Sign In

By signing in or creating an account, you agree with Associated Broadcasting Company's Terms & Conditions and Privacy Policy.

2026ರ ಸಂಕ್ರಾಂತಿಗೆ ದಳಪತಿ ವಿಜಯ್ ನಟನೆಯ ಕೊನೇ ಸಿನಿಮಾ ‘ಜನ ನಾಯಗನ್’ ರಿಲೀಸ್

‘ಜನ ನಾಯಗನ್’ ಸಿನಿಮಾ 2026ರ ಜನವರಿ 9ರಂದು ರಿಲೀಸ್ ಆಗಲಿದೆ. ಹೆಚ್. ವಿನೋದ್ ಅವರ ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದು ದಳಪತಿ ವಿಜಯ್ ಅವರ ಕೊನೇ ಸಿನಿಮಾ. ಹಾಗಾಗಿ ನಿರೀಕ್ಷೆ ಜಾಸ್ತಿ ಇದೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ‘ಜನ ನಾಯಗನ್’ ಚಿತ್ರವನ್ನು ಬಹಳ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದೆ.

2026ರ ಸಂಕ್ರಾಂತಿಗೆ ದಳಪತಿ ವಿಜಯ್ ನಟನೆಯ ಕೊನೇ ಸಿನಿಮಾ ‘ಜನ ನಾಯಗನ್’ ರಿಲೀಸ್
Thalapathy Vijay
Follow us
ಮದನ್​ ಕುಮಾರ್​
|

Updated on: Mar 24, 2025 | 10:47 PM

ಕಾಲಿವುಡ್ ನಟ ದಳಪತಿ ವಿಜಯ್ (Thalapathy Vijay) ಅವರು ಈಗ ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದ ಮೇಲೆ ಗಮನ ಹರಿಸುತ್ತಿದ್ದಾರೆ. ತಮ್ಮದೇ ಪಕ್ಷ ಸ್ಥಾಪಿಸಿಕೊಂಡು ರಾಜಕೀಯಕ್ಕೆ ಧುಮುಕಿದ್ದಾರೆ. ಹಾಗಾಗಿ ಅವರು ನಟಿಸಿರುವ ಕೊನೇ ಸಿನಿಮಾ ‘ಜನ ನಾಯಗನ್’ (Jana Nayagan) ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಈ ಸಿನಿಮಾದ ಶೀರ್ಷಿಕೆ ಕೂಡ ರಾಯಕೀಯಕ್ಕೆ ಸಂಬಂಧಿಸಿದೆ. ಈ ಚಿತ್ರದ ಬಿಡುಗಡೆ ದಿನಾಂಕದ (Jana Nayagan Release Date) ಬಗ್ಗೆ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಹೊಸ ಅಪ್​ಡೇಟ್ ನೀಡಿದೆ. 2026ರ ಸಂಕ್ರಾಂತಿಗೆ ‘ಜನ ನಾಯಗನ್’ ಬಿಡುಗಡೆ ಆಗಲಿದೆ ಎಂದು ತಿಳಿಸಲಾಗಿದೆ.

2025ರ ಅಕ್ಟೋಬರ್​ನಲ್ಲಿ ‘ಜನ ನಾಯಗನ್’ ಬಿಡುಗಡೆ ಆಗಲಿದೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಈಗ ರಿಲೀಸ್ ದಿನಾಂಕದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. 2026ರ ಜನವರಿ 9ರಂದು ಈ ಸಿನಿಮಾ ತೆರೆಗೆ ಬರಲಿದೆ. ಈ ಬಗ್ಗೆ ಮಾಹಿತಿ ನೀಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
ಇಫ್ತಾರ್ ಕೂಟದಲ್ಲಿ ಭಾಗಿ ಆಗಿ ಪ್ರಾರ್ಥನೆ ಮಾಡಿದ ದಳಪತಿ ವಿಜಯ್
Image
ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ‘ಜನ ನಾಯಗನ್’ ಶೀರ್ಷಿಕೆ; ರಾಜಕೀಯದ ಕಥೆ  
Image
‘ದಳಪತಿ ವಿಜಯ್ ಅವರು ಡಾರ್ಲಿಂಗ್’; ಮನು ಭಾಕರ್ ಪ್ರೀತಿಯ ನುಡಿಗಳು
Image
ದಳಪತಿ ವಿಜಯ್ ಒಟ್ಟೂ ಆಸ್ತಿ ಎಷ್ಟು? ಯಾವೆಲ್ಲ ಕಾರುಗಳಿವೆ? ಇಲ್ಲಿದೆ ವಿವರ

‘ಜನ ನಾಯಗನ್’ ಸಿನಿಮಾಗೆ ಹೆಚ್. ವಿನೋದ್ ಅವರು ನಿರ್ದೇಶನ ಮಾಡಿದ್ದಾರೆ. ವೆಂಕಟ್​ ಕೆ. ನಾರಾಯಣ ಅವರು ನಿರ್ಮಾಣ ಮಾಡಿದ್ದಾರೆ. ರಿಲೀಸ್ ದಿನಾಂಕ ಗೊತ್ತಾದ ಬಳಿಕ ಅಭಿಮಾನಿಗಳು ಕಮೆಂಟ್ ಮೂಲಕ ತಮ್ಮ ಎಗ್ಸೈಟ್​ಮೆಂಟ್ ತೋರಿಸುತ್ತಿದ್ದಾರೆ. ‘ಬಾಕ್ಸ್ ಆಫೀಸ್​ ಕಿಂಗ್ ಕೊನೆಯ ಆರ್ಭಟ ಜೋರಾಗಿ ಇರಲಿದೆ’ ಎಂದು ಅಭಿಮಾನಿಯೊಬ್ಬರು ಕಮೆಂಟ್ ಮಾಡಿದ್ದಾರೆ. ಮುಂದಿನ ವರ್ಷ ನಿಜವಾದ ಸಂಕ್ರಾಂತಿ ಆಗಲಿದೆ ಎಂಬ ಕಮೆಂಟ್ ಕೂಡ ಬಂದಿದೆ.

ಇದನ್ನೂ ಓದಿ: ಏನೋ ಮಾಡಲು ಹೋಗಿ ಏನೋ ಆಯ್ತು, ದಳಪತಿ ವಿಜಯ್ ವಿರುದ್ಧ ಮುಸ್ಲೀಮರ ದೂರು

ಈ ಸಿನಿಮಾದಲ್ಲಿ ದಳಪತಿ ವಿಜಯ್ ಜೊತೆ ಪೂಜಾ ಹೆಗ್ಡೆ, ಬಾಲಿವುಡ್ ನಟ ಬಾಬಿ ಡಿಯೋಲ್, ಗೌತಮ್ ವಾಸುದೇವ ಮೆನನ್, ಪ್ರಿಯಾಮಣಿ, ಪ್ರಕಾಶ್ ರಾಜ್, ವರಲಕ್ಷ್ಮಿ ಶರತ್ ಕುಮಾರ್​ ಮುಂತಾದವರು ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಸಂಗೀತ ನೀಡುತ್ತಿದ್ದಾರೆ. ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ.

ಇದು ದಳಪತಿ ವಿಜಯ್ ಅವರ 69ನೇ ಸಿನಿಮಾ. ಈ ಚಿತ್ರದ ಬಳಿಕ ಬೇರೆ ಯಾವುದೇ ಸಿನಿಮಾದಲ್ಲಿ ತಾವು ನಟಿಸುವುದಿಲ್ಲ ಎಂದು ಅವರು ಈಗಾಗಲೇ ಹೇಳಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕೊನೆಯ ಸಿನಿಮಾವನ್ನು ಸೆಲೆಬ್ರೇಟ್ ಮಾಡಲು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.