ಪವರ್ ತೋರಿಸಿದ ದಳಪತಿ ವಿಜಯ್; ರಾಜಕೀಯ ರ‍್ಯಾಲಿಯಲ್ಲಿ ಐದು ಲಕ್ಷ ಮಂದಿ

ವಿಜಯ್ ಅವರ ವೃತ್ತಿ ಜೀವನ ಉತ್ತುಂಗದಲ್ಲಿ ಇದೆ. ಅವರು ಪ್ರತಿ ಸಿನಿಮಾಗೆ ನೂರಾರು ಕೋಟಿ ರೂಪಾಯಿ ಪಡೆಯುತ್ತಾರೆ. ಹೀಗಿರುವಾಗಲೇ ಅವರು ಚಿತ್ರರಂಗ ತೊರೆಯುವ ನಿರ್ಧಾರ ಮಾಡಿದರು. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಪವರ್ ತೋರಿಸಿದ ದಳಪತಿ ವಿಜಯ್; ರಾಜಕೀಯ ರ‍್ಯಾಲಿಯಲ್ಲಿ ಐದು ಲಕ್ಷ ಮಂದಿ
ವಿಜಯ್
Follow us
|

Updated on:Oct 28, 2024 | 9:17 AM

ದಳಪತಿ ವಿಜಯ್ ಅವರು ಸಿನಿಮಾ ರಂಗ ತೊರೆಯಲು ರೆಡಿ ಆಗಿದ್ದಾರೆ. ಅವರು ‘ತಮಿಳಗ ವೆಟ್ರಿ ಕಳಗಮ್’ (ಟಿವಿಕೆ) ಪಕ್ಷ ಲಾಂಚ್ ಮಾಡಿದ್ದು ರ‍್ಯಾಲಿ ನಡೆಸಿದ್ದಾರೆ. ಇದು ಪಕ್ಷದ ಮೊದಲ ರ‍್ಯಾಲಿ ಆಗಿತ್ತು. ಈ ರ‍್ಯಾಲಿಯಲ್ಲಿ ಲಕ್ಷಾಂತರ ಮಂದಿ ಆಗಮಿಸಿದ್ದರು. ಅವರ ಎದುರು ವಿಜಯ್ ಅವರು ಮಾತನಾಡಿದ್ದಾರೆ. ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅವರು ಈ ರ‍್ಯಾಲಿ ಮೂಲಕ ತಮ್ಮ ಪವರ್ ತೋರಿಸಿದ್ದಾರೆ.

ವಿಜಯ್ ಅವರ ವೃತ್ತಿ ಜೀವನ ಉತ್ತುಂಗದಲ್ಲಿ ಇದೆ. ಅವರು ಪ್ರತಿ ಸಿನಿಮಾಗೆ ನೂರಾರು ಕೋಟಿ ರೂಪಾಯಿ ಪಡೆಯುತ್ತಾರೆ. ಹೀಗಿರುವಾಗಲೇ ಅವರು ಚಿತ್ರರಂಗ ತೊರೆಯುವ ನಿರ್ಧಾರ ಮಾಡಿದರು. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ನಾನು ನನ್ನ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ತೊರೆದೆ. ನನ್ನ ಸಂಪಾದನೆ ತೊರೆದೆ. ನಿಮ್ಮ ವಿಜಯ್ ಆಗಿ ಇಲ್ಲಿದ್ದೇನೆ. ನಿಮ್ಮನ್ನು ನಂಬಿ ಬಂದಿದ್ದೇನೆ’ ಎಂದರು ಅವರು.

ವಿಜಯ್ ಅವರು ಏಕೆ ಯಾರ ಹೆಸರನ್ನೂ ತೆಗೆದುಕೊಳ್ಳುವುದಿಲ್ಲ? ಯಾರ ವಿರುದ್ಧವೂ ಅವರು ಏಕೆ ಪ್ರಶ್ನೆ ಮಾಡುವುದಿಲ್ಲ ಎಂದು ಅನೇಕರು ಕೇಳಿದ್ದರಂತೆ. ಇದಕ್ಕೆ ವಿಜಯ್ ಉತ್ತರ ನೀಡಿದ್ದಾರೆ. ‘ವಿಜಯ್ ಯಾರ ಹೆಸರನ್ನು ಏಕೆ ತೆಗೆದುಕೊಂಡು ಮಾತನಾಡುವುದಿಲ್ಲ? ನನಗೇನು ಭಯವೇ ಎಂದು ಅನೇಕರು ಕೇಳುತ್ತಾರೆ. ಯಾರ ಹೆಸರು ಹೇಳಿ ರಾಜಕೀಯ ಮಾಡಲು ಬಂದಿಲ್ಲ. ಮರ್ಯಾದೆ ಇಲ್ಲದೆ ಮಾತನಾಡಲು ನಾನು ಬಂದಿಲ್ಲ. ಡಿಸೆಂಟ್ ಆಗಿ ಮಾತನಾಡುತ್ತೇವೆ, ಡಿಸೆಂಟ್ ಆಗಿ ಅಪ್ರೋಚ್ ಮಾಡುತ್ತೇವೆ’ ಎಂದರು.

ಇದನ್ನೂ ಓದಿ: ದಳಪತಿ ವಿಜಯ್ ಕೊನೆಯ ಸಿನಿಮಾದ ಮುಹೂರ್ತ: ಇಲ್ಲಿವೆ ಚಿತ್ರಗಳು

ಚೆನ್ನೈನಿಂದ ನೂರು ಕಿಲೋ ಮೀಟರ್ ದೂರದಲ್ಲಿರುವ ವಿಲ್ಲುಪುರಂನಲ್ಲಿ ಈ ರ‍್ಯಾಲಿ ನಡೆದಿದೆ. ಸುಮಾರು ಐದರಿಂದ ಆರು ಲಕ್ಷ ಮಂದಿ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ರ‍್ಯಾಲಿ ನಡೆದ ಜಾಗದಲ್ಲಿ ಭರ್ಜರಿ ಟ್ರಾಫಿಕ್ ಜಾಮ್ ಆಗಿತ್ತು. ತಡರಾತ್ರಿವರೆಗೂ ಟ್ರಾಫಿಕ್ ಹಾಗೆಯೇ ಇತ್ತು.

ಸದ್ಯ ವಿಜಯ್ ಅವರು ತಮ್ಮ ಕೊನೆಯ ಸಿನಿಮಾ ‘ದಳಪತಿ 69’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಕನ್ನಡದ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡುತ್ತಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:14 am, Mon, 28 October 24

ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು
ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪಟಾಕಿ ಹೊಡೆಯುತ್ತಿದ್ದ ವ್ಯಕ್ತಿ ಸಾವು
ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೋದಿ ಮೊದಲ ರ್ಯಾಲಿ
ಚುನಾವಣೆಗೆ ಸಜ್ಜಾದ ಜಾರ್ಖಂಡ್​ನಲ್ಲಿ ಪ್ರಧಾನಿ ಮೋದಿ ಮೊದಲ ರ್ಯಾಲಿ
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಒಂದು ಗುಂಪು ಅದ್ಯಾಕೆ ಗಲಾಟೆ ಮಾಡಿತೋ!
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಒಂದು ಗುಂಪು ಅದ್ಯಾಕೆ ಗಲಾಟೆ ಮಾಡಿತೋ!
ಟೀಂ ಇಂಡಿಯಾದ ಜಿಕೆ ಟೆಸ್ಟ್! ಯಾರು ಎಷ್ಟು ಬುದ್ಧಿವಂತರು ನೀವೇ ನೋಡಿ
ಟೀಂ ಇಂಡಿಯಾದ ಜಿಕೆ ಟೆಸ್ಟ್! ಯಾರು ಎಷ್ಟು ಬುದ್ಧಿವಂತರು ನೀವೇ ನೋಡಿ
ಜನಾರ್ಧನರೆಡ್ಡಿ ಪಕ್ಷಕ್ಕೆ ಸೇರ್ಪಡೆ ನಂತರ ಬಳ್ಳಾರಿ ಬಿಜೆಪಿಯಲ್ಲಿ ಲವಲವಿಕೆ
ಜನಾರ್ಧನರೆಡ್ಡಿ ಪಕ್ಷಕ್ಕೆ ಸೇರ್ಪಡೆ ನಂತರ ಬಳ್ಳಾರಿ ಬಿಜೆಪಿಯಲ್ಲಿ ಲವಲವಿಕೆ