ಕೊನೆ ಸಿನಿಮಾಕ್ಕೆ ಭಾರಿ ಸಂಭಾವನೆ ಪಡೆಯುತ್ತಿರುವ ದಳಪತಿ ವಿಜಯ್

Thalapathy: ದಳಪತಿ ವಿಜಯ್ ನಟಿಸಲಿರುವ ಕೊನೆಯ ಸಿನಿಮಾ ನಿನ್ನೆ ಘೋಷಣೆ ಆಗಿದೆ. ಸಿನಿಮಾವನ್ನು ಕನ್ನಡದ ನಿರ್ಮಾಣ ಸಂಸ್ಥೆ ನಿರ್ಮಿಸಲಿದೆ. ಆದರೆ ತಮ್ಮ ಕೊನೆಯ ಸಿನಿಮಾಕ್ಕೆ ಭಾರಿ ಸಂಭಾವನೆಯನ್ನು ವಿಜಯ್ ಪಡೆಯಲಿದ್ದಾರೆ.

ಕೊನೆ ಸಿನಿಮಾಕ್ಕೆ ಭಾರಿ ಸಂಭಾವನೆ ಪಡೆಯುತ್ತಿರುವ ದಳಪತಿ ವಿಜಯ್
ದಳಪತಿ ವಿಜಯ್
Follow us
ಮಂಜುನಾಥ ಸಿ.
|

Updated on: Sep 14, 2024 | 4:58 PM

ಭಾರತದಲ್ಲಿ ಸಿನಿಮಾ ಒಂದಕ್ಕೆ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಸಹ ಒಬ್ಬರು. ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿರುವ ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿ ಮಾಡುವವರ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ದೊಡ್ಡ ಬಾಲಿವುಡ್ ಸ್ಟಾರ್​ಗಳನ್ನು ಮೀರಿಸಿ ಎರಡನೇ ಸ್ಥಾನದಲ್ಲಿದ್ದಾರೆ ದಳಪತಿ ವಿಜಯ್. ಇದೀಗ ರಾಜಕೀಯಕ್ಕೆ ಪ್ರವೇಶಿಸಲಿರುವ ವಿಜಯ್, ಸಿನಿಮಾಗಳಲ್ಲಿ ನಟಿಸದಿರಲು ನಿರ್ಧರಿಸಿದ್ದಾರೆ. ನಿನ್ನೆಯಷ್ಟೆ ಅವರು ತಮ್ಮ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಸಿನಿಮಾಕ್ಕೆ ಅವರು ಭಾರಿ ಮೊತ್ತದ ಸಂಭಾವನೆ ಪಡೆಯಲಿದ್ದಾರೆ.

ವಿಜಯ್​ರ 69ನೇ ಸಿನಿಮಾ ನಿನ್ನೆಯಷ್ಟೆ ಘೋಷಣೆ ಆಗಿದೆ. ಈ ಸಿನಿಮಾ ವಿಜಯ್​ರ ಕೊನೆಯ ಸಿನಿಮಾ ಆಗಿರಲಿದೆ. ಈ ಸಿನಿಮಾವನ್ನು ಕನ್ನಡದ ಕೆವಿಎಂ ನಿರ್ಮಾಣ ಸಂಸ್ಥೆ ನಿರ್ಮಾಣ ಮಾಡಲಿದೆ. ಇದೇ ಅವರ ಕೊನೆಯ ಸಿನಿಮಾ ಎಂದು ಅಧಿಕೃತವಾಗಿ ಘೋಷಣೆ ಸಹ ಆಗಿದೆ. ಈ ಸಿನಿಮಾ ಅವರ ಅಭಿಮಾನಿಗಳ ಪಾಲಿಗೆ ಬಹಳ ವಿಶೇಷವಾದದ್ದಾಗಿದ್ದು, ಸಿನಿಮಾಕ್ಕಾಗಿ ವಿಜಯ್ ಸಹ ಭಾರಿ ದೊಡ್ಡ ಮೊತ್ತವನ್ನು ಸಂಭಾವನೆಯಾಗಿ ಪಡೆಯಲಿದ್ದಾರೆ.

ಇದನ್ನೂ ಓದಿ:‘Thalapathy 69’ ವಿಜಯ್ ಕೊನೆಯ ಸಿನಿಮಾ; ಖಚಿತಪಡಿಸಿದ ಕೆವಿಎನ್ ಸಂಸ್ಥೆ

ವಿಜಯ್, ತಮ್ಮ 69ನೇ ಸಿನಿಮಾಕ್ಕಾಗಿ 275 ಕೋಟಿ ರೂಪಾಯಿ ಸಂಭಾವನೆಯನ್ನು ನಿರ್ಮಾಣ ಸಂಸ್ಥೆಯಿಂದ ಪಡೆಯಲಿದ್ದಾರೆ. ಭಾರತದಲ್ಲಿ ಈವರೆಗೆ ಇನ್ಯಾವ ನಟರೂ ಸಹ ಇಷ್ಟು ದೊಡ್ಡ ಸಂಭಾವನೆಯನ್ನು ಪಡೆದಿಲ್ಲ ಎನ್ನಲಾಗುತ್ತಿದೆ. ಪ್ರಭಾಸ್​, ದಕ್ಷಿಣ ಭಾರತದ ಅತಿ ದೊಡ್ಡ ಸ್ಟಾರ್ ಎಂದೆಲ್ಲ ಹೇಳಲಾಗುತ್ತದೆ. ಆದರೆ ಪ್ರಭಾಸ್ ಸಹ, ವಿಜಯ್​ ಪಡೆಯುವಷ್ಟೆ ಸಂಭಾವನೆಯನ್ನು ಒಂದು ಸಿನಿಮಾಕ್ಕಾಗಿ ಪಡೆಯುವುದಿಲ್ಲ.

ಕೆಲ ವಾರಗಳ ಹಿಂದಷ್ಟೆ, ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ವ್ಯಕ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯ್ತು. ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ಸಿನಿಮಾ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ದಳಪತಿ ವಿಜಯ್ ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಬಾದ್​ ಶಾ ಶಾರುಖ್ ಖಾನ್ ಇದ್ದಾರೆ. ಮೂರನೇ ಸ್ಥಾನದಲ್ಲಿ ಸಲ್ಮಾನ್ ಖಾನ್ ಇದ್ದಾರೆ. ಸಲ್ಮಾನ್​ ಖಾನ್​ಗಿಂತಳೂ ಹೆಚ್ಚು ಸಂಭಾವನೆಯನ್ನು ವಿಜಯ್ ತೆಗೆದುಕೊಳ್ಳುತ್ತಾರೆ ಎನ್ನಲಾಗುತ್ತದೆ. ಶಾರುಖ್ ಖಾನ್ ಹೆಚ್ಚು ಸಂಭಾವನೆ ಪಡೆಯುತ್ತಾರಾದರೂ ಅವರು ಸಾಮಾನ್ಯವಾಗಿ ವರ್ಷಕ್ಕೆ ಒಂದೇ ಸಿನಿಮಾ ಮಾಡುತ್ತಾರೆ. ಆದರೆ ವಿಜಯ್ ವರ್ಷಕ್ಕೆ ಕನಿಷ್ಟ ಎರಡಾದರೂ ಸಿನಿಮಾ ಮಾಡುತ್ತಾರೆ. ಒಮ್ಮೊಮ್ಮೆ ಮೂರು ಸಿನಿಮಾ ಮಾಡಿದ್ದೂ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!