ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೇಲರ್ ರಿಲೀಸ್​ಗೆ ದಿನಾಂಕ ಫಿಕ್ಸ್

ದಳಪತಿ ವಿಜಯ್ ಅವರು ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಸೆಪ್ಟೆಂಬರ್ 5ರಂದು ಸಿನಿಮಾ ರಿಲೀಸ್ ಆಗಲಿದೆ. ಯೋಗಿ ಬಾಬು, ಮೋಹನ್, ಪ್ರಭುದೇವ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಸಿನಿಮಾಗೆ ಇಂಗ್ಲೆಂಡ್​ನಲ್ಲಿ ಅಡ್ವಾನ್ಸ್ ಬುಕಿಂಗ್ ಆರಂಭ ಆಗಿದೆ.

ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೇಲರ್ ರಿಲೀಸ್​ಗೆ ದಿನಾಂಕ ಫಿಕ್ಸ್
ವಿಜಯ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Aug 16, 2024 | 10:53 AM

ದಳಪತಿ ವಿಜಯ್ ಅವರ ನಟನೆಯ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಸೆಪ್ಟೆಂಬರ್ 5ರಂದು ಸಿನಿಮಾ ಬಿಡುಗಡೆ ಆಗಿದೆ. ಇದಕ್ಕೂ ಮೊದಲು ಅಂದರೆ ಆಗಸ್ಟ್ 17ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ಆಗಸ್ಟ್ 15ರ ಪ್ರಯುಕ್ತ ಈ ಘೋಷಣೆ ಮಾಡಲಾಗಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಸಿನಿಮಾದಲ್ಲಿ ದಳಪತಿ ವಿಜಯ್ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘GOAT’ ಚಿತ್ರದ ಹೊಸ ಪೋಸ್ಟರ್​ನ ತಂಡ ರಿಲೀಸ್ ಮಾಡಿದೆ. ಇದರಲ್ಲಿ ಅವರು ಗನ್ ಹಿಡಿದು ಮಿಂಚಿದ್ದಾರೆ. ಇದರಲ್ಲಿ ಟ್ರೇಲರ್ ರಿಲೀಸ್ ದಿನಾಂಕವನ್ನು ಉಲ್ಲೇಖ ಮಾಡಲಾಗಿದೆ. ಈ ಚಿತ್ರವನ್ನು ವೆಂಕಟರ್ ಪ್ರಭು ಅವರು ನಿರ್ದೇಶನ ಮಾಡುತ್ತಿದ್ದಾರೆ.  ಕಲ್ಪಥಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಹಾಗೂ ಕಲ್ಪತಿ ಎಸ್ ಸುರೇಶ್ ಅವರು ಈ ಚಿತ್ರವನ್ನು ‘ಎಜಿಎಸ್ ಎಂಟರ್​ಟೇನ್​ಮೆಂಟ್’ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಪ್ರಭುದೇವ, ಅಜ್ಮಲ್ ಅಮೀರ್, ಜಯರಾಮ್ ಸೇರಿ ಅನೇಕರು ನಟಿಸಿದ್ದಾರೆ. ಯುವನ್ ಶಂಕರ್ ರಾಜ ಅವರು ಈ ಚಿತ್ರಕ್ಕೆ ಸಾಂಗ್ ಕಪೋಸ್ ಮಾಡಿದ್ದಾರೆ. ಸಿನಿಮಾದ ಹಾಡುಗಳು ಮೆಚ್ಚುಗೆ ಪಡೆದಿವೆ.

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ.  ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ. ‘GOAT’ ಒಂದು ಕಾಲ್ಪನಿಕ ಕಥೆ. ಇದನ್ನು ನೈಜವಾಗಿ ಕಟ್ಟಿಕೊಡುವ ಪ್ರಯತ್ನ ಸಿನಿಮಾದಲ್ಲಿ ಆಗಿದೆ. ವಿಜಯ್ ಅವರು ಉಗ್ರ ನಿಗ್ರಹ ತಂಡದ ಭಾಗವಾಗಿರುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ: 8 ಕೋಟಿ ರೂಪಾಯಿ ಬೆಲೆಯ ರೋಲ್ಸ್ ರಾಯ್ಸ್ ಮಾರಿದ ದಳಪತಿ ವಿಜಯ್; ಕಾರಣ ಏನು?

ಸೆಪ್ಟೆಂಬರ್ 5ರಂದು ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರ ಐಮ್ಯಾಕ್ಸ್ ಫಾರ್ಮ್ಯಾಟ್​ನಲ್ಲೂ ಲಭ್ಯ ಇದೆ. ಈ ಚಿತ್ರವನ್ನು ಉತ್ತರ ಭಾರತದಲ್ಲಿ ಜೀ ಸ್ಟುಡಿಯೋ ಹಂಚಿಕೆ ಮಾಡುತ್ತಿದೆ. ಈ ಸಿನಿಮಾ ರಿಲೀಸ್ ಬೆನ್ನಲ್ಲೇ ಅವರ ಕೊನೆಯ ಚಿತ್ರದಲ್ಲಿ ಬ್ಯುಸಿ ಆಗಲಿದ್ದಾರೆ. ಆ ಬಳಿಕ ಅವರು ರಾಜಕೀಯದಲ್ಲಿ ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ