿಜಯ್ ಅಭಿಮಾನಿಗಳಿಗೆ ಬಿಗ್ ಅಪ್‌ಡೇಟ್‌ ಒಂದು ಸಿಕ್ಕಿದೆ.

ಇತ್ತೀಚಿನ ವರದಿಗಳ ಪ್ರಕಾರ ‘ಜನ ನಾಯಗನ್’ ಸಿನಿಮಾ ಜುಲೈ 24, 2026 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ಬಿಡುಗಡೆಯಾಗಲು ಸಿದ್ಧವಾಗಿದೆ. ಈ ನಿಗದಿಪಡಿಸಲಾದ ದಿನಾಂಕದ ಬಗ್ಗೆ ವಿದೇಶಿ ಹಂಚಿಕೆದಾರರಿಗೆ ಚಿತ್ರತಂಡದಿಂದ ಮಾಹಿತಿ ರವಾನಿಸಲಾಗಿದೆ. ರಾಜಕೀಯ ಆಕ್ಷನ್ ಡ್ರಾಮಾ ಶೈಲಿಯ ಈ ಸಿನಿಮಾವನ್ನು ಕಣ್ಣುಂಬಿಕೊಳ್ಳಲು ಕಾಯುತ್ತಿದ್ದ ಕೋಟ್ಯಂತರ ಅಭಿಮಾನಿಗಳಿಗೆ ಇದು ಅತ್ಯಂತ ಸಂತಸದ ಸುದ್ದಿ.

‘ಜನ ನಾಯಗನ್’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಹೆಚ್. ವಿನೋದ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ವಿಜಯ್ ಅವರಿಗೆ ಜೋಡಿಯಾಗಿ ನಟಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪ್ರಮುಖ ಪಾತ್ರಗಳಲ್ಲಿ ಮಮಿತಾ ಬೈಜು, ಬಾಬಿ ಡಿಯೋಲ್, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಪ್ರಿಯಾಮಣಿ ಮತ್ತು ನರೇನ್ ನಟಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿದ್ದು, ಅನಿರುದ್ಧ್ ರವಿಚಂದರ್ ಅವರ ಧಮಾಕ ಸಂಗೀತ ಈ ಚಿತ್ರಕ್ಕಿದೆ.

ಇದನ್ನೂ ಓದಿ: ‘ಜನ ನಾಯಗನ್’ ಸಿನಿಮಾದ ಟಿಕೆಟ್ ದರಕ್ಕೆ ನಟ, ಸಿಎಂ ವಿಜಯ್ ಖಡಕ್ ರೂಲ್ಸ್

ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿರುವ ಮತ್ತೊಂದು ಚಿತ್ರ ಎಂದರೆ ಅದು ‘ಟಾಕ್ಸಿಕ್’. ಈ ಚಿತ್ರ ‘ಜನ ನಾಯಗನ್’ ರಿಲೀಸ್ ಆಗಿ ಇಂದು ತಿಂಗಳ ಬಳಿಕ ಅಂದರೆ ಆಗಸ್ಟ್ 26ರಂದು ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆಯೂ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಸಿನಿಮಾನ ಎರಡು ತಿಂಗಳು ರನ್ ಮಾಡೋ ಪ್ಲ್ಯಾನ್ ಇರುವುದರಿಂದ, ‘ಜನ ನಾಯಗನ್’ ಚಿತ್ರವನ್ನು ಮೊದಲೇ ತೆರೆಗೆ ತರಲು ಪ್ಲ್ಯಾನ್ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us