AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನಿಗೂ ಬೇಡವಾದ ದಳಪತಿ ವಿಜಯ್? ಡಿವೋರ್ಸ್ ಸುದ್ದಿ ಬೆನ್ನಲ್ಲೇ ಅನ್​ಫಾಲೋ

ದಳಪತಿ ವಿಜಯ್ ಅವರು ಖ್ಯಾತ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಇದೆ. ಆ ಕಾರಣದಿಂದ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವುದು ಖಚಿತವಾಗಿದೆ. ಈ ಘಟನೆಯ ಬೆನ್ನಲ್ಲೇ ಮಗ ಜೇಸನ್ ಸಂಜಯ್ ಅವರು ವಿಜಯ್ ಅವರನ್ನು ಅನ್​ಫಾಲೋ ಮಾಡಿ ಸುದ್ದಿ ಆಗಿದ್ದಾರೆ.

ಮಗನಿಗೂ ಬೇಡವಾದ ದಳಪತಿ ವಿಜಯ್? ಡಿವೋರ್ಸ್ ಸುದ್ದಿ ಬೆನ್ನಲ್ಲೇ ಅನ್​ಫಾಲೋ
Thalapathy Vijay, Jason Sanjay
ಮದನ್​ ಕುಮಾರ್​
|

Updated on: Mar 01, 2026 | 12:09 PM

Share

ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಅವರ ಸಂಸಾರದ ಜಗಳ ಈಗ ಕೋರ್ಟ್ ಮೆಟ್ಟಿಲೇರಿದೆ. ವಿಚ್ಛೇದನಕ್ಕೆ ಮನವಿ ಮಾಡಿ ವಿಜಯ್ ಪತ್ನಿ ಸಂಗೀತಾ ಅವರು ಅರ್ಜಿ ಸಲ್ಲಿಸಿದ್ದಾರೆ. ಡಿವೋರ್ಸ್ (Divorce) ಪಡೆಯಲು ಜನವರಿ 27ರಂದು ಅವರು ಕೌಟುಂಬಿಕ ಕೋರ್ಟ್​​ನಲ್ಲಿ ಅರ್ಜಿ ಹಾಕಿರುವುದು ಖಚಿತವಾಗಿದೆ. ಈ ಬೆನ್ನಲ್ಲೇ ವಿಜಯ್ ಮತ್ತು ಸಂಗೀತಾ ದಂಪತಿಯ ಪುತ್ರ ಜೇಸನ್ ಸಂಜಯ್ (Jason Sanjay) ಬಗ್ಗೆ ಒಂದು ವಿಷಯ ಬಹಿರಂಗ ಆಗಿದೆ. ತಂದೆಯ ಇನ್​ಸ್ಟಾಗ್ರಾಮ್ ಖಾತೆಯನ್ನು ಜೇಸನ್ ಸಂಜಯ್ ಅನ್​ಫಾಲೋ ಮಾಡಿದ್ದಾರೆ.

ಸೆಲೆಬ್ರಿಟಿಗಳ ಕುಟುಂಬದ ವಿಷಯ ಈ ರೀತಿ ಬಹಿರಂಗ ಆದಾಗ ಅಭಿಮಾನಿಗಳು ನಿಗಾ ಇಡುತ್ತಾರೆ. ಸೋಶಿಯಲ್ ಮೀಡಿಯಾ ಖಾತೆಯ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತದೆ. ಈಗ ಸೇಸನ್ ಸಂಜಯ್ ಅವರು ದಳಪತಿ ವಿಜಯ್ ಅವರನ್ನು ಅನ್​ಫಾಲೋ ಮಾಡಿರುವುದು ಗೊತ್ತಾಗಿದೆ. ಆ ಮೂಲಕ ತಂದೆಯ ಬಗ್ಗೆ ಮಗನಿಗೆ ಅಸಮಾಧಾನ ತೀವ್ರವಾಗಿದೆ ಎಂಬುದು ತಿಳಿದುಬಂದಿದೆ.

ಇನ್ನೂ ಕೆಲವರು ಬೇರೆ ರೀತಿ ವಾದ ಮಾಡುತ್ತಿದ್ದಾರೆ. ದಳಪತಿ ವಿಜಯ್ ಅವರನ್ನು ಜೇಸನ್ ಸಂಜಯ್ ಎಂದಿಗೂ ಫಾಲೋ ಮಾಡುತ್ತಲೇ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾಗಿ ಅಭಿಮಾನಿಗಳಲ್ಲಿ ಈ ವಿಷಯದ ಬಗ್ಗೆ ಗೊಂದಲ ಮೂಡಿದೆ. ಚಂಗಲ್​ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ದಳಪತಿ ವಿಜಯ್ ಮತ್ತು ಸಂಗೀತಾ ಅವರ ವಿಚ್ಛೇದನದ ಅರ್ಜಿ ವಿಚಾರಣೆ ಆಗಬೇಕಿದೆ.

1999ರಲ್ಲಿ ದಳಪತಿ ವಿಜಯ್ ಮತ್ತು ಸಂಗೀತಾ ಅವರು ಮದುವೆ ಆಗಿದ್ದರು. ಸಂಗೀತಾ ಕುಟುಂಬದವರು ಶ್ರೀಲಂಕನ್ ತಮಿಳು ಮೂಲದವರು. ಮದುವೆಗೂ ಮುನ್ನ ಸಂಗೀತಾ ಅವರು ಬ್ರಿಟಿಷ್ ಪೌರತ್ವ ಹೊಂದಿದ್ದರು. 27 ವರ್ಷಗಳ ಕಾಲ ಸಂಸಾರ ಮಾಡಿದ ಈ ಜೋಡಿ ಈಗ ವಿಚ್ಛೇದನ ಪಡೆಯಲು ಮುಂದಾಗಿದೆ. ಈ ಕುರಿತು ವಿಜಯ್ ಇನ್ನೂ ಅಧಿಕೃತ ಹೇಳಿಕೆ ನೀಡುವುದು ಬಾಕಿ ಇದೆ.

ಇದನ್ನೂ ಓದಿ: ಕಟಕಟೆಯಲ್ಲಿ ದಳಪತಿ ವಿಜಯ್ ದಾಂಪತ್ಯ: ತ್ರಿಷಾ ಹಳೆ ವಿಡಿಯೋ ವೈರಲ್ ಆಗುತ್ತಿರೋದೇಕೆ?

ನಟನೆಯಿಂದ ದೂರ ಸರಿದಿರುವ ದಳಪತಿ ವಿಜಯ್ ಅವರ ಕೊನೇ ಸಿನಿಮಾ ‘ಜನ ನಾಯಗನ್’ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಈಗಾಗಲೇ ಅವರು ತಮಿಳುನಾಡು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ನಟಿಯೊಬ್ಬರ ಜೊತೆ ವಿಜಯ್ ಅವರಿಗೆ ಅನೈತಿಕ ಸಂಬಂಧ ಇದೆ ಎಂದು ಪತ್ನಿ ಸಂಗೀತಾ ಆರೋಪ ಮಾಡಿದ್ದಾರೆ. ಇದು ಅವರ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕಿ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ