AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಪುತ್ರ ನಟ ಅಲ್ಲ ನಿರ್ದೇಶಕ, ಮೊದಲ ಸಿನಿಮಾಕ್ಕೆ ಸ್ಟಾರ್ ಹೀರೋ ನಾಯಕ

Thalapathy Vijay son: ದಳಪತಿ ವಿಜಯ್ ರಾಜಕೀಯ ಪ್ರವೇಶಿಸಿದ್ದು ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗುತ್ತಿದೆ. ಇದೇ ಸಮಯದಲ್ಲಿ ಅವರ ಪುತ್ರ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ ಆದರೆ ನಟನಾಗಿ ಅಲ್ಲ ಬದಲಿಗೆ ನಿರ್ದೇಶಕನಾಗಿ.

ದಳಪತಿ ವಿಜಯ್ ಪುತ್ರ ನಟ ಅಲ್ಲ ನಿರ್ದೇಶಕ, ಮೊದಲ ಸಿನಿಮಾಕ್ಕೆ ಸ್ಟಾರ್ ಹೀರೋ ನಾಯಕ
ಮಂಜುನಾಥ ಸಿ.
|

Updated on:Feb 21, 2024 | 8:05 PM

Share

ಸಿನಿಮಾ ನಟರ ಮಕ್ಕಳು ಸಿನಿಮಾ ನಟರೇ ಆಗುವುದು ದಶಕಗಳಿಂದಲೂ ನೋಡಿಕೊಂಡು ಬರಲಾಗಿದೆ. ನಾಯಕನ ಮಕ್ಕಳು ನಾಯಕರು ಆಗುವುದು ಸಾಮಾನ್ಯ ಎಂಬಂತಾಗಿದೆ. ತಮಿಳಿನ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಪುತ್ರನೂ ಸಹ ಚಿತ್ರರಂಗಕ್ಕೆ ಎಂಟ್ರಿ ನೀಡಲು ಸಜ್ಜಾಗಿದ್ದಾರೆ. ಎರಡು ವರ್ಷದ ಹಿಂದೆಯೇ ದಳಪತಿ ವಿಜಯ್ ಪುತ್ರ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು, ವಿಜಯ್ ಮಗನ ಸಿನಿಮಾಕ್ಕೆ ವಿಜಯ್ ಸೇತುಪತಿ ಬಂಡವಾಳ ಹೂಡಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಆದರೆ ಇದೀಗ ಬಂದಿರುವ ಸುದ್ದಿಯಂತೆ ದಳಪತಿ ವಿಜಯ್ ಮಗ ಅಪ್ಪನಂತೆ ನಟನಾಗುತ್ತಿಲ್ಲ ಬದಲಿಗೆ ನಿರ್ದೇಶಕನಾಗುತ್ತಿದ್ದಾರೆ.

ದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್, ಸಿನಿಮಾ ನಿರ್ದೇಶಕನಾಗುವ ಕನಸು ಕಂಡಿದ್ದು, ಅದಕ್ಕಾಗಿ ತಯಾರಿ ಆರಂಭಿಸಿದ್ದಾರೆ. ಈ ಹಿಂದೆ ಅಪ್ಪನೊಟ್ಟಿಗೆ ಕೆಲವು ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಜೇಸನ್ ನಟಿಸಿದ್ದರು. ಜೇಸನ್ ಸಿನಿಮಾ ನಾಯಕನಾಗಿ ಅದ್ಧೂರಿಯಾಗಿ ಎಂಟ್ರಿ ನೀಡಲಿದ್ದಾರೆ ಎಂದೇ ನಂಬಲಾಗಿತ್ತು. ಆದರೆ ಜೇಸನ್ ಆಸಕ್ತಿ ನಟನೆಯ ಕಡೆಗಲ್ಲದೆ ನಿರ್ದೇಶನದ ಕಡೆಗಿದೆ. ಹಾಗಾಗಿ ಮೊದಲ ಸಿನಿಮಾ ನಿರ್ದೇಶನ ಮಾಡಲು ಜೇಸನ್ ಸಂಜಯ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಮೊದಲ ಸಿನಿಮಾಕ್ಕೆ ಸ್ಟಾರ್ ನಟನನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ.\

ಇದನ್ನೂ ಓದಿ:ದಳಪತಿ ವಿಜಯ್ ರಾಜಕೀಯಕ್ಕೆ ಬರುವುದು ಮತ್ತಷ್ಟು ಸನಿಹ; ನಡೆಯಿತು ಪ್ರಮುಖ ಬೆಳವಣಿಗೆ

ಈ ಹಿಂದೆಯೇ ಲೈಕಾ ಪ್ರೊಡಕ್ಷನ್ ಸಂಸ್ಥೆಯು ತಾವು ವಿಜಯ್​ರ ಪುತ್ರನ ಕತೆಯನ್ನು ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿತ್ತು. ಆಗಿನಿಂದಲೂ ಸಿನಿಮಾದಲ್ಲಿ ನಟಿಸಲಿರುವ ನಟರ ಬಗ್ಗೆ ಊಹಾಪೋಹ ಹರಿದಾಡುತ್ತಲೇ ಇತ್ತು. ತಮಿಳಿನ ಮತ್ತೊಂದು ಸ್ಟಾರ್ ನಟ ವಿಕ್ರಂರ ಪುತ್ರ ಧ್ರುವ್ ವಿಕ್ರಂ ನಾಯಕನಾಗಿ ವಿಜಯ್ ಸೇತುಪತಿ ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಅದು ಈಗ ಸುಳ್ಳಾಗಿದ್ದು, ಪ್ಯಾನ್ ಇಂಡಿಯಾ ಸ್ಟಾರ್ ನಟ ದುಲ್ಕರ್ ಸಲ್ಮಾನ್, ವಿಜಯ್ ಪುತ್ರನ ಮೊದಲ ಸಿನಿಮಾಕ್ಕೆ ನಾಯಕರಾಗಿ ಆಯ್ಕೆ ಆಗಿದ್ದಾರೆ ಎನ್ನಲಾಗುತ್ತಿದೆ.

ಜೇಸನ್, ಟೊರಂಟೊ ಫಿಲಮ್ ಇನ್​ಸ್ಟಿಟ್ಯೂಟ್​ನಿಂದ ಸಿನಿಮಾ ನಿರ್ಮಾಣದ ಪದವಿ ಮುಗಿಸಿದ್ದಾರೆ. ಮಾತ್ರವಲ್ಲದೆ ಲಂಡನ್ ಫಿಲಮ್ ಸ್ಕೂಲ್​ನಿಂದ ಸ್ಕ್ರೀನ್ ರೈಟಿಂಗ್ ತರಬೇತಿಯನ್ನೂ ಪಡೆದುಕೊಂಡಿದ್ದಾರೆ. ಈ ಹಿಂದೆಯೇ ಜೇಸನ್​ಗೆ ಸುಧಾ ಕೊಂಗರಾ ಹಾಗೂ ಆಲ್ಫೊನ್ಸ್ ಪುತ್ತೆರನ್ ಅವರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಲಭಿಸಿತ್ತು, ಆದರೆ ನಿರ್ದೇಶನದ ಬಗ್ಗೆ ಹೆಚ್ಚು ಆಸಕ್ತಿಯುಳ್ಳ ಜೇಸನ್, ನಟನೆಯ ಅವಕಾಶವನ್ನು ಕೈಬಿಟ್ಟರು ಎನ್ನಲಾಗುತ್ತಿದೆ.

ಇದೀಗ ದುಲ್ಕರ್ ಸಲ್ಮಾನ್ ಜೊತೆಗೆ ಜೇಸನ್ ತಮ್ಮ ಮೊದಲ ಸಿನಿಮಾ ಮಾಡುತ್ತಿದ್ದು, ಈ ಸಿನಿಮಾಕ್ಕೆ ಎಆರ್ ರೆಹಮಾನ್ ಪುತ್ರ ಎಆರ್ ಅಮೀನ್ ಸಂಗೀತ ನೀಡಲಿದ್ದಾರೆ. ತಮಿಳಿನ ಜನಪ್ರಿಯ ನಿರ್ದೇಶಕ ಶಂಕರ್ ಅವರ ಪುತ್ರಿ ಅದಿತಿ ಈ ಸಿನಿಮಾ ಮೂಲಕ ನಾಯಕಿಯಾಗಿ ಎಂಟ್ರಿ ನೀಡಲಿದ್ದಾರೆ. ಆದಷ್ಟು ಶೀಘ್ರದಲ್ಲಿ ಸಿನಿಮಾ ಸೆಟ್ಟೇರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Wed, 21 February 24

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!