AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಿಯೋ’ ಬಿಡುಗಡೆ ಆಗುವ ಮುನ್ನವೇ ಹೊಸ ಸಿನಿಮಾ ಪ್ರಾರಂಭಿಸುತ್ತಿರುವ ವಿಜಯ್

Thalapathy Vijay: ದಳಪತಿ ವಿಜಯ್ ನಟನೆಯ 'ಲಿಯೋ' ಸಿನಿಮಾ ಬಿಡುಗಡೆ ಆಗಲು ಕೆಲವೇ ದಿನ ಬಾಕಿ ಇದೆ. ಆದರೆ 'ಲಿಯೋ' ಬಿಡುಗಡೆ ಆಗುವ ಮುನ್ನವೇ ವಿಜಯ್ ಹೊಸ ಸಿನಿಮಾದ ಚಿತ್ರೀಕರಣ ಆರಂಭಿಸಲಿದ್ದಾರೆ.

'ಲಿಯೋ' ಬಿಡುಗಡೆ ಆಗುವ ಮುನ್ನವೇ ಹೊಸ ಸಿನಿಮಾ ಪ್ರಾರಂಭಿಸುತ್ತಿರುವ ವಿಜಯ್
ವಿಜಯ್
ಮಂಜುನಾಥ ಸಿ.
|

Updated on: Sep 26, 2023 | 8:12 PM

Share

ಕಾಲಿವುಡ್​ನಲ್ಲಿ ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಂ’, ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿವೆ. ಈ ಎರಡೂ ಸಿನಿಮಾಗಳ ಬಳಿಕ ಎಲ್ಲರ ಕಣ್ಣು ವಿಜಯ್ ನಟನೆಯ ‘ಲಿಯೋ’ ಸಿನಿಮಾದ ಮೇಲೆ ನೆಟ್ಟಿದೆ. ‘ಲಿಯೋ’ ಸಿನಿಮಾ ಬಿಡುಗಡೆ ಕೆಲವೇ ದಿನಗಳು ಬಾಕಿ ಇವೆ. ಆದರೆ ‘ಲಿಯೋ’ ಸಿನಿಮಾ ಬಿಡುಗಡೆಗೆ ಮುನ್ನವೇ ವಿಜಯ್ ತಮ್ಮ ಹೊಸ ಸಿನಿಮಾ ಚಿತ್ರೀಕರಣ ಪ್ರಾರಂಭಿಸಿದ್ದಾರೆ.

ಹೌದು, ವಿಜಯ್ ನಟನೆಯ 68ನೇ ಸಿನಿಮಾದ ಚಿತ್ರೀಕರಣ ಅಕ್ಟೋಬರ್ ಮೊದಲ ವಾರದಲ್ಲೇ ಪ್ರಾರಂಭವಾಗಲಿದೆ. ಅದರಲ್ಲಿಯೂ ಗಾಂಧಿ ಜಯಂತಿಯಂದು ಸಿನಿಮಾ ಚಿತ್ರೀಕರಣ ಮೊದಲ ಕ್ಲ್ಯಾಪ್ ಹೊಡೆಯಲು ಚಿತ್ರತಂಡ ರೆಡಿಯಾಗಿದೆ. ‘ಲಿಯೋ’ ಬಿಡುಗಡೆಗೆ ಮುನ್ನವೇ ಹೊಸ ಸಿನಿಮಾ ಶುರು ಮಾಡಿರುವುದು ವಿಜಯ್ ಅಭಿಮಾನಿಗಳ ಗೊಂದಲಕ್ಕೂ ಕಾರಣವಾಗಿದೆ.

‘ಲಿಯೋ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ವಿಜಯ್ ನಿರತರಾಗಲಿದ್ದಾರೆ ಎಂಬ ನಿರೀಕ್ಷೆ ಅಭಿಮಾನಿಗಳಿಗಿತ್ತು. ಆದರೆ ವಿಜಯ್ ಪ್ರಚಾರದ ಕಡೆ ತಲೆ ಕೆಡಿಸಿಕೊಳ್ಳದೆ ಏಕಾ-ಏಕಿ ಹೊಸ ಸಿನಿಮಾದ ಚಿತ್ರೀಕರಣಕ್ಕೆ ಇಳಿದಿದ್ದಾರೆ. ‘ಲಿಯೋ’ ಸಿನಿಮಾದ ಟ್ರೈಲರ್ ಲಾಂಚ್ ಕೆಲವೇ ದಿನಗಳಲ್ಲಿ ಆಗಲಿದ್ದು, ಆ ಒಂದು ಕಾರ್ಯಕ್ರಮದಲ್ಲಿ ಮಾತ್ರವೇ ವಿಜಯ್ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಪುಷ್ಪಕ ವಿಮಾನ’ ರೀ-ರಿಲೀಸ್; ಮಾಹಿತಿ ಕೊಟ್ಟ ನಟ ಕಮಲ್ ಹಾಸನ್

ವಿಜಯ್ ನಟನೆಯ 68ನೇ ಸಿನಿಮಾವನ್ನು ತಮಿಳಿನ ಜನಪ್ರಿಯ ಸಿನಿಮಾ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ. ವಿಜಯ್​ರ ಈ ಹಿಂದಿನ ಸಿನಿಮಾಗಳ ಮಾದರಿಯಲ್ಲಿಯೇ ಇದು ಸಹ ಆಕ್ಷನ್ ಕತೆಯನ್ನು ಹೊಂದಿರಲಿದೆ. ಸಿನಿಮಾಕ್ಕೆ ಯುವನ್ ಶಂಕರ್ ರಾಜ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ವಿಜಯ್​ರ ಹೊಸ ಸಿನಿಮಾದಲ್ಲಿ ಎಸ್​ಜೆ ಸೂರ್ಯ ಸಹ ಮುಖ್ಯ ಪಾತ್ರದಲ್ಲಿ ಇರಲಿದ್ದಾರೆ ಎನ್ನಲಾಗಿದ್ದು, ಎಸ್​ಜೆ ಸೂರ್ಯ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟನೆ ಇಲ್ಲ. ಇದೇ ಸಿನಿಮಾದಲ್ಲಿ ನಟ ಪ್ರಭುದೇವ ಸಹ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾಕ್ಕೆ ಅನ್ಬರವಿ ಆಕ್ಷನ್ ದೃಶ್ಯಗಳ ನಿರ್ದೇಶನ ಮಾಡಲಿದ್ದಾರೆ. ವಿಜಯ್​ರ ‘ಲಿಯೋ’ ಸಿನಿಮಾಕ್ಕೂ ಇವರದ್ದೇ ಫೈಟ್ ಕೊರಿಯೋಗ್ರಫಿ.

‘ಲಿಯೋ’ ಸಿನಿಮಾದ ವಿಷಯಕ್ಕೆ ಮರಳುವುದಾದರೆ, ಸಿನಿಮಾ ಅಕ್ಟೋಬರ್ 19ಕ್ಕೆ ತೆರೆಗೆ ಬರಲಿದೆ. ಸಿನಿಮಾವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಸಂಜಯ್ ದತ್ ವಿಲನ್. ತ್ರಿಷಾ ನಾಯಕಿ. 16 ವರ್ಷದ ಬಳಿಕ ವಿಜಯ್ ಹಾಗೂ ತ್ರಿಷಾ ಒಟ್ಟಿಗೆ ನಟಿಸುತ್ತಿದ್ದಾರೆ ಎನ್ನಲಾಗಿದೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ