‘ಜನ ನಾಯಗನ್’ ಬಿಡುಗಡೆಗೆ ದಿನಾಂಕ ನಿಗದಿ: ಸಮಂತಾಗೆ ಶುರು ಆತಂಕ

Thalapathy Vijay movie: ‘ಜನ ನಾಯಗನ್’ ನನ್ನ ಕೊನೆಯ ಸಿನಿಮಾ ಎಂದು ವಿಜಯ್ ಹೇಳಿದ್ದರು. ಈ ಸಿನಿಮಾ ಇದೇ ವರ್ಷ ಜನವರಿಯಲ್ಲಿ ಬಿಡುಗಡೆ ಆಗಬೇಕಿತ್ತು ಆದರೆ ರಾಜಕೀಯ ಒತ್ತಡಗಳ ಕಾರಣ ಇನ್ನೂ ಬಿಡುಗಡೆ ಆಗಿಲ್ಲ. ಇದೀಗ ವಿಜಯ್ ಸಿಎಂ ಆದ ಬಳಿಕ ‘ಜನ ನಾಯಗನ್’ ಬಿಡುಗಡೆ ಗ್ಯಾರೆಂಟಿ ಎನ್ನಲಾಗಿತ್ತು. ಇದೀಗ ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಆಗಿದೆಯಂತೆ.

‘ಜನ ನಾಯಗನ್’ ಬಿಡುಗಡೆಗೆ ದಿನಾಂಕ ನಿಗದಿ: ಸಮಂತಾಗೆ ಶುರು ಆತಂಕ
Jana Nayagan

Updated on: May 26, 2026 | 6:07 PM

ತಮಿಳುನಾಡಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ. ವಿಜಯ್ ಅವರು ರಾಜಕೀಯ ಪ್ರವೇಶದ ಬಳಿಕ ಚಿತ್ರರಂಗದಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ ಅವರು ನಟಿಸಿದ ಕೊನೆಯ ಸಿನಿಮಾ ‘ಜನ ನಾಯಗನ್’ ಇನ್ನೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್’ ನನ್ನ ಕೊನೆಯ ಸಿನಿಮಾ ಎಂದು ವಿಜಯ್ ಹೇಳಿದ್ದರು. ಈ ಸಿನಿಮಾ ಇದೇ ವರ್ಷ ಜನವರಿಯಲ್ಲಿ ಬಿಡುಗಡೆ ಆಗಬೇಕಿತ್ತು ಆದರೆ ರಾಜಕೀಯ ಒತ್ತಡಗಳ ಕಾರಣ ಇನ್ನೂ ಬಿಡುಗಡೆ ಆಗಿಲ್ಲ. ಇದೀಗ ವಿಜಯ್ ಸಿಎಂ ಆದ ಬಳಿಕ ‘ಜನ ನಾಯಗನ್’ ಬಿಡುಗಡೆ ಗ್ಯಾರೆಂಟಿ ಎನ್ನಲಾಗಿತ್ತು. ಇದೀಗ ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಆಗಿದೆಯಂತೆ.

ಕೆಲ ದಿನಗಳ ಹಿಂದಷ್ಟೆ ಮಾಧ್ಯಮಗಳ ಎದುರು ಮಾತನಾಡಿದ್ದ ‘ಜನ ನಾಯಗನ್’ ನಿರ್ಮಾಪಕ ವೆಂಕಟ್ ನಾರಾಯಣ್, ‘ಜನ ನಾಯಗನ್’ಗೆ ಸಿಬಿಎಫ್​​ಸಿ ಪ್ರಮಾಣ ಪತ್ರ ಇನ್ನೂ ದೊರೆತಿಲ್ಲ ಆದರೆ ಶೀಘ್ರವೇ ದೊರೆಯಲಿದೆ ಎಂದಿದ್ದರು. ಕೆಲ ಮೂಲಗಳ ಪ್ರಕಾರ ಇದೀಗ ಸಿನಿಮಾಕ್ಕೆ ಪ್ರಮಾಣ ಪತ್ರ ದೊರೆಯುವುದು ಖಾತ್ರಿ ಆಗಿದ್ದು, ಅದರ ಆಧಾರದ ಮೇಲೆ ನಿರ್ಮಾಪಕರು ಸಿನಿಮಾ ಬಿಡುಗಡೆ ದಿನಾಂಕವನ್ನು ಫಿಕ್ಸ್ ಮಾಡಿದ್ದಾರಂತೆ. ಈಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ ‘ಜನ ನಾಯಗನ್’ ಸಿನಿಮಾ ಜೂನ್ 19ಕ್ಕೆ ಬಿಡುಗಡೆ ಆಗಲಿದೆ.

‘ಜನ ನಾಯಗನ್’ ಸಿನಿಮಾ ಈಗಾಗಲೇ ಆನ್​​ಲೈನ್​​ನಲ್ಲಿ ಸೋರಿಕೆ ಆಗಿದೆ. ಹಾಗಿದ್ದರೂ ಸಹ ಸಿನಿಮಾಕ್ಕೆ ಕ್ರೇಜ್ ಇದ್ದು, ಜೂನ್ 19ರಂದು ಸಿನಿಮಾ ಅನ್ನು ಬಿಡುಗಡೆ ಮಾಡಲು ನಿರ್ಮಾಪಕರು ಸಜ್ಜಾಗಿದ್ದಾರೆ. ವಿಜಯ್ ಹುಟ್ಟುಹಬ್ಬ ಜೂನ್ 22 ಕ್ಕೆ ಇದ್ದು ಅದಕ್ಕೆ ಮುಂಚಿತವಾಗಿ ಸಿನಿಮಾವನ್ನು ತೆರೆಗೆ ತರುವುದು ನಿರ್ಮಾಪಕರ ಯೋಜನೆ. ಇದೀಗ ಸ್ವತಃ ವಿಜಯ್ ಅವರು, ಸಿನಿಮಾ ಬಿಡುಗಡೆ ಆದ ಮೊದಲ ವಾರ ಚಿತ್ರಮಂದಿರಗಳಲ್ಲಿ ಐದು ಪ್ರದರ್ಶನ ಮಾಡಲು ಆದೇಶ ಹೊರಡಿಸಿದ್ದು, ಇದು ಸಹ ‘ಜನ ನಾಯಗನ್’ ನಿರ್ಮಾಪಕರಿಗೆ ಸಹಕಾರಿ ಆಗಲಿದೆ.

ಇದನ್ನೂ ಓದಿ:‘ಜನ ನಾಯಗನ್’ ಸಿನಿಮಾ ಬಿಡುಗಡೆ ಯಾವಾಗ: ಅಪ್​​ಡೇಟ್ ಹಂಚಿಕೊಂಡ ನಿರ್ಮಾಪಕ

ಆದರೆ ‘ಜನ ನಾಯಗನ್’ ಜೂನ್ 19ಕ್ಕೆ ಬಿಡುಗಡೆ ಆದರೆ ಸಮಂತಾಗೆ ಸಂಕಷ್ಟ ಆಗಲಿದೆ. ಸಮಂತಾ ನಟಿಸಿರುವ ‘ಮಾ ಇಂಟಿ ಬಂಗಾರಂ’ ಸಿನಿಮಾ ಸಹ ಅದೇ ದಿನ ಬಿಡುಗಡೆ ಆಗಲಿದೆ. ಜೂನ್ 4 ರಂದು ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗಲಿದೆ. ಅದಾದ ಮುಂದಿನ ವಾರವೂ ಸಹ ತೆಲುಗಿನ ಮತ್ತೊಂದು ದೊಡ್ಡ ಸಿನಿಮಾ ತೆರೆಗೆ ಬರಲಿದೆ. ಹಾಗಾಗಿ ಸಿನಿಮಾದ ಬಿಡುಗಡೆಯನ್ನು ಮುಂದೂಡಿ ಜೂನ್ 19ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಈಗ ಹಠಾತ್ತನೆ ‘ಜನ ನಾಯಗನ್’ ಎದುರು ಬಿದ್ದಿದೆ. ಮತ್ತೆ ‘ಮಾ ಇಂಟಿ ಬಂಗಾರಂ’ ಸಿನಿಮಾದ ಬಿಡುಗಡೆ ದಿನಾಂಕ ಬದಲಾಗುವ ಸಾಧ್ಯತೆ ಇದೆ.

‘ಜನ ನಾಯಗನ್’ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದ್ದು, ಎಚ್ ವಿನೋದ್ ನಿರ್ದೇಶನ ಮಾಡಿದ್ದಾರೆ. ತೆಲುಗಿನ ‘ಭಗವಂತ್ ಕೇಸರಿ’ ಸಿನಿಮಾದ ರೀಮೇಕ್ ಇದಾಗಿದ್ದು, ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿ. ಮಲಯಾಳಂನ ಮಮಿತಾ ಬಿಜು ಸಹ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಬಾಲಿವುಡ್ ನಟ ಬಾಬಿ ಡಿಯೋಲ್ ವಿಲನ್. ಅನಿರುದ್ಧ ರವಿಚಂದ್ರನ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us