AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ‘ಜನ ನಾಯಗನ್’ ಸಿನಿಮಾ ವಿವಾದ

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾಗೆ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಬಂಡವಾಳ ಹೂಡಿದೆ. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಈ ಸಿನಿಮಾದ ಬಿಡುಗಡೆ ತೊಂದರೆ ಆಗಿದೆ. ಇದರಿಂದ ನಿರ್ಮಾಪಕರಿಗೆ ನಷ್ಟ ಆಗಿದೆ. ಈಗ ನಿರ್ಮಾಣ ಸಂಸ್ಥೆಯು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಸದ್ಯಕ್ಕಂತೂ ಈ ಚಿತ್ರದ ಬಿಡುಗಡೆ ಅನಿಶ್ಚಿತವಾಗಿದೆ.

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ‘ಜನ ನಾಯಗನ್’ ಸಿನಿಮಾ ವಿವಾದ
Thalapathy Vijay
ಮದನ್​ ಕುಮಾರ್​
|

Updated on: Jan 12, 2026 | 3:33 PM

Share

ನಟ ದಳಪತಿ ವಿಜಯ್ (Thalapathy Vijay) ಅವರ ಕೊನೇ ಸಿನಿಮಾ ಎಂಬ ಕಾರಣಕ್ಕೆ ‘ಜನ ನಾಯಗನ್’ (Jana Nayagan) ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜನವರಿ 9ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿತ್ತು. ಅಡ್ವಾನ್ಸ್ ಬುಕಿಂಗ್ ಕೂಡ ಶುರುವಾಗಿತ್ತು. ಆದರೆ ಅಂತಿಮ ಹಂತದಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ ಎದುರಾಯಿತು. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಚಿತ್ರದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಆಯಿತು. ಈಗ ಈ ವಿವಾದ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದೆ.

ಜನ ನಾಯಗನ್ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ಸಿಗದೇ ಇರುವುದನ್ನು ಪ್ರಶ್ನಿಸಿ ನಿರ್ಮಾಪಕರು ಮದ್ರಾಸ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಏಕ ಸದಸ್ಯ ಪೀಠವು ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ಆದೇಶ ನೀಡಿತ್ತು. ಆದರೆ ಕೆಲವೇ ಗಂಟೆಗಳ ಬಳಿಕ ಈ ಆದೇಶಕ್ಕೆ ಸ್ವತಃ ಮದ್ರಾಸ್ ಹೈಕೋರ್ಟ್ ತಡೆ ನೀಡಿತು.

ಈ ಅರ್ಜಿಯ ಸೂಕ್ತ ವಿಚಾರಣೆ ನಡೆಯದೆಯೇ ಆದೇಶ ನೀಡಲಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು. ಹಾಗಾಗಿ ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಲಾಯಿತು. ಅಂದರೆ, ಅಲ್ಲಿಯ ತನಕ ‘ಜನ ನಾಯಗನ್’ ಸಿನಿಮಾದ ಬಿಡುಗಡೆಗೆ ಅವಕಾಶ ಇಲ್ಲದಂತಾಯಿತು. ಈಗ ನಿರ್ಮಾಪಕರು ಸುಪ್ರೀಂ ಕೋರ್ಟ್​​ ಮೆಟ್ಟಿಲೇರಿದ್ದಾರೆ. ಮದ್ರಾಸ್ ಹೈಕೋರ್ಟ್ ತಡೆ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

‘ಜನ ನಾಯಗನ್’ ಸಿನಿಮಾದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಕತೆ ಇದೆ ಎನ್ನಲಾಗಿದೆ. ಸ್ವತಃ ವಿಜಯ್ ಅವರು ಸಿನಿಮಾ ಬಿಟ್ಟು ರಾಜಕೀಯದ ಕಡೆಗೆ ಹೊರಳಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯ್ ವಿರುದ್ಧ ರಾಜಕೀಯ ಕುತಂತ್ರದ ಭಾಗವಾಗಿಯೇ ‘ಜನ ನಾಯಗನ್’ ಸಿನಿಮಾಗೆ ತೊಂದರೆ ಕೊಡಲಾಗಿದೆ ಎನ್ನಲಾಗುತ್ತಿದೆ. ಒಟ್ಟಾರೆ ಈ ವಿವಾದವು ಈಗ ರಾಜಕೀಯದ ತಿರುವು ಪಡೆದುಕೊಂಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಜನವರಿ 21ಕ್ಕೆ ಮದ್ರಾಸ್ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಇದರ ವಿಚಾರಣೆ ನಡೆದು, ಅಂತಿಮ ತೀರ್ಪು ಯಾವಾಗ ಬರಲಿದೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಇದರಿಂದಾಗಿ ನಿರ್ಮಾಣ ಸಂಸ್ಥೆಗೆ ಸಾಕಷ್ಟು ನಷ್ಟ ಆಗಲಿದೆ. ‘ಜನ ನಾಯಗನ್’ ಬಿಡುಗಡೆ ದಿನಾಂಕ ಅನಿಶ್ವಿತ ಆಗಿರುವುದರಿಂದ ಇನ್ನುಳಿದ ಸಿನಿಮಾ ಮೇಲೂ ಇದು ಪರಿಣಾಮ ಬೀರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ